ಉತ್ತಮ ಸಮಾಜಕ್ಕಾಗಿ

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018 ಜನಾಂದೋಲನಕ್ಕೆ ಕೈಜೋಡಿಸಿ

Join the Clean Surveyive Rural -2018 Campaign

0

ಬೆಳಗಾವಿ: (news belagaviರಾಷ್ಟ್ರೀಯ ತೋಟಗಾರಿಕೆ ಗ್ರಾಮೀಣ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ಸ್ವಚ್ಛ ಭಾರತ ಮಿಷನ್ ಯೋಜನೆಯಡಿ “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018” ಜನಾಂದೋಲನ ಕಾರ್ಯಕ್ರಮಕ್ಕೆ ಜುಲೈ 13 ರಂದು ನವದೆಹಲಿಯಲ್ಲಿ ಚಾಲನೆ ನೀಡಿದೆ.

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018 ಜನಾಂದೋಲನಕ್ಕೆ ಕೈಜೋಡಿಸಿ- Tarun kranti
ಬೃಹತ ಪ್ರಮಾಣದಲ್ಲಿ ನಾಗರೀಕರು ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುವುದು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶುಚಿತ್ವ ಸ್ವಚ್ಛತೆ ಹಾಗೂ ನೈರ್ಮಲ್ಯದ ಮಹತ್ವದ ಬಗ್ಗೆ ಗ್ರಾಮೀಣ ಸಮುದಾಯದಲ್ಲಿ ಅರಿವು ಮೂಡಿಸುವುದು ಈ ಸರ್ವೇಕ್ಷಣೆಯ ಉದ್ದೇಶವಾಗಿದೆ.                                                                                                                                     ಸಾರ್ವಜನಿಕ ಸ್ಥಳಗಳ ಸಮೀಕ್ಷೆ, ಸಮುದಾಯದಲ್ಲಿನ ಸ್ವಚ್ಛತೆಯ ದೃಷ್ಟಿಕೋನ, ಅವರ ಶಿಪಾರಸ್ಸುಗಳು ಮತ್ತು ಸ್ವಚ್ಛ ಭಾರತ ಮಿಷನ್ (ಗ್ರಾ) ಆಯ್.ಎಂ.ಐ.ಎಸ್‍ನಲ್ಲಿ ಜಿಯೋ ಟ್ಯಾಗ್ ಫೋಟೋ ಆರೋಹಿಸಿರುವುದು, ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳ ಘೋಷಣೆ ಮತ್ತು ಪರಿಶೀಲನೆ ಪಡೆದ ಪ್ರಗತಿ ವರದಿ ಹಾಗೂ ನೈರ್ಮಲ್ಯ, ಸಮಗ್ರ ಶುಚಿತ್ವದ ನಿಯತಾಂಕಗಳನ್ನು ಗಣನೆಗೆ ತೆಗೆದುಕೊಂಡು ಜಿಲ್ಲೆ ಮತ್ತು ರಾಜ್ಯಗಳಿಗೆ ಶ್ರೇಯಾಂಕಗಳನ್ನು ನೀಡಲಾಗುತ್ತದೆ. ಉತ್ತಮ ಶೇಣಿ ಪಡೆದ ರಾಜ್ಯ ಮತ್ತು ಜಿಲ್ಲೆಗಳಿಗೆ
ಅಕ್ಟೋಬರ್ 02 ರಂದು ನವದೆಹಲಿಯಲ್ಲಿ ನಡೆಯುವ ಗಾಂಧಿ ಜಯಂತಿ ದಿನದಂದು ಕೇಂದ್ರ ಸರ್ಕಾರವು ಪುರಸ್ಕಾರ ನೀಡಿ ಗೌರವಿಸಲಿದೆ.
ದೇಶಾದ್ಯಂತ 698 ಜಿಲ್ಲೆಗಳು, 6980 ಗ್ರಾಮಗಳು, 34,900 ಸಾರ್ವಜನಿಕ ಸ್ಥಳಗಳು ಹಾಗೂ 1,74,500 ಲಕ್ಷ ನಾಗರಿಕರ ಸಂದರ್ಶನ ಮತ್ತು ಅವರ ಅಭಿಪ್ರಾಯಗಳನ್ನು ಪಡೆಯುವುದು ಈ ಸರ್ವೇಕ್ಷಣ ಮುಖ್ಯ ಉದ್ದೇಶವಾಗಿದೆ.
ಈ ಸಮೀಕ್ಷೆಯನ್ನು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ನೇಮಿಸಿರುವ ಖಾಸಗಿ ಸಂಸ್ಥೆಗಳು
ಮತ್ತು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಪ್ರಾಯೋಜಕತ್ವದ ಸಂಸ್ಥೆಗಳು ನಡೆಸುತ್ತವೆ.
ಈ ಸಮೀಕ್ಷೆಯನ್ನು ಈ ಮಾನದಂಡಗಳ ಮುಖಾಂತರ ನಡೆಸಲಾಗುವುದು. ಸ್ವಚ್ಛತೆ ಬಗ್ಗೆ ನೇರ ವೀಕ್ಷಣೆ ಸಾರ್ವಜನಿಕ
ಸ್ಥಳಗಳಾದ ಶಾಲೆ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಂತೆ, ಬಸ್ ನಿಲ್ದಾಣ ಮತ್ತು ಧಾರ್ಮಿಕ ಸ್ಥಳಗಳು ಸೇರಿದಂತೆ ಎಲ್ಲಾ
ಸಾರ್ವಜನಿಕ ಸ್ಥಳಗಳ ನೇರ ಪರಿವೀಕ್ಷಣೆಗೆ ಶೇ.30 ರಷ್ಟು ಅಂಕಗಳು ನಿಗದಿಪಡಿಸಿದ್ದಾರೆ.                                                                   ಯೋಜನೆ ದತ್ತಾಂಶಗಳು (Service Level Progress) ಐ.ಎಂ.ಐ.ಎಸ್‍ನಲ್ಲಿ ಜಿಯೋ ಟ್ಯಾಗ್ ಫೋಟೋ ಆರೋಹಿಸಿರುವುದಕ್ಕೆ ಶೇ.35 ಅಂಕಗಳು ನಿಗದಿಪಡಿಸಿದ್ದು ಮತ್ತು ನಾಗರೀಕರು ನೀಡುವ ಮಾಹಿತಿಯ ಆಧಾರದಲ್ಲಿ ಅಂಕಿ ಅಂಶಗಳ ಸಂಗ್ರಹಣೆಗೆ ಶೇ.35 ಅಂಕಗಳನ್ನು ನಿಗದಿಪಡಿಸಿದ್ದಾರೆ.
“ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018”ಕ್ಕೆ ಬೆಳಗಾವಿ ಜಿಲ್ಲೆಯ ಎಲ್ಲ ನಾಗರಿಕರು ಕೈಜೋಡಿಸಬೆಕೆಂದು ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್. ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.