ಉತ್ತಮ ಸಮಾಜಕ್ಕಾಗಿ

ಅಭಿನಂದನಾ ಕಾರ್ಯಕ್ರಮ ನದಿಗಳ ಉಳಿವಿಗೆ ಕೈಜೋಡಿಸಿ: ಸಿಇಒ ರಾಮಚಂದ್ರನ್

Join the survival of the rivers' conquests: CEO Ramachandran

0

ಬೆಳಗಾವಿ: (news belgaum)ವಿವಿಧ ಬಗೆಯ ತ್ಯಾಜ್ಯಗಳಿಂದ ನದಿಯ ನೀರು ಮಲೀನವಾಗುತ್ತಿದ್ದು, ನಗರೀಕರಣದಿಂದ ನದಿಗಳು ಮುಚ್ಚುವ ಹಂತಕ್ಕೆ ತಲುಪಿವೆ. ಆದ್ದರಿಂದ ನದಿಗಳ ಉಳಿವಿಗೆ ನಾವೆಲ್ಲರೂ ಕೈಜೋಡಿಸಬೇಕಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್.ಆರ್ ಅವರು ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ (ಮೇ 21) ಹಮ್ಮಿಕೊಂಡಿದ್ದ ಬೆಳಗಾವಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ ಹಾಗೂ ಮಾರ್ಕಂಡೇಯ ನದಿ ಪುನಶ್ಚೇತನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕೂಲಿ, ಕಾರ್ಮಿಕರಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನದಿಗಳು ಎಲ್ಲೆಲ್ಲಿ ಹರಿಯುತ್ತವೆಯೋ ಅಲ್ಲಿ ವನ್ಯಸಂಪತ್ತು, ಪ್ರಾಣಿ, ಪಕ್ಷಿ ಸಂಕುಲ ಉತ್ತಮವಾಗಿರುತ್ತದೆ. ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕೆ ಪ್ರತಿಯೊಬ್ಬರೂ ಪರಿಸರದ ಮೇಲೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದು ಹೇಳಿದರು.
ಮುಚ್ಚಿ ಹೋಗುವ ಹಂತಕ್ಕೆ ಬಂದಿದ್ದ ಮಾರ್ಕಂಡೇಯ ನದಿಯನ್ನು ನರೇಗಾ ಯೋಜನೆಯಡಿ ಹೂಳೆತ್ತುವ ಮೂಲಕ ಪುನಶ್ಚೇತನಗೊಳಿಸಲಾಗಿದ್ದು, ಈ ಕಾಮಗಾರಿ ಸಂಪೂರ್ಣವಾಗಿ ಮುಗಿದಿದೆ. ಮಾರ್ಕಂಡೇಯ ನದಿಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕೂಲಿ, ಕಾರ್ಮಿಕರ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.Auto Draft- Tarun kranti 37
ನರೇಗಾ ಯೋಜನೆಯಡಿ ಮಾರ್ಕಂಡೇಯ ನದಿಯ ಪುನಶ್ಚೇತನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಯಶಸ್ವಿಗೊಳಿಸಿರುವುದಕ್ಕೆ ಜಿಲ್ಲೆಗೆ 2016-17ನೇ ಸಾಲಿನ ರಾಷ್ಟ್ರಮಟ್ಟದ ‘ಎಪೆಕ್ಟಿವ್ ಇಂಪ್ಲಿಮೆಂಟೇಶನ್ ಆಪ್ ಎಂ.ಜಿ.ಎನ್.ಆರ್.ಇ.ಜಿ.ಎಸ್’ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಇದಕ್ಕೆ ಪುನಶ್ಚೇತನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕೂಲಿ, ಕಾರ್ಮಿಕರ ಶ್ರಮವೇ ಕಾರಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಮರೇಶ ನಾಯಕ ಅವರು ಮಾತನಾಡಿ, ನದಿಗಳನ್ನು ಪುನಶ್ಚೇತನಗೊಳಿಸುವುದು ಹಾಗೂ ಗಿಡ, ಮರಗಳನ್ನು ಬೆಳೆಸುವುದು ಉತ್ತಮ ಕಾರ್ಯವಾಗಿದೆ. ನರೇಗಾ ಯೋಜನೆಯಡಿ ಕೈಗೊಳ್ಳುತ್ತಿರುವ ಉತ್ತಮ ಕಾರ್ಯಕ್ರಮಗಳಲ್ಲಿ ಇದು ಒಂದಾಗಿದೆ ಎಂದು ಹೇಳಿದರು.
ವಿವಿಧ ಯೋಜನೆಗಳಡಿ ಕಾರ್ಯನಿರ್ವಹಿಸುವ ಸರ್ಕಾರಿ ಸಿಬ್ಬಂದಿಯನ್ನು ಹಿರಿಯ ಅಧಿಕಾರಿಗಳು ಅಭಿನಂದಿಸುವುದು ಅಪರೂಪ. ಸಿಇಒ ರಾಮಚಂದ್ರನ್ ಅವರು ಅಧಿಕಾರಿಗಳು, ಸಿಬ್ಬಂದಿ ಹಾಗೂ ಕೂಲಿ, ಕಾರ್ಮಿಕರನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಏರ್ಪಡಿಸಿರುವುದು ಶ್ಲಾಘನೀಯ ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ ಅವರು ಮಾತನಾಡಿ, ಕೇಂದ್ರ ಪರಿಸರ ಸಚಿವಾಲಯ ಈ ವರ್ಷ ನದಿಗಳನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ದಿನವನ್ನು ಆಚರಿಸಲು ಇತ್ತೀಚೆಗೆ ನಿರ್ಧರಿಸಿದೆ. ಆದರೆ ಬೆಳಗಾವಿ ಜಿಲ್ಲಾ ಪಂಚಾಯತ ವತಿಯಿಂದ ಈ ಹಿಂದೆಯೇ ಜಿಲ್ಲೆಯಲ್ಲಿನ ಮಾರ್ಕಂಡೇಯ ನದಿಯನ್ನು ಪುನಶ್ಚೇತನಗೊಳಿಸಲಾಗಿದ್ದು, ಕೆಲ ದಿನಗಳ ಹಿಂದೆ ಹಿರಣ್ಯಕೇಶಿ ನದಿಯ ಹೂಳೆತ್ತುವ ಕಾಮಗಾರಿಯನ್ನು ಕೂಡ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ಅಧಿಕಾರಿಗಳು, ಸಿಬ್ಬಂದಿಗೆ ಸನ್ಮಾನ:
ಮಾರ್ಕಂಡೇಯ ನದಿಯ ಪುನಶ್ಚೇತನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿವಿಧ ಗ್ರಾಮ ಪಂಚಾಯತಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಎಂಜಿನಿಯರ್‍ಗಳು, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್‍ಗಳು ಹಾಗೂ ಕೂಲಿ, ಕಾರ್ಮಿಕರಿಗೆ ಸಿಇಒ ರಾಮಚಂದ್ರನ್ ಹಾಗೂ ಹಿರಿಯ ಅಧಿಕಾರಿಗಳು ಅಭಿನಂದನಾ ಪತ್ರ ಮತ್ತು ಖಾದಿ ಬಟ್ಟೆಯ ಕರವಸ್ತ್ರಗಳನ್ನು ನೀಡಿ ಸನ್ಮಾನಿಸಿದರು.
ಬೆಳಗಾವಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ. ಪಾಟೀಲ, ತಾಲೂಕು ಪಂಚಾಯತ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಕಲಾದಗಿ, ಎಡಿಪಿಸಿ ಬಸವರಾಜ.ಎನ್, ಪ್ರಮೋದ ಗೋಡೆಕರ್ ಉಪಸ್ಥಿತರಿದ್ದರು.
ಬೆಳಗಾವಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಎಂಜಿನಿಯರ್‍ಗಳು, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್, ಕೂಲಿ, ಕಾರ್ಮಿಕರು ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.Join the survival of the rivers’ conquests: CEO Ramachandran

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.