ಉತ್ತಮ ಸಮಾಜಕ್ಕಾಗಿ

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ವಿಮೆ ಕಂತ ಜು.31 ಕೊನೆಯ ದಿನ

June 31st last day for insurance installment of Prime Minister Phasal Bhima plan

0

ಬೆಳಗಾವಿ:  (news belagavi)  ಬೆಳಗಾವಿ ಜಿಲ್ಲೆಯಲ್ಲಿ 2018 ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯಡಿ ರೈತರ ನೋಂದಣೆ ಕಾರ್ಯ ಪ್ರಗತಿಯಲ್ಲಿದ್ದು, ಬೆಳೆ ಸಾಲ ಪಡೆಯದ ರೈತರು ತಮ್ಮ ವ್ಯಾಪ್ತಿಯಲ್ಲಿ ಬರುವ ಬ್ಯಾಂಕ, ಸಹಕಾರಿ ಸಂಘ ಶಾಖೆಗಳು ಜೊತೆಗೆ ಸಾಮಾನ್ಯ ಸೇವಾ ಕೇಂದ್ರಗಳಿಗೂ (common service center) ಸಹ ಭೇಟಿ ನೀಡಿ ತಮ್ಮ ತಾಲೂಕಿಗೆ ಅಧಿಸೂಚಿತ ಬೆಳೆಗಳಲ್ಲಿ ನಿರ್ಧಿಷ್ಟ ಬೆಳೆಗಳಿಗೆ ಸೂಚಿಸಿದ ವಿಮೆ ಕಂತನ್ನು ಪಾವತಿಸಿ ಬೆಳೆ ವಿಮೆ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ಪ್ರಸಕ್ತ ಹಂಗಾಮಿನಲ್ಲಿ ರೈತರು ಈ ಬೆಳೆ ವಿಮೆ ಯಜನೆಯಲ್ಲಿ ಪಾಲ್ಗೊಳ್ಳಲು ಹೆಸರು (ಮಳೆ ಆಶ್ರಿತ) ಬೆಳೆಗೆ ಜುಲೈ 16, 2018 ಹಾಗೂ ಉಳಿದ ಎಲ್ಲಾ ಅಧಿಸೂಚಿತ ಬೆಳೆಗಳಿಗೆ ಜುಲೈ 31, 2018 ಕೊನೆಯ ದಿನಾಂಕವಾಗಿರುತ್ತದೆ.

ರೈತ ಬಾಂಧವರು ಈಗಾಗಲೇ ತಮ್ಮ ವ್ಯಾಪ್ತಿಯಲ್ಲಿ ಬರತಕ್ಕಂತಹ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳಲ್ಲಿ ಬೆಳೆ ವಿಮೆ ನೋಂದಣಿ ಮಾಡುತ್ತಿದ್ದು, ಅದರ ಜೊತೆಗೆ ತಾಲೂಕುಗಳಲ್ಲಿ ರೈತರ ಅನುಕೂಲಕ್ಕಾಗಿ ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಕಾರಣ ಬ್ಯಾಂಕ, ಸಹಕಾರ ಸಂಘಗಳು ಅಲ್ಲದೇ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ತಮ್ಮ ಬೆಳೆ ವಿಮೆ ಕಂತನ್ನು ಪಾವತಿಸಬಹುದಾಗಿದೆ.

ತಮ್ಮ ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಮಾನ್ಯ ಸೇವಾ ಕೇಂದ್ರಗಳ ಹೆಚ್ಚಿನ ಮಾಹಿತಿಗಾಗಿ ಸಾಮಾನ್ಯ ಸೇವಾ ಕೇಂದ್ರಗಳ ಪ್ರತಿನಿಧಿಗಳಾದ ಪಂಚಾಕ್ಷರಿ ಈಳಿಗೇರ–7406602008 ಹಾಗೂ ಮಹಾಂತೇಶ ಹಾಲಗಿಮರಡಿ–9483523624 ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಗಳಾದ ಪರಶುರಾಮ–9591238940/ 8762630722, ವಿನಾಯಕ ಆರ್. ಪಾವಾಡಿ– 8660293948, ಕಿರಣ ಕೆ. ಲಮಾಣಿ–8861237255, ಕನಕಪ್ಪಾ-9901219963 ಹಾಗೂ ಸಮೀಪದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.