ಉತ್ತಮ ಸಮಾಜಕ್ಕಾಗಿ

ಕನ್ನಡ ಭವನ ಸಿಎಂ ಹಸ್ತದಿಂದ ಸೇವೆಗೆ

news belagavi

0

ಬೆಳಗಾವಿ:(news belgaum) ನಗರದ ನೆಹರೂ ನಗರ ಕನ್ನಡ ಭವನವನ್ನು ಮುಖ್ಯಮಂತ್ರಿ ಎಚ್. ಡಿ. News Belgaum-ಕನ್ನಡ ಭವನ ಸಿಎಂ ಹಸ್ತದಿಂದ ಸೇವೆಗೆ News Belgaum-ಕನ್ನಡ ಭವನ ಸಿಎಂ ಹಸ್ತದಿಂದ ಸೇವೆಗೆ 2ಕುಮಾರಸ್ವಾಮಿ ಇಂದು ಮಧ್ಯಾಹ್ನ ಉದ್ಘಾಟಿಸಿದರು. ಸಂಸದರಾದ ಸುರೇಶ ಅಂಗಡಿ, ಡಾ. ಪ್ರಭಾಕರ ಕೋರೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಸಚಿವ ರಮೇಶ ಜಾರಕಿಹೊಳಿ, ಶಾಸಕ ಸತೀಶ ಜಾರಕಿಹೊಳಿ, ಮಹಾಂತೇಷ ಕೌಜಲಗಿ ಇತರರು ಉಪಸ್ಥಿತರಿದ್ದರು.

 

ಕನ್ನಡ ಭವನ ಉದ್ಘಾಟನಾ ಸಮಾರಂಭ
ಮಹದಾಯಿ ನೀರನ್ನು ಸದುಪಯೋಗಿಸಿಕೊಳ್ಳಲು 15 ದಿನಗಳಲ್ಲಿ ರೂಪುರೇಷೆ;
– ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಳಗಾವಿ:  ಮಹದಾಯಿ ನೀರನ್ನು ಯಾವ ರೀತಿ ಸದುಪಯೋಗಿಸಿಕೊಳ್ಳಬೇಕೆಂಬ ಕುರಿತು ರಾಜ್ಯದ ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರೊಂದಿಗೆ ಈಗಾಗಲೇ ಸಭೆ ನಡೆಸಿ ಚರ್ಚಿಸಲಾಗಿದ್ದು, 15 ದಿನಗಳೊಳಗಾಗಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.
ಇಲ್ಲಿನ ನೆಹರು ನಗರದಲ್ಲಿ ಶನಿವಾರ (ಸೆ.15) ನೂತನವಾಗಿ ನಿರ್ಮಾಣಗೊಂಡ ಕನ್ನಡ ಭವನವನ್ನು ಲೋಕಾರ್ಪಣೆಗೊಳಿಸಿ, ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮಹದಾಯಿ ಹೋರಾಟಗಾರರ ಮೇಲಿನ ಕೇಸ್‍ಗಳನ್ನು ಶೀಘ್ರವೇ ಹಿಂಪಡೆಯಲಾಗುವುದು ಎಂದು ಹೇಳಿದರು.

ಬಾಕಿ ಕಾಮಗಾರಿಗೆ ರೂ. 1.5 ಕೋಟಿ ಬಿಡುಗಡೆ:
News Belgaum-ಕನ್ನಡ ಭವನ ಸಿಎಂ ಹಸ್ತದಿಂದ ಸೇವೆಗೆ 3 News Belgaum-ಕನ್ನಡ ಭವನ ಸಿಎಂ ಹಸ್ತದಿಂದ ಸೇವೆಗೆ 4ನೂತನವಾಗಿ ನಿರ್ಮಾಣವಾಗಿರುವ ಕನ್ನಡ ಭವನದಲ್ಲಿ ಇನ್ನೂ ಕೆಲವು ಕಾಮಗಾರಿಗಳು ಬಾಕಿಯಿದ್ದು, ಕಾಮಗಾರಿಗೆ ರೂ. 1.5 ಕೋಟಿ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡುವಂತೆ ಸಾಂಸ್ಕøತಿಕ ಕನ್ನಡ ಭವನ ಸಮಿತಿಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಶೀಘ್ರವೇ ರೂ. 1.5 ಕೋಟಿ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
2006 ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕನ್ನಡ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಇಂದು ಈ ಭವನವನ್ನು ತಾವೇ ಉದ್ಘಾಟಿಸುತ್ತಿರುವುದನ್ನು ಸ್ಮರಿಸಿ ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದರು. ಕನ್ನಡ ಭವನದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಲಾವಿದರು ಹಾಗೂ ಸಾರ್ವಜನಿಕರು ಭವನವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಸಾಲಮನ್ನಾದಿಂದ ಸರ್ಕಾರಕ್ಕೆ ತೊಂದರೆಯಿಲ್ಲ:
ಸರ್ಕಾರ ರೈತರ 45 ಸಾವಿರ ಕೋಟಿ ರೂ. ಸಾಲಮನ್ನಾ ಘೋಷಣೆ ಮಾಡಿದೆ. ಸಾಲಮನ್ನಾ ಮಾಡಿದ ಹಣಕ್ಕೂ ಇಲಾಖೆಗಳ ಕಾರ್ಯಕ್ರಮಗಳಿಗೆ ಮೀಸಲಿರಿಸಿರುವ ಹಣಕ್ಕೂ ಯಾವುದೇ ಸಂಬಂಧವಿಲ್ಲ. ಸಾಲಮನ್ನಾದಿಂದ ಸರ್ಕಾರದ ಯಾವುದೇ ಯೋಜನೆಗಳಿಗೆ ತೊಂದರೆಯಾಗಿಲ್ಲ. ಸರ್ಕಾರದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ರೈತರಿಗೆ ತೊಂದರೆ ನೀಡಬೇಡಿ:
ಕೆಲವು ಬ್ಯಾಂಕ್‍ನವರು ರೈತರಿಗೆ ಸಾಲ ಪಡೆದುಕೊಂಡ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ಬ್ಯಾಂಕ್‍ನವರು ರೈತರಿಗೆ ಹಣ ನೀಡುವಂತೆ ಕಿರುಕುಳ ನೀಡಬಾರದು ಎಂದು ಸೂಚನೆ ನೀಡಿದರು. ಸರ್ಕಾರದಿಂದ ಘೋಷಣೆ ಮಾಡಿರುವ ರಾಷ್ಟ್ರೀಕೃತ ಬ್ಯಾಂಕ್‍ಗಳ 35 ಸಾವಿರ ಕೋಟಿ ಸಾಲವನ್ನು 4 ವರ್ಷಗಳಲ್ಲಿ ಕಂತುಗಳ ಮೂಲಕ ಪೂರೈಸಬೇಕೆಂದು ಚರ್ಚೆ ಮಾಡಲಾಗಿತ್ತು. ಆದರೆ ಬರುವ ಜುಲೈನೊಳಗೆ ಎಲ್ಲ ಹಣವನ್ನು ಬ್ಯಾಂಕ್‍ಗಳಿಗೆ ನೀಡಲು ಕ್ರಮಕೈಗೊಳ್ಳಲಾಗುತ್ತಿದೆ. ಆದ್ದರಿಂದ ಬ್ಯಾಂಕ್‍ನವರು ಸರ್ಕಾರಕ್ಕೆ ಸಹಕಾರ ನೀಡಬೇಕೆಂದು ತಿಳಿಸಿದರು.

ಸುವರ್ಣಸೌಧಕ್ಕೆ ಇಲಾಖೆ ಸ್ಥಳಾಂತರ:
ಬೆಳಗಾವಿಯಲ್ಲಿ ವಿಧಾನಸಭೆಯ ಕಲಾಪಗಳು ನಡೆಬೇಕೆಂಬ ಉದ್ದೇಶದಿಂದ ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಪ್ರಥಮ ಬಾರಿಗೆ ಇಲ್ಲಿ ಕಲಾಪವನ್ನು ಏರ್ಪಡಿಸಿದ್ದೆ. ಸುವರ್ಣಸೌಧ ವರ್ಷದ 365 ದಿನವೂ ಕಾರ್ಯನಿರ್ವಹಿಸಬೇಕೆಂದು ನಾನು ಕೂಡ ಆಶಿಸುತ್ತಿದ್ದೇನೆ. ಈ ಬಗ್ಗೆ ಶೀಘ್ರ ಸರ್ಕಾರದ ಎಲ್ಲ ಪ್ರತಿನಿಧಿಗಳೊಂದಿಗೆ ಚರ್ಚಿಸಿ, ಇಲಾಖೆಗಳ ಸ್ಥಳಾಂತರ ಮಾಡಲಾಗುವುದೆಂದು ಕುಮಾರಸ್ವಾಮಿ ಅವರು ಹೇಳಿದರು.

ಉ.ಕ ಜಿಲ್ಲೆಗಳಲ್ಲಿ ಉತ್ಪಾದನೆಗೆ ಒತ್ತು:
ಬೆಳಗಾವಿ, ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಉತ್ಪಾದನಾ ವಲಯವನ್ನು ನಿರ್ಮಿಸಲು ಹೆಚ್ಚಿನ ಒತ್ತು ನೀಡಲಾಗುವುದು. ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಎಲ್ಲ ಜಿಲ್ಲೆಗಳ ಅಭಿವೃದ್ಧಿಗೂ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸರ್ಕಾರದ ಕುರಿತ ಅಪಪ್ರಚಾರಕ್ಕೆ ಯಾರು ಕೂಡ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಬೆಳಗಾವಿ ಜಿಲ್ಲೆಯ ಒಡನಾಟ ಸ್ಮರಿಸಿದ ಸಿಎಂ:
ಬೆಳಗಾವಿ ಜಿಲ್ಲೆಯಿಂದಲೇ 2006 ರಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಆರಂಭಿಸಿದ್ದೆ. ಈ ಹಿಂದೆ 20 ತಿಂಗಳು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 19 ಬಾರಿ ಬೆಳಗಾವಿಗೆ ಭೇಟಿ ನೀಡಿದ್ದೆ. ಇಲ್ಲಿಯೇ ವಿಧಾನಸಭೆ ಕಲಾಪಗಳನ್ನು ಆರಂಭಿಸಿದ್ದೆ. ಕನ್ನಡ ಭವನಕ್ಕೂ ಶಂಕುಸ್ಥಾಪನೆ ನೆರವೇರಿಸಿದ್ದೆ. ಬೆಳಗಾವಿ ಜಿಲ್ಲೆಯೊಂದಿಗೆ ಉತ್ತಮ ಒಡನಾಟವನ್ನು ಹೊಂದಿದ್ದು, ಅವಿನಾಭಾವ ಸಂಬಂಧವನ್ನು ಹೊಂದಿದ್ದೇನೆ ಎಂದು ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಸ್ಮರಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಾಂಸ್ಕøತಿಕ ಕನ್ನಡ ಭವನ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಪ್ರಭಾಕರ ಕೋರೆ ಅವರು, ಬೆಳಗಾವಿಯಲ್ಲಿ ಕನ್ನಡದ ಕಂಪು ಮತ್ತಷ್ಟು ಪಸರಿಸಲು ಕನ್ನಡ ಭವನ ಸಹಕಾರಿಯಾಗಲಿದೆ. ಕನ್ನಡ ಭವನದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳ ಪ್ರದರ್ಶನ, ಚಿತ್ರಕಲಾ ಪ್ರದರ್ಶನ, ಪುಸ್ತಕಗಳ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಇದನ್ನು ಎಲ್ಲರೂ ಸದುಪಯೋಗಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರತಿಯೊಂದು ಗ್ರಾಮಗಳಲ್ಲೂ ಕನ್ನಡ ಶಾಲೆಗಳು ಆರಂಭಗೊಳ್ಳುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಕನ್ನಡದ ನಾಡು, ನುಡಿ ಏಳ್ಗೆಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮನು ಬಳಿಗಾರ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು. ಸರ್ಕಾರದ ಮುಖ್ಯ ಸಚೇತಕರಾದ ಗಣೇಶ ಹುಕ್ಕೇರಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಸಂಸದರಾದ ಸುರೇಶ ಅಂಗಡಿ, ಪ್ರಕಾಶ ಹುಕ್ಕೇರಿ, ಮಹಾಪೌರರಾದ ಬಸಪ್ಪ ಚಿಕ್ಕಲದಿನ್ನಿ, ಉಪಮಹಾಪೌರ ಮಧುಶ್ರೀ ಪೂಜಾರಿ, ಶಾಸಕರಾದ ಸತೀಶ ಜಾರಕಿಹೊಳಿ, ಅನಿಲ ಬೆನಕೆ, ಅಭಯ ಪಾಟೀಲ, ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ, ಮಹಾಂತೇಶ ಕೌಜಲಗಿ, ದುರ್ಯೋದನ ಐಹೊಳೆ, ಮಹಾಂತೇಶ ದೊಡಗೌಡರ, ಮಾಜಿ ಶಾಸಕ ಕೋನರಡ್ಡಿ, ಸೇರಿದಂತೆ ಇನ್ನಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾದೇಶಿಕ ಆಯುಕ್ತರಾದ ಪಿ.ಎ. ಮೇಘಣ್ಣವರ, ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ, ನಗರ ಪೊಲೀಸ್ ಆಯುಕ್ತ ಡಾ. ಡಿ.ಸಿ. ರಾಜಪ್ಪ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ಸಾಹಿತಿಗಳು, ಕಲಾವಿದರು, ಕನ್ನಡಪರ ಹೋರಾಟಗಾರರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕೆ.ಎಲ್.ಇ ಸಂಗೀತ ಶಾಲೆಯ ಸುನೀತಾ ಪಾಟೀಲ ಹಾಗೂ ಸಂಗಡಿಗರು ನಾಡಗೀತೆ ಹಾಡಿದರು. ಕಸಾಪ ಜಿಲ್ಲಾಧ್ಯಕ್ಷರಾದ ಮಂಗಳಾ ಮೆಟಗುಡ್ಡ ಸ್ವಾಗತಿಸಿದರು. ಸಂಚಾಲಕರಾದ ಏಣಗಿ ಸುಭಾಷ ಅವರು ವಂದಿಸಿದರು. ಸಾಂಸ್ಕøತಿಕ ಕನ್ನಡ ಭವನ ಸಮಿತಿಯ ಸಂಯೋಜಕರಾದ ಯ.ರು. ಪಾಟೀಲ ನಿರೂಪಿಸಿದರು.

ಗಣ್ಯರಿಗೆ ಸನ್ಮಾನ:
ಸಾಂಸ್ಕøತಿಕ ಕನ್ನಡ ಭವನ ಸಮಿತಿ ವತಿಯಿಂದ ಮುಖ್ಯಮಂತ್ರಿಗಳಿಗೆ ಬಸವೇಶ್ವರರ ಭಾವಚಿತ್ರವನ್ನು ನೀಡಿ, ಸನ್ಮಾನಿಸಲಾಯಿತು. ಕಟ್ಟಡಕ್ಕೆ ನಿವೇಶನ ಒದಗಿಸಲು ಶ್ರಮಿಸದ ಶಿವನಗೌಡ ಪಾಟೀಲ ಹಾಗೂ ಕಟ್ಟಡ ನಿರ್ಮಿಸಿದ ಪ್ರಕಾಶ ಮಾನೆ ಅವರನ್ನು ಮುಖ್ಯಮಂತ್ರಿಗಳು ವೇದಿಕೆಯಲ್ಲಿ ಸನ್ಮಾನಿಸಿದರು.

ಕೊಡಗು ಸಂತ್ರಸ್ಥರಿಗೆ ಪರಿಹಾರ ಚೆಕ್ ವಿತರಣೆ:
ಕೊಡಗು ನೆರೆ ಸಂತ್ರಸ್ಥರಿಗೆ ನೆರವಾಗುವ ನಿಟ್ಟಿನಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಒಂದು ದಿನದ ಸಂಬಳವನ್ನು ಸಂಗ್ರಹಿಸಿ, ರೂ.4.87 ಲಕ್ಷ ಹಣವನ್ನು ವಿಶ್ವವಿದ್ಯಾಲಯದ ಕುಲಪತಿ ಶಿವಾನಂದ ಹೊಸಮನಿ ಹಾಗೂ ವಿವಿಯ ಅಧಿಕಾರಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಚೆಕ್ ಮೂಲಕ ವಿತರಿಸಿದರು.

Leave A Reply

 Click this button or press Ctrl+G to toggle between Kannada and English

Your email address will not be published.