ಉತ್ತಮ ಸಮಾಜಕ್ಕಾಗಿ

ಜಿಲ್ಲೆ ಒಡೆಯುವ ಜೇನು ಗೂಡಿಗೆ ಕೈ ಹಾಕುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಕನ್ನಡಪರ ಸಂಘಟನೆಗಳು ಇಂದು ಆಕ್ರೋಶ ವ್ಯಕ್ತಪಡಿಸಿವೆ.

Kannada organizations have expressed their anger over the fact that CM Siddaramaiah has done the job of handing over to the district-bound honey bee.

0

ಬೆಳಗಾವಿ: (news belgaum)ಅನಾವಶ್ಯಕವಾಗಿ ರಾಜ್ಯದ ಅತಿದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆ ಒಡೆಯುವ ಜೇನು ಗೂಡಿಗೆ ಕೈ ಹಾಕುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಕನ್ನಡಪರ ಸಂಘಟನೆಗಳು ಇಂದು ಆಕ್ರೋಶ ವ್ಯಕ್ತಪಡಿಸಿವೆ. ಇಂದು ಸುದ್ದಿಗೋಷ್ಠಿ ನಡೆಸಿದ ಕನ್ನಡ ಹೋರಾಟಗಾರರು ಮುಖ್ಯಮಂತ್ರಿ ಅವರ ಸೋಮವಾರದ ಜನಪ್ರತಿನಿಧಿಗಳ ಸಭೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ-ಕರ್ನಾಟಕ ನಡುವಿನ ಗಡಿ ಸಮಸ್ಯೆ ಇತ್ಯರ್ಥ ಆಗುವವರೆಗೆ ಜಿಲ್ಲೆ ವಿಭಜನೆ ಮಾಡಬಾರದು ಎಂದು ಹೋರಾಟಗಾರರು ಇಂದು ಆಗ್ರಹಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಗೋಕಾಕ ಮತ್ತು, ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಭಜನೆಗೆ ಹೋರಾಟ ನಡೆಯುತ್ತಿದೆ. ಹೋರಾಟಗಾರರ ಒತ್ತಡದ ಹಿನ್ನೆಲೆಯಲ್ಲಿ ಸೋಮವಾರ ಮಾರ್ಚ್ 19ಕ್ಕೆ ಜಿಲ್ಲೆಯ ಸಚಿವರು, ಶಾಸಕರು, ಸಂಸದರು ಹಾಗೂ ಎಂಎಲ್ಸಿ ಗಳ ಸಭೆಯನ್ನು ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ವಿಧಾನ ಸೌಧದಲ್ಲಿ ಕರೆದಿದ್ದರಿಂದ ಇತ್ತ ಆಕ್ರೋಶ ವ್ಯಕ್ತವಾಗಿದೆ.
ಮುಖ್ಯಮಂತ್ರಿಗಳ ಸೋಮವಾರದ ಸಭೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಸಭೆ ನಡೆಸಿದರು. ಮಾಜಿ ಮೇಯರ್ ಸಿದ್ದನಗೌಡ ಪಾಟೀಲ್, ಅಶೋಕ ಚಂದರಗಿ, ಮಹಾದೇವ ತಳವಾರ, ದೀಪಕ ಗುಡಗನಟ್ಟಿ, ಬಾಬು ಸಂಗೋಡಿ ಇತರರು ಪಾಲ್ಗೊಂಡಿದ್ದರು.
ಬೆಳಗಾವಿ ಗಡಿ ವಿವಾದ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದ್ದು, ಈಗಾಗಲೇ ಅಂತಿಮ ಹಂತದ ವಿಚಾರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪ್ರತ್ಯೇಕ ಜಿಲ್ಲೆ ರಚನೆಯಿಂದ ಕನ್ನಡಿಗರ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ನುಡಿದರು. ಕನ್ನಡ ಪರ ಹೋರಾಟಗಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕೇವಲ ಜನಪ್ರತಿನಿಧಿಗಳ ಸಭೆ ಕರೆದು ನಿರ್ಣಾಮಕ್ಕೆ ಮುಂದಾಗಿರುವ ಸಿಎಂ ನಿಲುವಿಗೆ ವಿರೋಧ ವ್ಯಕ್ತಪಡಿಸಿದರು. ಜಿಲ್ಲೆಯ ರಾಜಕಾರಣಿಗಳು ತೀವ್ರ ಚಟಿವಟಿಕೆ ನಡೆಸಿ, ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲೆಗಾಗಿ ಎರಡು ನಿಯೋಗ ಸಿಎಂ ಭೇಟಿ ಹೋಗಿದ್ದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅಶೋಕ ಚಂದರಗಿ ನುಡಿದು ಮುಖ್ಯಮಂತ್ರಿಗಳಿಗೆ ಜಿಲ್ಲೆ ವಿಭಜನೆಗೆಕೈಹಾಕದಂತೆ ತಿಳಿಸಿದರು. ಸಿಎಂ ಕನ್ನಡ ಸಂಘಟನೆ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಸಭೆಗೆ ಕನ್ನಡಪರ ಸಂಘಟನೆ ಯಾವುದೇ ಮುಖಂಡರಿಗೆ ಆಹ್ವಾನ ನೀಡಿಲ್ಲ. ಇದನ್ನು ಕನ್ನಡಪರ ಸಂಘಟನೆಗಳು ತ್ರೀವವಾಗಿ ಖಂಡಿಸುತ್ತವೆ. ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿದೆ. ವಿಭಜನೆಯಾಗುವುದರಿಂದ ಬೆಳಗಾವಿಗೆ ಅಪಾಯವಿದೆ. ಮುಖ್ಯಮಂತ್ರಿಗೆ ಜಿಲ್ಲೆ ಒಡೆಯಲು ಹೆಚ್ಚು ಆಸ್ತಕಿ ಇದ್ದಂತೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.Kannada organizations have expressed their anger over the fact that CM Siddaramaiah has done the job of handing over to the district-bound honey bee.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.