ಉತ್ತಮ ಸಮಾಜಕ್ಕಾಗಿ

ವೆಚ್ಚಗಳ ಮೇಲೆ ನಿಗಾ ವಹಿಸಿ – ಎಂ.ಜಿ. ಕುಲಕರ್ಣಿ

Keep track of expenses - MG Kulkarni

0

ಬೆಳಗಾವಿ:(news belgaum) ಚುನಾವಣೆಯಲ್ಲಿ ಅಭ್ಯರ್ಥಿಗಳು ಮಾಡುವ ಖರ್ಚು, ವೆಚ್ಚಗಳ ಬಗ್ಗೆ ಚುನಾವಣಾ ವೆಚ್ಚ ನಿರ್ವಹಣೆ ಸಮಿತಿಯ ಅಧಿಕಾರಿಗಳು ಮತ್ತು ಸದಸ್ಯರು ಕಟ್ಟುನಿಟ್ಟಿನ ಗಮನ ವಹಿಸಬೇಕು ಎಂದು ಜಿಲ್ಲಾ ವೆಚ್ಚಗಳ ನಿರ್ವಹಣೆ ಸಮಿತಿಯ ಲೆಕ್ಕ ಅಧೀಕ್ಷಕರಾದ ಎಂ.ಜಿ. ಕುಲಕರ್ಣಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ (ಮಾ.22) ಹಮ್ಮಿಕೊಂಡಿದ್ದ ಚುನಾವಣಾ ವೆಚ್ಚ ನಿರ್ವಹಣೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
News Belgaum-ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಮೇಲೆ ನಿಗಾ ವಹಿಸಿ - ಎಂ.ಜಿ. ಕುಲಕರ್ಣಿನಾಮಪತ್ರ ಸಲ್ಲಿಸಿದ ದಿನದಿಂದ ಮತದಾನ ನಡೆದ ದಿನಗಳ ನಡುವಿನ ಅವಧಿಯಲ್ಲಿ ಅಭ್ಯರ್ಥಿಗಳು ಮಾಡುವ ವೆಚ್ಚವನ್ನು ಚುನಾವಣಾ ವೆಚ್ಚವೆಂದು ಪರಿಗಣಿಸಲಾಗುವುದು ಎಂದು ಅವರು ತಿಳಿಸಿದರು.
ಚುನಾವಣಾ ಫಲಿತಾಂಶ ಪ್ರಕಟವಾದ 30 ದಿನಗಳೊಳಗಾಗಿ ಅಭ್ಯರ್ಥಿಗಳು ತಾವು ಮಾಡಿದ ಖರ್ಚು, ವೆಚ್ಚಗಳ ಪಟ್ಟಿಯನ್ನು ಜಿಲ್ಲಾ ಚುನಾವಣಾ ಅಧಿಕಾರಿ (ಜಿಲ್ಲಾಧಿಕಾರಿ) ಗಳಿಗೆ ಸಲ್ಲಿಸಬೇಕು ಎಂದರು.
ಫಲಿತಾಂಶ ಪ್ರಕಟವಾದ 26ನೇ ದಿನ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಜಿಲ್ಲಾಧಿಕಾರಿಗಳು ಅಭ್ಯರ್ಥಿಗಳ ಸಭೆ ಕರೆದು ಚುನಾವಣಾ ವೆಚ್ಚದ ಪಟ್ಟಿಯನ್ನು ಸಲ್ಲಿಸಲು ಮತ್ತೊಮ್ಮೆ ಸೂಚನೆ ನೀಡಬಹುದಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲೇ ಬೆಳಗಾವಿ ಜಿಲ್ಲೆ ಅತಿಹೆಚ್ಚು ವಿಧಾನಸಭಾ ಮತಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಯಾಗಿದ್ದು, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣಾ ವೆಚ್ಚ ನಿರ್ವಹಣಾ ಸಮಿತಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.
ಚುನಾವಣಾ ವೆಚ್ಚ ನಿರ್ವಹಣೆಯಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿ (ಜಿಲ್ಲಾಧಿಕಾರಿ) ಗಳ ಕಾರ್ಯವು ಪ್ರಮುಖವಾಗಿದ್ದು, ಅವರ ಮಾರ್ಗದರ್ಶನದಂತೆ ಇನ್ನಿತರ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಜಿಲ್ಲಾ ಚುನಾವಣಾಧಿಕಾರಿಗಳಿಗೆ ಇರುವ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದರು.
ವೆಚ್ಚ ನಿರ್ವಹಣಾ ಅಧಿಕಾರಿಗಳು ಹಾಗೂ ಸಹಾಯಕ ವೆಚ್ಚ ನಿರ್ವಹಣಾ ಅಧಿಕಾರಿಗಳ ಕಾರ್ಯಗಳ ಕುರಿತು ತಿಳಿಸಿದರು. ವಿಎಸ್‍ಟಿ ಹಾಗೂ ವಿವಿಟಿ ತಂಡದ ಕಾರ್ಯಗಳ ಕುರಿತು ಕುಲಕರ್ಣಿ ಅವರು ಮಾಹಿತಿ ನೀಡಿದರು.
ಜಿಲ್ಲಾ ವೆಚ್ಚಗಳ ನಿರ್ವಹಣೆ ಸಮಿತಿಯ ಹಣಕಾಸು ಅಧಿಕಾರಿ ಮುಕುಂದ ದೀಕ್ಷಿತ ಹಾಗೂ ಜಿಲ್ಲಾ ಚುನಾವಣಾ ನೋಡಲ್ ಅಧಿಕಾರಿ ಶ್ರೀಮತಿ ಎಂ.ಪಿ. ಅನಿತಾ ಅವರು ಚುನಾವಣಾ ವೆಚ್ಚ ನಿರ್ವಹಣೆ ಬಗ್ಗೆ ಮಾತನಾಡಿದರು.
ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ವೆಚ್ಚ ನಿರ್ವಹಣಾ ಅಧಿಕಾರಿಗಳು, ಸಹಾಯಕ ವೆಚ್ಚ ನಿರ್ವಹಣಾ ಅಧಿಕಾರಿಗಳು, ವಿಎಸ್‍ಟಿ ಹಾಗೂ ವಿವಿಟಿ ತಂಡಗಳ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.Keep track of expenses – MG Kulkarni

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Leave A Reply

 Click this button or press Ctrl+G to toggle between Kannada and English

Your email address will not be published.