ಉತ್ತಮ ಸಮಾಜಕ್ಕಾಗಿ

ಏ.16 ರಂದು ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ ಪ್ರದಾನ ಸಮಾರಂಭ ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿಗೆ ಆಯ್ಕೆ

ಸೇನಾ ಭರ್ತಿ ರ್ಯಾಲಿ ರದ್ದು

0

ಬೆಳಗಾವಿ: (news belgaum)ಇತ್ತೀಚೆಗೆ ಜರುಗಿದ ಬೆಳಗಾವಿಯ ಡಾ|| ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ಸರ್ವ ಸದಸ್ಯರ ಸಭೆಯಲ್ಲಿ 2017-18ನೇ ಸಾಲಿಗೆ ಡಾ|| ಬೆಟಗೇರಿ ಕೃಷ್ಣಶರ್ಮ-ಕಾವ್ಯ, ಕಥೆ ಮತ್ತು ಕಾದಂಬರಿ ಪ್ರಶಸ್ತಿಗಳನ್ನು ನೀಡಲು ಪ್ರಶಸ್ತಿ ಪುರಸ್ಕøತರ ಆಯ್ಕೆಯನ್ನು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ.
News Belgaum-ಏ.16 ರಂದು ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ ಪ್ರದಾನ ಸಮಾರಂಭ ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿಗೆ ಆಯ್ಕೆ News Belgaum-ಏ.16 ರಂದು ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ ಪ್ರದಾನ ಸಮಾರಂಭ ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿಗೆ ಆಯ್ಕೆ 1 News Belgaum-ಏ.16 ರಂದು ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ ಪ್ರದಾನ ಸಮಾರಂಭ ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿಗೆ ಆಯ್ಕೆ 2ಕವಿ ಡಾ|| ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ಡಾ|| ಬೆಟಗೇರಿ ಕೃಷ್ಣಶರ್ಮ ಕಾವ್ಯ ಪ್ರಶಸ್ತಿ, ಖ್ಯಾತ ಲೇಖಕ ಮತ್ತು ವಿಮರ್ಶಕರಾದ ಡಾ|| ಬರಗೂರು ರಾಮಚಂದ್ರಪ್ಪ ಅವರಿಗೆ ಡಾ|| ಬೆಟಗೇರಿ ಕೃಷ್ಣಶರ್ಮ ಕಾದಂಬರಿ ಪ್ರಶಸ್ತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ|| ಮನು ಬಳಿಗಾರ ಅವರಿಗೆ ಡಾ|| ಬೆಟಗೇರಿ ಕೃಷ್ಣಶರ್ಮ ಕಥಾ ಪ್ರಶಸ್ತಿಯನ್ನು ನೀಡಲು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ತಲಾ ಐವತ್ತು ಸಾವಿರ ರೂಪಾಯಿಗಳ ನಗದು ಹಾಗೂ ಸನ್ಮಾನ ಫಲಕಗಳನ್ನು ಒಳಗೊಂಡಿರುತ್ತದೆ. ಈ ಮೂವರು ಹಿರಿಯ ಲೇಖಕರು ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಲೋಕಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.
ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಡಾ|| ಬೆಟಗೇರಿ ಕೃಷ್ಣಶರ್ಮರ ಜನ್ಮ ದಿನಾಚರಣೆ ಅಂಗವಾಗಿ ಏಪ್ರಿಲ್ 16 ರಂದು ಬೆಳಗಾವಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಡಾ|| ಚಂದ್ರಶೇಖರ ಕಂಬಾರ ಅವರು ಪ್ರಶಸ್ತಿ ಪ್ರದಾನ ಮಾಡುವರು ಎಂದು ಡಾ|| ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್‍ನ ಅಧ್ಯಕ್ಷರಾದ ರಾಘವೇಂದ್ರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇನಾ ಭರ್ತಿ ರ್ಯಾಲಿ ರದ್ದು
ಬೆಳಗಾವಿ: 115 ಇನ್‍ಪೆಂಟ್ರಿ ಬಟಾಲಿಯನ್ ಮಹಾರ ವತಿಯಿಂದ ಮಹಾರಾಷ್ಟ್ರದ ನಾಗ್ಪುರದಲ್ಲಿ ಮಾ.26 ರಿಂದ 30 ರವರೆಗೆ ಏರ್ಪಡಿಸಿದ್ದ ಸೇನಾ ಭರ್ತಿ ರ್ಯಾಲಿಯನ್ನು ರದ್ದುಪಡಿಸಲಾಗಿದೆ ಎಂದು ಕಮಾಂಡಿಂಗ್ ಅಧಿಕಾರಿ ಎಸ್.ಪಿ. ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.