ಉತ್ತಮ ಸಮಾಜಕ್ಕಾಗಿ

ಜ.19 ರಂದು ಮಹಾಯೋಗಿ ವೇಮನ ಜಯಂತಿ

Mahayogi Veyana Jayanthi on January 19th

0

ಬೆಳಗಾವಿ: ( tarunkranti )  ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಜನವರಿ 19 ರಂದು ಮಹಾಯೋಗಿ ವೇಮನರ ಜಯಂತ್ಯುತ್ಸವ ಸಮಾರಂಭ ನಡೆಯಲಿದೆ.

ಜ.19 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಚನ್ನಮ್ಮ ವೃತ್ತ, ಕೃಷ್ಣದೇವರಾಯ ವೃತ್ತದ ಮಾರ್ಗವಾಗಿ ಕುಮಾರ ಗಂಧರ್ವ ರಂಗಮಂದಿರ ತಲುಪಲಿದೆ.

ಸಂಜೆ 6 ಗಂಟೆಗೆ ಕುಮಾರ ಗಂಧರ್ವ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಉದ್ಘಾಟಿಸುವರು. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಫಿರೋಜ್ ಶೇಠ ಅವರು ಅದ್ಯಕ್ಷತೆ ವಹಿಸುವರು. ಶರಣ ಸಾಹಿತಿಗಳಾದ ಪ್ರೊ. ಸಿದ್ದಣ್ಣ ಲಂಗೋಟಿ ಅವರು ಉಪನ್ಯಾಸ ನೀಡುವರು.

ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವರಾದ ಅನಂತಕುಮಾರ ಹೆಗಡೆ, ಸರ್ಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಗಳಾದ ಗಣೇಶ ಹುಕ್ಕೇರಿ ಸೇರಿದಂತೆ ಜಿಲ್ಲೆಯ ಸಂಸತ್ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾನಗರ ಪಾಲಿಕೆ ಮಹಾಪೌರರು, ಜಿಪಂ ಅಧ್ಯಕ್ಷರು ಹಾಗೂ ಇನ್ನಿತರ ಗಣ್ಯರು ಪಾಲ್ಗೊಳ್ಳುವರು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರ ಜಿಲ್ಲಾ ಪ್ರವಾಸ
ಬೆಳಗಾವಿ: ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಆರ್.ವಿ. ದೇಶಪಾಂಡೆ ಅವರು ಜನವರಿ 19 ರಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜನವರಿ 19 ರಂದು ಬೆಳಿಗ್ಗೆ 9 ಗಂಟೆಗೆ ಸಾರ್ವಜನಿಕರ ಭೇಟಿ ಮಾಡುವರು. 9-30ಕ್ಕೆ ನಗರದ ಪ್ರವಾಸಿ ಮಂದಿರದಲ್ಲಿ ಖಾನಾಪೂರ ತಾಲೂಕಿನ ಸಿಂಗರಗಾಂವ- ಗಾರ್ಲಿಗೌಳಿವಾಡ ರಸ್ತೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು.
ಬೆಳಿಗ್ಗೆ 10 ಗಂಟೆಗೆ ನಗರದ ಶೇಖ ಹೋಮಿಯೋಪತಿ ಇನ್‍ಸ್ಟಿಟ್ಯೂಟ್‍ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಿಗ್ಗೆ 11-30 ಗಂಟೆಗೆ ಬೆಳಗಾವಿಯಿಂದ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಬೆಳೆಸುವರು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾರರ ಸಹಭಾಗಿತ್ವದಡಿ ವಿಶೇಷ ಗ್ರಾಮಸಭೆ
ಬೆಳಗಾವಿ:ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಜನೇವರಿ 22 ಕೊನೆಯ ದಿನವಾಗಿದೆ. ಆದ್ದರಿಂದ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಮತದಾರರ ಹೆಸರು ನೋಂದಾಯಿಸುವುದು ಹಾಗೂ ತಿದ್ದುಪಡಿ ಮಾಡುವ ಬಗ್ಗೆ ವಿಶೇಷ ಗ್ರಾಮಸಭೆಯನ್ನು ಕರೆಯಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಮಚಂದ್ರನ್. ಆರ್ ಅವರು ತಿಳಿಸಿದ್ದಾರೆ.
ಗ್ರಾಮಸಭೆಯಲ್ಲಿ ಮತದಾರರಿಗೆ ಈ ಕೆಳಕಂಡ ವಿಷಯಗಳ ಮೇಲೆ ಹೆಸರನ್ನು ನೋಂದಾಯಿಸಲು ಸೂಚನೆ ನೀಡಬಹುದಾಗಿದೆ:
ಮತದಾರರ ಪಟ್ಟಿಯಲ್ಲಿ ಮತದಾರನ ಮುಖ್ಯಸ್ಥ ಹಾಗೂ ಕುಟುಂಬದ ಸದಸ್ಯರ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು. ಹೆಸರು ಇರದೇ ಇದ್ದಲ್ಲಿ ತಕ್ಷನವೇ ಸಂಬಂಧಪಟ್ಟ ಮತಗಟ್ಟೆ ಅಧಿಕಾರಿಗಳನ್ನು (ಬಿಎಲ್‍ಓ) ಭೇಟಿ ಮಾಡಿ ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
ಕಾರಣಾಂತರದಿಂದ (ಮೃತರು, ವಿವಾಹವಾದ ಮಹಿಳೆ, ಸ್ಥಳಾಂತರವಾದವರು, ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಹೆಸರು ನೋಂದಾವಣೆಗೊಂಡರೆ) ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ನಮೂನೆ-7ರಲ್ಲಿ ಅರ್ಜಿ ಸಲ್ಲಿಸಿ ಬಿಎಲೊ ರವರಿಗೆ ತಲುಪಿಸುವುದು.
ಮತದಾರರ ಪಟ್ಟಿಯಲ್ಲಿ ಮತದಾರನ ಹೆಸರಿನ ತಿದ್ದುಪಡಿಗಾಗಿ ನಮೂನೆ-8ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ಹೆಸರು ಸ್ಥಳಾಂತರಿಸಲು ನಮೂನೆ-8ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಜನೇವರಿ 22 ಕೊನೆಯ ದಿನಾಂಕವಾಗಿರುತ್ತದೆ.
ದಿನಾಂಕ: 01-01-2018ಕ್ಕೆ 18 ವರ್ಷವಾದವರು ಸದರಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ.
ದಿನಾಂಕ: 01-01-2000 ರಂದು ಜನಿಸಿದ ಪ್ರತಿ ಮತದಾರರಿಗೆ ದಿನಾಂಕ: 25-01-2018 ರಂದು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆಯಂದು “ಮಿಲೇನಿಯಮ್ ಓಟರ್ ಆಫ್ ಇಂಡಿಯಾ” ಎಂಬ ಬ್ಯಾಡ್ಜ್ ನೀಡಿ ಮತದಾರರ ಗುರುತಿನ ಚೀಟಿ ನೀಡಲಾಗುವುದು.
ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವಂತಹ ಗ್ರಾಮಗಳ ಎಲ್ಲ ಮತದಾರರಿಗೆ ಮತದಾರರ ಹೆಸರನ್ನು ನೋಂದಾಯಿಸಿಕೊಳ್ಳುವುದು ಹಾಗೂ ತಿದ್ದುಪಡಿ ಮಾಡಿಸುವ ಬಗ್ಗೆ ಆಯಾ ನಮೂನೆಗಳನ್ನು ಭರ್ತಿ ಮಾಡಿ ಬಿಎಲ್‍ಓ ರವರಿಗೆ ಸಂಪರ್ಕಿಸಲು ಗ್ರಾಮಸಭೆಯಲ್ಲಿ ಹೆಚ್ಚಿನ ಪ್ರಚಾರ ಮಾಡಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಮಚಂದ್ರನ್. ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.19 ರಂದು ಜಿ.ಪಂ ಅಧ್ಯಕ್ಷರ ಗ್ರಾಮ ವಾಸ್ತವ್ಯ
ಬೆಳಗಾವಿ:  ಗ್ರಾಮೀಣ ಭಾಗದಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಹಾಗೂ ಜನರ ಕುಂದುಕೊರತೆಗಳನ್ನು ಆಲಿಸಲು ಜಿಲ್ಲಾ ಪಂಚಾಯತ ಅಧ್ಯಕ್ಷೆ ಶ್ರೀಮತಿ ಆಶಾ ಐಹೊಳೆ ಅವರು ಜನವರಿ 19 ರಂದು ಸವದತ್ತಿ ತಾಲೂಕಿನ ಮಬನೂರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಬಂಡಾರಹಳ್ಳಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಜನವರಿ 19 ರಂದು ಸಂಜೆ 7 ಗಂಟೆಗೆ ಬಂಡಾರ ಹಳ್ಳಿಗೆ ಆಗಮಿಸಿ, ಗ್ರಾಮದೇವಿ ದರ್ಶನ ಮಾಡುವರು. ರಾತ್ರಿ 8 ಗಂಟೆಗೆ ಶಾಲಾ ಮಕ್ಕಳಿಂದ ಜನ ಜಾಗೃತಿ, ಸಾಂಸ್ಕøತಿಕ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಜರುಗುವುದು. ರಾತ್ರಿ 9-15 ಗಂಟೆಗೆ ಸರ್ಕಾರದ ವಿವಿಧ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ಮಾಡುವರು. ರಾತ್ರಿ 10 ಗಂಟೆಗೆ ಗ್ರಾಮಸ್ತರೊಂದಿಗೆ ಕುಂದುಕೊರತೆಗಳ ಬಗ್ಗೆ ಚರ್ಚೆ ಮಾಡುವರು. 10-30ಕ್ಕೆ ನೀರಿನ ಬಳಕೆ ಬಗ್ಗೆ ಚರ್ಚಿಸುವರು. 11 ಗಂಟೆಗೆ ಗ್ರಾಮಸ್ತರಿಗೆ ಸಂದೇಶ ನೀಡುವರು. 11-30ಕ್ಕೆ ಗ್ರಾಮದ ಮುತ್ತೆಪ್ಪಾ ದುಂಡಪ್ಪಾ ಹಳ್ಳಿ ಅವರ ಮನೆಯಲ್ಲಿ ವಾಸ್ತವ್ಯ ಮಾಡುವರು ಎಂದು ಜಿಲ್ಲಾ ಪಂಚಾಯತ ಪ್ರಕಟಣೆ ತಿಳಿಸಿದೆ.

Leave A Reply

 Click this button or press Ctrl+G to toggle between Kannada and English

Your email address will not be published.