ಉತ್ತಮ ಸಮಾಜಕ್ಕಾಗಿ

ಮಹೇಶಕುಮಾರ ಲಂಗೋಟಿ ಏಶಿಯನ್ ಚಾಂಪಿಯನ್‍ಶಿಪ್‍ಗೆ ಆಯ್ಕೆ

Maheshkumar langoti selected to Asian championship

0

ಬೆಳಗಾವಿ: (news belagaviಅಗಸ್ಟ 2 ರಿಂದ 3 ರವರೆಗೆ ಇರಾನ್ ದೇಶದ ತೆಹರಾನ್‍ನಲ್ಲಿ ನಡೆಯಲಿರುವ ಏಶಿಯನ್ಚಾಂ ಪಿಯನ್‍ಶಿಪ್‍ನ 57 ಕೆ.ಜಿ ತೂಕದ ಫ್ರೀಸ್ಟೈಲ್ ವಿಭಾಗದಲ್ಲಿ ಕರ್ನಾಟಕ ರಾಜ್ಯದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಳಗಾವಿ ಕ್ರೀಡಾ ವಸತಿ ನಿಲಯದ ಕುಸ್ತಿ ಕ್ರೀಡಾಪಟುವಾದ ಕು. ಮಹೇಶಕುಮಾರ ಲಂಗೋಟಿ ಇವರು ಆಯ್ಕೆಯಾಗಿರುತ್ತಾರೆ.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ. ರಾಮಚಂದ್ರನ್ ಆರ್ ರವರು ಕು. ಮಹೇಶಕುಮಾರ ಲಂಗೋಟಿ, ಕುಸ್ತಿಪಟು ಇವರಿಗೆ ಬೆಳಗಾವಿ ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಸನ್ಮಾನಿಸಿದರು ಮತ್ತು ಇರಾನ್ ದೇಶದಲ್ಲಿ ಜರುಗಲಿರುವ ಏಶಿಯನ್ ಚಾಂಪಿಯನ್‍ನಲ್ಲಿ ಉತ್ತಮ ಪ್ರದರ್ಶನ ನೀಡಿ ದೇಶಕ್ಕೆ ಕೀರ್ತಿಯನ್ನು ತರಲಿ ಎಂದು ಶುಭ ಹಾರೈಸಿದರು.
ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳಾದ ಎಸ್.ಬಿ.ಮುಳ್ಳಳ್ಳಿ, ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿಗಳಾದ ಶಂಕರಾನಂದ. ಬನಶಂಕರಿ, ಪ್ರೋಬೇಷನರಿ ಕೆ.ಎ.ಎಸ್ ಅಧಿಕಾರಿಗಳಾದ ಸಿದ್ರಾಮೇಶ್ವರ ಮತ್ತು ಶ್ರೀಮತಿ. ಅನ್ನಪೂರ್ಣಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ಸೀಬಿರಂಗಯ್ಯ, ಅರ್ಜುನ ಪ್ರಶಸ್ತಿ ವಿಜೇತ ಮುಕುಂದ ಕಿಲ್ಲೇಕರ, ಈಜು ತರಬೇತುದಾರರಾದ ಉಮೇಶ ಕಲಘಟಗಿ, ಕುಸ್ತಿ ತರಬೇತುದಾರರಾದ ಎ.ಆರ್.ಕೆ. ನಾಗರಾಜ ಹಾಗೂ ಕು. ಹಣಮಂತ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.