ಉತ್ತಮ ಸಮಾಜಕ್ಕಾಗಿ

ಬೆಳಗಾವಿಗೆ ಲೋಕೋಪಯೋಗಿ ಸಚಿವರು

Minister of Public Works to Belgaum

0

ಬೆಳಗಾವಿ: (news belgaum)ರಾಜ್ಯ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಹೆಚ್ ಸಿ. ಮಹದೇವಪ್ಪ ಅವರು ಮಾರ್ಚ 13 ರಂದು ಬೆಳಗಾವಿ ಜಿಲ್ಲೆಯ ಜಿಲ್ಲಾ ಪ್ರವಾಸ ಕೈಗೊಳ್ಳುಲಿದ್ದಾರೆ.
ಮಾರ್ಚ 13 ರಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕೋಡಿಗೆ ಪ್ರಯಾಣ ಬೆಳೆಸುವರು. 1-30 ಗಂಟೆಗೆ ಚಿಕ್ಕೋಡಿ ಪಟ್ಟಣದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರ ಕಟ್ಟಡಕ್ಕೆ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 3-30 ಗಂಟೆಗೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿಸಿರುವ ಯಾತ್ರಿ ನಿವಾಸ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಸಂಜೆ 4-45 ಗಂಟೆಗೆಗ ಚಿಕ್ಕೋಡಿ ತಾಲೂಕಿನ ಕಲ್ಗೋಳ-ಯಡೂರ ಗ್ರಾಮದ ಮಧ್ಯೆ ಹರಿಯುತ್ತಿರುವ ಕೃಷ್ಣಾ ನದಿಗೆ ಅಡ್ಡಲಾಗಿ ಹಾಗೂ ಜುಗುಳ-ಖಿದ್ರಾಪೂರ ಗ್ರಾಮದ ಮಧ್ಯೆ ಹರಿಯುತ್ತಿರುವ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಬ್ರಿಡ್ಜ್ ಕಾಮಗಾರಿಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 7-40 ಗಂಟೆಗೆ ಬೆಳಗಾವಿಯಿಂದ ರಸ್ತೆ ಮಾರ್ಗವಾಗಿ ಧಾರವಾಡಕ್ಕೆ ಪ್ರಯಾಣ ಬೆಳೆಸುವರು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Minister of Public Works to Belgaum

Leave A Reply

 Click this button or press Ctrl+G to toggle between Kannada and English

Your email address will not be published.