ಉತ್ತಮ ಸಮಾಜಕ್ಕಾಗಿ

ಅಲ್ಪಸಂಖ್ಯಾತರ ಅಬಿವೃದ್ಧಿ ನಿಗಮ: ಅರ್ಜಿ ಆಹ್ವಾನ

Minority Development Corporation: Application Invitation

0

ಬೆಳಗಾವಿ: (news belagavi ಕರ್ನಾಟಕ ಅಲ್ಪಸಂಖ್ಯಾತರ ಅಬಿವೃಧ್ಧಿ ನಿಗಮವು ರಾಜ್ಯದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ,
ಜೈನ, ಕ್ರಿಶ್ಚಿಯನ್, ಬೌಧ್ದ, ಸಿಖ್ಖರು, ಪಾರ್ಸಿ ಜನಾಂಗದವರ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕಾಭಿವೃಧ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ರಾಜ್ಯ ಸರ್ಕಾರ ಪ್ರಾಯೋಜಿತ ಈ ಕೆಳಕಂಡ ಯೋಜನೆಗಳಡಿಯಲ್ಲಿ 208-19 ನೇ ಸಾಲಿನಲ್ಲಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಆನ್‍ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಗಳ ವಿವರ:
ಸ್ವಯಂ-ಉದ್ಯೋಗಕ್ಕಾಗಿ ಸಹಾಯಧನ ಯೋಜನೆ, ಅರಿವು ( ವಿದ್ಯಾಬ್ಯಾಸ ಸಾಲ) ಯೋಜನೆ, ಶ್ರಮಶಕ್ತಿ ಯೋಜನೆ, ಕಿರು (ಮೈಕ್ರೋ)
ಸಾಲ ಮತ್ತು ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಕೃಷಿ ಭೂಮಿ ಖರೀದಿ ಯೋಜನೆ, ಕ್ರೈಸ್ತ ಸಮುದಾಯದವರಿಗೆ ಮಾತ್ರ ನಿವೇಶನ ಖರೀದಿ/ಗೃಹ ನಿರ್ಮಾಕ್ಕೆ ಪಡೆದ ಸಾಲದ ಮೇಲಿನ ಬಡ್ಡಿ ಸಹಾಯಧನ ಯೋಜನೆ, ಕ್ರೈಸ್ತ ಸಮುದಾಯ ವಿಶೇಷ ಅಭಿವೃಧ್ಧಿ ಯೋಜನೆ,

2017-18 ನೇ ಸಾಲಿನಿಂದ ಪ್ರಾರಂಭಿಸಿದ ಹೊಸ ಯೋಜನೆಗಳು ಕೃಷಿ ಸಂಬಂಧಿತ ಚಟುವಟಿಕೆಗಳಾದ ಹೈನುಗಾರಿಕೆ, ಕೋಳಿಸಾಕಾಣಿಕೆ, ಕುರಿ ಸಾಕಾಣಿಕೆ ಉದ್ಯೋಗ ಕೈಕೊಳ್ಳಲು ಸಾಲ ಹಾಗೂ ಸಹಾಯಧನ ಯೋಜನೆ (ಮಹಿಳೆಯರಿಗೆ ಮಾತ್ರ), ಟ್ಯಾಕ್ಸಿ, ಗೂಡ್ಸ ವಾಹನ ಖರೀದಿಸಲು ಸಹಾಯಧನ ಯೋಜನೆ (ಲೈಟ್ ಕ್ಯಾಬ್ ಬ್ಯಾಚ್ ಅಥವಾ ಲೈಟ್ ಸರಕು ಸಾಗಾಣಿಕೆ ಪರವಾಣಿಗೆ ಹೊಂದಿರಬೇಕು), ಕೊಲ್ಲಿ ರಾಷ್ಟ್ರಗಳಿಂದ ಹಿಂತಿರುಗಿ ಉದ್ಯೋಗವಕಾಶ ವಂಚಿತರಾಗುವ ಅಲ್ಪಸಂಖ್ಯಾತರ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಸಾಲ ಸೌಲಭ್ಯ ಯೋಜನೆ, ಅಲ್ಪಸಂಖ್ಯಾತರ ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಯಂತ್ರೋಪಕರಣಗಳ ವಿತರಣೆÀ ಯೋಜನೆ, ಮನೆ ಮಳಿಗೆ ಯೋಜನೆÉ, ಅಟೋ ಮೊಬೈಲ ಸರ್ವಿಸಗಳಿಗೆ ತರಬೇತಿ ಪ್ರೋತ್ಸಾಹ ಮತ್ತು ಮೂಲಭೂತ ಸೌಕರ್ಯ ಯೋಜನೆ ಈ ಎಲ್ಲ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನಿಗಮದ ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಹೊಂದಿರಬೇಕಾದ ಸಾಮಾನ್ಯ ಅರ್ಹತೆಗಳು ಅರ್ಜಿದಾರರು ಅಲ್ಪಸಂಖ್ಯಾತರ ಜನಾಂಗಕ್ಕೆ ಸೇರಿದವರಾಗಿದ್ದು, ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಅರ್ಜಿದಾರರು ವಯಸ್ಸು 18 ರಿಂದ 45 ವರ್ಷದೊಳಗಿರಬೇಕು, ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ ರೂ.81000/- ಮತ್ತು ನಗರ ಪ್ರದೇಶದವರಿಗೆ ರೂ.1,03,000/- ಮೀರಬಾರದು. ಹಾಗೆಯೇ ( ಅರಿವು ಯೋಜನೆಯಡಿಯಲ್ಲಿ ಮಾತ್ರ ಕುಟುಂಬದ ವಾರ್ಷಿಕ ಆದಾಯ ರೂ. 6,00,000/- ಮೀರಬಾರದು), ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. 2017-18 ನೇ
ಸಾಲಿನಿಂದ ಅನುಷ್ಠಾನಗೊಳಿಸುತ್ತಿರುವ ಹೊಸ ಯೋಜನೆಗಳಲ್ಲಿ ಅರ್ಜಿದಾರರ ವಯಸ್ಸು 18 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು.
ಅರ್ಜಿದಾರರು ಆಧಾರ ಕಾರ್ಡ, ಚುನಾವಣಾ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಹೊಂದಿರಬೇಕು.ಅರ್ಜಿದಾರರು ಐ.ಎಫ್.ಎಸ್.ಸಿ.ಕೊಡ ಹೊಂದಿರುವ ಬ್ಯಾಂಕುಗಳಲ್ಲಿ ಉಳಿತಾಯ ಖಾತೆ ಹೊಂದಿರಬೇಕು.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆನ್‍ಲೈನ ಮೂಲಕ ಅರಿವು (ವಿದ್ಯಾಭ್ಯಾಸ ಸಾಲ) ಯೋಜನೆಗಳಿಗೆ kmdc.kar.nic.in/arivu2 ಹಾಗೂ ಇತರೆ ಎಲ್ಲಾ ಯೋಜನೆಗಳಿಗೆ kmdc.kar.nic.in/arivu2/loan/login.aspx
ವೆಬ್‍ಸೈಟ್‍ನಲ್ಲಿ ಅರ್ಜಿಗಳನ್ನು ಅಗಸ್ಟ 31 ರೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಕಟ್ಟಡ, ಸದಾಶಿವನಗರ ಬೆಳಗಾವಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 0831-2472296ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.