ಉತ್ತಮ ಸಮಾಜಕ್ಕಾಗಿ

ಬೆಳಗಾವಿ ಬಂದ್ ಗೆ ಕರೆ ಕೊಡಲಾಗುವುದು ಎಂದು ಬಿಜೆಪಿ ಸಂಸದ ಮತ್ತು ಶಾಸಕರು ಇಂದು ಎಚ್ಚರಿಕೆ ನೀಡಿದ್ದಾರೆ.

news belagavi

0

ಬೆಳಗಾವಿ:(news belagavi) ವಿಪರೀತ ಕೆಟ್ಟು ಹೋಗಿರುವ ರಸ್ತೆಗಳ ಅಭಿವೃದ್ಧಿಗೆ ಸರಕಾರ ತಕ್ಷಣ ಮುಂದಾಗದಿದ್ದರೆ, ಬೆಳಗಾವಿ ಬಂದ್ ಗೆ ಕರೆ ಕೊಡಲಾಗುವುದು ಎಂದು ಬಿಜೆಪಿ ಸಂಸದ ಮತ್ತು ಶಾಸಕರು ಇಂದು ಎಚ್ಚರಿಕೆ ನೀಡಿದ್ದಾರೆ. ಇಂದು ಜಂಟಿ ಸುದ್ದಿಗೋಷ್ಠಿ ನಡೆಸಿದ ಸಂಸದ ಸುರೇಶ ಅಂಗಡಿ ಹಾಗೂ ಶಾಸಕರಾದ ಅನಿಲ ಬೆನಕೆ, ಅಭಯ ಪಾಟೀಲ ಸರಕಾರಕ್ಕೆ ಎಚ್ಚರಿಕೆ ಮೂಲಕ ಒತ್ತಾಯಿಸಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನ ಹೇಗೆ ನಡೆಸುತ್ತೀರಿ ಎಂದು ಸಹ ಪ್ರಶ್ನೆ ಮಾಡಲಾಗಿದ್ದು, ತಕ್ಷಣ ಬೆಳಗಾವಿ ರಸ್ತೆಗಳ ಅಭಿವೃದ್ಧಿಗೆ ₹200ಕೋಟಿ ಅನುದಾನ ಮಂಜೂರು ಮಾಡಬೇಕೆಂದು ಕೋರಿದ್ದಾರೆ. ಸಂಸದ ಸುರೇಶ ಅಂಗಡಿ ಮಾತನಾಡಿ ರೈತರ ಬೆಳೆ ಖರೀದಿ ಕೇಂದ್ರಗಳನ್ನು ಸರಕಾರ ಸ್ಥಾಪಿಸಬೇಕು. ಆಗಲೇ ಕೇಂದ್ರ ಸರಕಾರ ಬೆಂಬಲ ಬೆಲೆ ಘೋಷಿಸಿದೆ. ಆದರೂ ರಾಜ್ಯ ಸರಕಾರ ರೈತ ಸ್ನೇಹಿ ನಡೆ ಪ್ರದರ್ಶಿಸಿಲ್ಲ ಎಂದು ಹರಿಹಾಯ್ದರು.
ಸ್ಮಾರ್ಟ್ ಸಿಟಿ ಯೋಜನೆ ಜಾರಿ ಮಾತ್ರ ತೀರಾ ಕುಂಠಿತಗೊಂಡಿದೆ. ಕೆಲಸ ತೀಕ್ಷ್ಣ ಆಗಬೇಕು. ಹೊರ ರಾಜ್ಯದ ಗುತ್ತಿಗೆದಾರರಿಗೆ ಕೆಲಸ ಕೊಡದೇ, ಸ್ಥಳೀಯ ಗುತ್ತಿಗೆದಾರರಿಗೆ ಕೆಲಸ ನೀಡಬೇಕು ಎಂದರು. ಈ ಬಾರಿಯ ಲೋಕಸಭೆ ಚುನಾವಣೆಗೆ ಯಾರಿಗೆ ಟಿಕೇಟ್ ನೀಡಬೇಕು ಎಂದು ಪಕ್ಷ ನಿರ್ಧರಿಸುತ್ತದೆ. ನನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಬರುತ್ತಿದೆ ಎಂಬುವುದರ ಬಗ್ಗೆ ಚಿಂತನೆ ಮಾಡುವ ಅವಶ್ಯಕತೆ ಇಲ್ಲ ಎಂದರು.

Leave A Reply

 Click this button or press Ctrl+G to toggle between Kannada and English

Your email address will not be published.