ಉತ್ತಮ ಸಮಾಜಕ್ಕಾಗಿ

ಹಜ್ ಸಬ್ಸಿಡಿ ರದ್ದುಪಡಿಸಿದ ಮೋದಿ ಸರಕಾರ

0

ಬೆಳಗಾವಿ/ನವದೆಹಲಿ: ಅಚ್ಚರಿ ಬೆಳವಣಿಗೆಯೊಂದರಲ್ಲಿ ಹಜ್ ಯಾತ್ರೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನೀಡುತ್ತಿದ್ದ ಸಹಾಯಧನ ಈ ವರ್ಷದಿಂದ ರದ್ದಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. ಕೇಂದ್ರ ಸರ್ಕಾರ ರಚಿಸಿದ ಸಮಿತಿಯ ಶಿಫಾರಸುಗಳ ಜಾರಿ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿ ಮಾತನಾಡಿದ ಅವರು, 2018 ರಿಂದಲೇ ಹಜ್ ಯಾತ್ರೆಗೆ ನೀಡುತ್ತಿದ್ದ ಸಹಾಯಧನವನ್ನು ರದ್ದು ಪಡಿಸಲಾಗಿದ್ದು, ಈ ಹಣವನ್ನು ಅಲ್ಪಸಂಖ್ಯಾತ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳೆಯರ ಅಭಿವೃದ್ಧಿಗೆ ಬಳಸುವುದಾಗಿ ತಿಳಿಸಿದರು. ಕೇಂದ್ರ ಅಲ್ಪಸಂಖ್ಯಾತ ಅಭಿವೃದ್ಧಿ ಸಚಿವಾಲಯ ಕಳೆದ ವರ್ಷ ಹಜ್ ಯಾತ್ರೆ ಕೈಗೊಳ್ಳುವ 2018-22 ರ ವರ್ಷದ ನಿಯಮಗಳನ್ನು ರೂಪಿಸಲು ಕೇಂದ್ರದ ಮಾಜಿ ಕಾರ್ಯದರ್ಶಿ ಅಫ್ಜಲ್ ಅಮಾನುಲ್ಲಾ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿತ್ತು. ಈ ಸಮಿತಿ ನೀಡಿದ ಶಿಪಾರಸ್ಸುಗಳ ಆಧಾರದ ಮೇಲೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

Leave A Reply

 Click this button or press Ctrl+G to toggle between Kannada and English

Your email address will not be published.