ಉತ್ತಮ ಸಮಾಜಕ್ಕಾಗಿ

ಮೊರಾರ್ಜಿ ವಸತಿ ಶಾಲೆ: ಅರ್ಜಿ ಅಹ್ವಾನ

Morarji Housing School: Application Invitation

0

ಬೆಳಗಾವಿ: (news belgaum)2018-19ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯ ನಿರ್ವಹಿಸುತ್ತಿರುವ ಆಂಗ್ಲ ಮಾಧ್ಯಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಹಾಗೂ ಇತರೆ ಸಮುದಾಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಅಹ್ವಾನಿಸಲಾಗಿದೆ.
ಏಪಿಲ್ 16 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ : ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಹೂಲಿಕಟ್ಟಿ ತಾ: ಬೈಲಹೊಂಗಲ, ಮೊಬೈಲ್ ಸಂಖ್ಯೆ:8792214288. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಚಿಕ್ಕೋಡಿ (ಯಕ್ಸಂಬಾ) ಮೊಬೈಲ್ ಸಂಖ್ಯೆ:9844849238, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೆಳಗಾವಿ ಟೌನ್. ಮೊಬೈಲ್ ಸಂಖ್ಯೆ: 9620294264. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೂಡಲಗಿ ತಾ: ಗೋಕಾಕ. ಮೊಬೈಲ್ ಸಂಖ್ಯೆ:9945813195. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸಾಲಹಳ್ಳಿ ತಾ: ರಾಮದುರ್ಗ. ಮೊಬೈಲ್ ಸಂಖ್ಯೆ: 8073359727 ಗೆ ಸಂಪರ್ಕಿಸಬಹುದು.
ಭರ್ತಿ ಮಾಡಿರುವ ಅರ್ಜಿಗಳು ಸಂಬಂಧಿಸಿದ ವಸತಿ ಶಾಲೆಗಳಿಗೆ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಿಟಿಎಸ್ ನಂ. 4362 ಶ್ರೀ. ಲಕ್ಷ್ಮೀ ಸಿಟಿ ಲೈಟ್ ಬಿಲ್ಡಿಂಗ್, ಚವಾಟ ಗಲ್ಲಿ, ಬೆಳಗಾವಿ-590001, ಇಲ್ಲಿಗೆ ಸಲ್ಲಿಸಬೇಕೆಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.Morarji Housing School: Application Invitation

ಶಾಲೆ ಬಿಟ್ಟ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ
ಬೆಳಗಾವಿ: ಶಾಲೆಗಳಿಂದ ಹೊರ ಉಳಿದ ಅಲ್ಪಸಂಖ್ಯಾತರ ಮಕ್ಕಳನ್ನು ಮರಳಿ ಶಾಲೆಗೆ ತರಲು ಈಗಾಗಲೇ ಮುಚ್ಚಲ್ಪಟ್ಟಿರುವ ಸರ್ಕಾರಿ ಉರ್ದು ಶಾಲೆಗಳ ಜಾಗದಲ್ಲಿ 2017-18ನೇ ಸಾಲಿನಿಂದ ಹೊಸದಾಗಿ ಮಂಜೂರಾಗಿರುವ ಮೌಲಾನಾ ಆಜಾದ್ ಮಾದರಿ (ಆಂಗ್ಲ ಮಾಧ್ಯಮ) ಶಾಲೆಗಳ 6ನೇ ತರಗತಿಗೆ ಅಲ್ಪಸಂಖ್ಯಾತ ವಿದಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸಂಬಂಧಪಟ್ಟ ಶಾಲೆಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 30 ರೊಳಗೆ ಅರ್ಜಿ ಸಲ್ಲಿಸಬಹುದು.
ಮೌಲಾನಾಆಜಾದ ಮಾದರಿ ಶಾಲೆಯ ಹೆಸರು ಹಾಗೂ ವಿಳಾಸ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ನಂ-1 ಕಾಕತಿವೇಸ್, ಬೆಳಗಾವಿ 9901010978, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ವೀರಭದ್ರ ನಗರ, ಬೆಳಗಾವಿ 9740574045, ಶಾಸಕರ ಕ್ಷೇತ್ರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಂ.4, ರಾಮದುರ್ಗ-8951719551, ಸರ್ಕಾರಿ ಉರ್ದು ಪ್ರೌಢಶಾಲೆ, ಹುಕ್ಕೇರಿ-9686024975, ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯ, ವಾಲ್ಮೀಕಿ ಕ್ರೀಡಾಂಗಣದ ಹತ್ತಿರ, ಗೋಕಾಕ- 9632717246, ಪುರ ಸಭೆ ಸಮುದಾಯ ಭವನ, ಕುಡಚಿ-9008639376, ಕರ್ನಾಟಕರೈಸ್ ಮಿಲ್ ಎದುರುಗಡೆ ಫರಾಸ್ ಬಿಲ್ಡಿಂಗ್ ಖಾನಾಪೂರ-9916168583
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಳಗಾವಿ ಸಿಟಿಎಸ್ ನಂ. 4362 ಶ್ರೀ. ಲಕ್ಷ್ಮೀ ಸಿಟಿ ಲೈಟ್ ಬಿಲ್ಡಿಂಗ್, ಚವ್ಹಾಟಗಲ್ಲಿ, ಬೆಳಗಾವಿ, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯ, ಬೆಳಗಾವಿ ಉಪ-ವಿಭಾಗ, ಚಿಕ್ಕೋಡಿ ಹಾಗೂ ಬೈಲಹೊಂಗಲ ಉಪ-ವಿಭಾಗ ಹಾಗೂ ಮೌಲಾನಾ ಆಜಾದ್ ಶಾಲೆಗಳನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಅಲ್ಪಸಂಖ್ಯಾತ ಉದ್ಯೋಗಸ್ಥ ಮಹಿಳೆಯರಿಗೆ ಅರ್ಜಿ ಅಹ್ವಾನ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸರ್ಕಾರಿ, ಸರ್ಕಾರೇತರ ಹಾಗೂ ಖಾಸಗಿ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆ ದೃಷ್ಠಿಯಿಂದ 2017-18ನೇ ಸಾಲಿನಿಂದ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಸಿಖ್ ಹಾಗೂ ಪಾರ್ಸಿ) ಮಹಿಳೆಯರಿಗಾಗಿ ಉದ್ಯೋಗಸ್ಥರ ಮಹಿಳೆಯರ ಹಾಸ್ಟೆಲ್‍ನ್ನು ಪ್ರಾರಂಭಿಸಲಾಗಿದೆ.
ಅರ್ಹ ಅಲ್ಪಸಂಖ್ಯಾತರ ಮಹಿಳೆಯ ಏಪ್ರಿಲ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. (ಸರ್ಕಾರಿ ಉದ್ಯೋಗಸ್ಥ ಮಹಿಳೆಯರಿಗೆ ಮೊದಲ ಆದ್ಯತೆ ನೀಡಲಾಗುವುದು) ಆಸಕ್ತಿಯುಳ್ಳವರು ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ, ಎಸ್.ಪಿ. ಆಫೀಸ್ ಹತ್ತಿರ ಸುಭಾಷನಗರ, ಬೆಳಗಾವಿ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಾರ್ಯಾಲಯ, ಸಿಟಿಎಸ್ ನಂ. 4362 ಶ್ರೀ. ಲಕ್ಷ್ಮೀ ಸಿಟಿ ಲೈಟ್ ಬಿಲ್ಡಿಂಗ್, ಚವ್ಹಾಟಗಲ್ಲಿ, ಬೆಳಗಾವಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದೆಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ

.ಅಲ್ಪಸಂಖ್ಯಾತ ವರ್ಗದವರಿಗೆ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಅಹ್ವಾನ
ಬೆಳಗಾವಿ: ಕರ್ನಾಟಕ ರಾಜ್ಯದಲ್ಲಿನ ಮತೀಯ ಅಲ್ಪಸಂಖ್ಯಾತರಾದ ಮುಸಲ್ಮಾನರು, ಕ್ರೈಸ್ತರು, ಜೈನರು ಬೌಧ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ನಿಗಮವು ಅನುಷ್ಠಾನಗೊಳಿಸುತ್ತಿರುವ “ ಅರಿವು “ ಯೋಜನೆಯಡಿ ವಿದ್ಯಾಭ್ಯಾಸ ಸಾಲವನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಬೆಂಗಳೂರು) ನಡೆಸುವ PGET-2018 ಮೂಲಕ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ www.kmdc.kar.nic.in/arivu2 ಮೂಲಕ “ ಆನ್-ಲೈನ್ ’’ ಅರ್ಜಿ ಸಲ್ಲಿಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಿಗಧಿಪಡಿಸುವ ಶುಲ್ಕದನ್ವಯ ನಿಗಮವು ವಿದ್ಯಾಭ್ಯಾಸ ಸಾಲವನ್ನು ಮುಂಚಿತವಾಗಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮಂಜೂರ ಮಾಡಿ ( Pre-Sanction the Education Loan) ತದನಂತರ ಮಂಜೂರಾದ ಹಣವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ಕಾಲೇಜಿಗೆ ನೇರವಾಗಿ ಪಾವತಿಸುತ್ತೇವೆ.
ಆನ್‍ಲೈನ ’ ಅರ್ಜಿಯನ್ನು ಏಪ್ರಿಲ್ 3 ( ಮಂಗಳವಾರ ) ಸಾಯಂಕಾಲ 5-30 ರೊಳಗೆ ಸಲ್ಲಿಸಬೇಕೆಂದು ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಮಾರ್ಚ 26 ರಿಂದ ತಾಲೂಕಾವಾರು ಪ್ರವಾಸ; ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಬೆಳಗಾವಿ: ಲೋಕಾಯುಕ್ತ ಪೊಲೀಸರಿಂದ ಬೆಳಗಾವಿ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ದೂರು, ಅಹವಾಲು ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಸರ್ಕಾರಿ ಕಛೇರಿಗಳಲ್ಲಿ ಅಧೀಕೃತ ಕೆ ಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಎಂದು ಲೋಕಾಯುಕ್ತ ಪ್ರಭಾರಿ ಪೊಲೀಸ್ ಅಧೀಕ್ಷಕರಾದ ಶ್ರೀ ಆರ್.ಕೆ.ಪಾಟೀಲ್ ರವರು ತಿಳಿಸಿದ್ದಾರೆ.
ಈ ನಿಮಿತ್ಯವಾಗಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಾರ್ಚ 26 ರಿಂದ 28 ರ ವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಶ್ರೀ ಗೋಪಾಲ ಡಿ ಜೋಗಿನ ಅವರು ಮಾರ್ಚ 26 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಬೈಲಹೊಂಗಲ ಪಟ್ಟಣದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಶ್ರೀ ಪಿ.ಜಿ.ನೀಲಮ್ಮನವರ ಅವರು ಮಾರ್ಚ 26 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಅಥಣಿ ಪಟ್ಟಣದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಲೋಕಾಯುಕ್ತ ಪ್ರಭಾರಿ ಪೊಲೀಸ್ ಅಧೀಕ್ಷಕರಾದ ಶ್ರೀ ಆರ್.ಕೆ.ಪಾಟೀಲ್ ರವರು ಮಾರ್ಚ 27 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಹುಕ್ಕೇರಿ ತಾಲೂಕಿನ ಸಂಕೇಶ್ವರದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಆರ್.ಆರ್.ಅಂಬಡಗಟ್ಟಿ ಅವರು ಮಾರ್ಚ 27 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಖಾನಾಪೂರ ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಶ್ರೀ ಗೋಪಾಲ ಡಿ ಜೋಗಿನ, ಅವರು ಮಾರ್ಚ 27 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸವದತ್ತಿ ಪಟ್ಟಣದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಶ್ರೀ ಪಿ.ಆರ್.ಧಬಾಲಿ ಅವರು ಮಾರ್ಚ 27 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ರಾಯಬಾಗ ಪಟ್ಟಣದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಲೋಕಾಯುಕ್ತ ಪ್ರಭಾರಿ ಪೊಲೀಸ್ ಅಧೀಕ್ಷಕರಾದ ಶ್ರೀ ಆರ್.ಕೆ.ಪಾಟೀಲ್ ರವರು ಮಾರ್ಚ 28 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಿತ್ತೂರು ತಾಲೂಕಿನ ಡೊಂಬರಕೊಪ್ಪ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.

ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಆರ್.ಆರ್.ಅಂಬಡಗಟ್ಟಿ ಅವರು ಮಾರ್ಚ 28 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಬೆಳಗಾವಿ ಲೋಕಾಯುಕ್ತ ಕಛೇರಿಯಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಶ್ರೀ ಪಿ.ಆರ್.ಧಬಾಲಿ ಅವರು ಮಾರ್ಚ 28 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ರಾಮದುರ್ಗ ಪಟ್ಟಣದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಶ್ರೀ ಪಿ.ಜಿ.ನೀಲಮ್ಮನವರ ಅವರು ಮಾರ್ಚ 28 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಳಿಗಾಗಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಬೆಳಗಾವಿ ಕಛೇರಿ ದೂರವಾಣಿ ಸಂಖ್ಯೆ: 0831-2421550 ಮತ್ತು 0831-2421922, ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Leave A Reply

 Click this button or press Ctrl+G to toggle between Kannada and English

Your email address will not be published.