ಉತ್ತಮ ಸಮಾಜಕ್ಕಾಗಿ

‘ದಿಶಾ’ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಸಂಸದ ಅಂಗಡಿ ‘ವಸತಿ ಯೋಜನೆ ಸಕಾಲಕ್ಕೆ ಪೂರ್ಣಗೊಳಿಸಿ’

MP Suresh Angadi, who instructed the officials at the 'Disha' meeting 'Complete the house scheme in time '

0

ಬೆಳಗಾವಿ:  (news belagavi“ಜಿಲ್ಲೆಯಲ್ಲಿ 2022ರ ವೇಳೆಗೆ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ವಸತಿ ಒದಗಿಸಬೇಕು ಎಂಬುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಆದ್ದರಿಂದ ಎಲ್ಲ ವಸತಿ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು” ಎಂದು ಸಂಸದ ಸುರೇಶ ಅಂಗಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ, ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ದಿಶಾ’ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ  ನೀಡಿದ ಸಂಸದ ಅಂಗಡಿ  ‘ವಸತಿ ಯೋಜನೆ ಸಕಾಲಕ್ಕೆ ಪೂರ್ಣಗೊಳಿಸಿ’- Tarun kranti 2

ಅಂಬೇಡ್ಕರ್ ಆವಾಸ್ ಯೋಜನೆ, ವಾಜಪೇಯಿ ಆವಾಸ್ ಯೋಜನೆಯ ಪ್ರಗತಿಯನ್ನು ಪರಿಶೀಲಿಸಿದ ಅವರು, ಬಡವರಿಗೆ ಮನೆ ಕಟ್ಟಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದರು.

ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಎರಡು ಯೋಜನೆಗಳಡಿ ಒಟ್ಟು 23 ಸಾವಿರ ಅರ್ಜಿಗಳು ಬಂದಿದ್ದು, ಈಗಾಗಲೇ 15 ಸಾವಿರ ಅರ್ಜಿಗಳನ್ನು ಪರಿಶೀಲಿಸಿ ಅದರಲ್ಲಿ 7 ಸಾವಿರ ಅರ್ಜಿದಾರರನ್ನು ವಸತಿ ಯೋಜನೆಗೆ ಅರ್ಹರು ಎಂದು ಗುರುತಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಶಶಿಧರ ಕುರೇರ್ ವಿವರಿಸಿದರು.

ಕೆಲವು ಭೂ ಪ್ರಕರಣಗಳು ನ್ಯಾಯಾಲಯದಲ್ಲಿರುವುದರಿಂದ ಮನೆ ನಿರ್ಮಿಸಿಕೊಡಲು ವಿಳಂಭವಾಗುತ್ತಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಸುರೇಶ ಅಂಗಡಿ ಅವರು, ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥಗೊಂಡು ಮನೆ ನಿರ್ಮಿಸಿಕೊಡಲು ವಿಳಂಬವಾಗುತ್ತದೆ. ಆದ್ದರಿಂದ ಬೇರೆ ಕಡೆ ಲಭ್ಯವಿರುವ ಸರ್ಕಾರಿ ಜಮೀನು ಗುರುತಿಸಿ ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸುವಂತೆ ಸಲಹೆ ನೀಡಿದರು.

ಅದೇ ರೀತಿ ಈಗಾಗಲೇ ಸಿದ್ಧಪಡಿಸಿರುವ ಫಲಾನುಭವಿಗಳ ಪಟ್ಟಿಯಲ್ಲಿ ಅಕ್ರಮ ವಲಸಿಗರೂ ಇರುವ ಸಾಧ್ಯತೆಗಳಿರುವುದರಿಂದ ಸ್ಥಳೀಯ
ಶಾಸಕರು ಹಾಗೂ ಮೇಯರ್ ಅವರ ಉಪಸ್ಥಿತಿಯಲ್ಲಿ ಮತ್ತೊಂದು ಸಭೆ ನಡೆಸಿ, ಪಟ್ಟಿ ಪರಿಷ್ಕರಿಸುವಂತೆ ಸಂಸದರು ಸೂಚನೆ ನೀಡಿದರು.

ಬೇಡಿಕೆಗೆ ತಕ್ಕಂತೆ ಉದ್ಯೋಗ ಖಾತ್ರಿ ಆಗಲಿ:

ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ನೀಡುವ ಮೂಲಕ ಅವರು ಗುಳೆ ಹೋಗುವುದನ್ನು ತಡೆಯಲು ನರೇಗಾ ಯೋಜನೆ ಜಾರಿಗೆ ತರಲಾಗಿದೆ. ಬರೀ ‘ಗುರಿ’ ಆಧರಿಸಿ ಯೋಜನೆ ಜಾರಿಗೊಳಿಸುವ ಬದಲು ‘ಬೇಡಿಕೆ’ ಆಧರಿಸಿ ಜನರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಸಂಸದ ಸುರೇಶ ಅಂಗಡಿಹೇಳಿದರು.

ಪ್ರಸಕ್ತ ವರ್ಷದಲ್ಲಿ 29.29 ಲಕ್ಷ ಮಾನವ ದಿನಗಳನ್ನು ಸೃಷ್ಟಿಸುವ ಗುರಿ ನೀಡಲಾಗಿದ್ದು, ಗುರಿ ಮೀರಿ ಸಾಧನೆ ಮಾಡುವ ವಿಶ್ವಾಸವಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ತಿಳಿಸಿದರು.

ಅದೇ ರೀತಿ ಮನೆ ನಿರ್ಮಾಣ ಮಾಡಿಕೊಳ್ಳುವರಿಗೆ ನೆರವು ನೀಡುವ ಉದ್ದೇಶದಿಂದ ‘ಗೃಹಖಾತ್ರಿ’ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮನೆ ನಿರ್ಮಾಣಕ್ಕೆ ನರೇಗಾ ಯೋಜನೆ ಅಡಿಯಲ್ಲಿ ವಿವಿಧ ಹಂತದಲ್ಲಿ ಒಟ್ಟು 90 ದಿನಗಳ ಉದ್ಯೋಗಾವಕಾಶ ಕೂಡ ಕಲ್ಪಿಸಲಾಗಿದೆ ಎಂದು ಅವರು ವಿವರಿಸಿದರು.

ಶಾಲೆಗಳ ದುರಸ್ಥಿಗೆ ಸೂಚನೆ:                                                                                                                     ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಶತಮಾನ ಕಂಡ ಶಾಲೆಗಳ ಕಟ್ಟಡಗಳು ದುರಸ್ಥಿಯಲ್ಲಿದ್ದರು ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ. ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನಹರಿಸಿ ಅಂತಹ ಶಾಲೆಗಳ ಕಟ್ಟಡ ದುರಸ್ಥಿ ಕೈಗೊಳ್ಳಬೇಕೆಂದು ಸಂಸದ
ಅಂಗಡಿ ಅವರು ಸೂಚನೆ ನೀಡಿದರು.

ಇಲಾಖೆಯಲ್ಲಿ ಅನುದಾನ ಲಭ್ಯವಿಲ್ಲದಿದ್ದರೆ ಅಂತಹ ಶಾಲೆಗಳಲ್ಲಿ ಕಲಿತು ಇಂದು ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳನ್ನು ಅಥವಾ ಹಳೆಯ ವಿದ್ಯಾರ್ಥಿಗಳನ್ನು ಸಂಪರ್ಕಿಸಿ, ಧನಸಹಾಯ ಪಡೆದು ಸಹ ಶಾಲೆಗಳ ದುರಸ್ಥಿಯನ್ನು ಮಾಡಿಸಬಹುದಾಗಿದೆ ಎಂದು ಸಿಇಒ
ರಾಮಚಂದ್ರನ್ ಅವರು ಸಲಹೆ ನೀಡಿದರು.

ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರವೇ ದುರಸ್ಥಿ ಮಾಡಿಸಬೇಕು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯ ಸಮಸ್ಯೆಯಾಗುತ್ತಿದ್ದು, ಅಂತಹ ಗ್ರಾಮಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಬೇಕೆಂದು ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಶ್ರೀಮತಿ
ಆಶಾ ಐಹೊಳೆ ಅವರು ಹೇಳಿದರು.

ಫಸಲ್ ವಿಮಾ ಯೋಜನೆ ಜಾಗೃತಿ ಮೂಡಿಸಿ:
ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯ ಕುರಿತು ರೈತರಲ್ಲಿ ಜಾಗೃತಿ ಮೂಡಿಸಬೇಕು. ಬೆಳೆಗಳಿಗೆ ವಿಮೆ ಮಾಡಿಸುವಂತೆ ಅಧಿಕಾರಿಗಳು ಎಲ್ಲ ತಾಲೂಕು ಹಾಗೂ ಗ್ರಾಮಗಳಲ್ಲಿ ವ್ಯಾಪಕ ಪ್ರಚಾರ ಮಾಡಬೇಕೆಂದು ಸಂಸದ ಸುರೇಶ ಅಂಗಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮಣ್ಣು ಪರೀಕ್ಷಾ ಕಾರ್ಡ್ ಬಗ್ಗೆ ಹೆಚ್ಚಿನ ರೈತರಿಗೆ ಗೊತ್ತೆ ಇಲ್ಲ. ಆದ್ದರಿಂದ ಕೃಷಿ ಇಲಾಖೆಯ ಅಧಿಕಾರಿಗಳು ಮಣ್ಣು ಪರೀಕ್ಷಾ ಕಾರ್ಡ್‍ನ ಪ್ರಯೋಜನ ಹಾಗೂ ಅದನ್ನು ಯಾವ ರೀತಿ ಉಪಯೋಗಿಸಬೇಕೆಂಬುದನ್ನು ಪ್ರಚಾರ ಮಾಡಿ, ರೈತರಿಗೆ ಮನವರಿಕೆ ಮಾಡಿಕೊಡಬೇಕೆಂದು ತಿಳಿಸಿದರು.

ಭಿತ್ತಿಪತ್ರ ಬಿಡುಗಡೆ:
ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಕುರಿತ ಮಾಹಿತಿ ಇರುವ ಭಿತ್ತಿಪತ್ರವನ್ನು ಸಂಸದ ಸುರೇಶ ಅಂಗಡಿ ಹಾಗೂ ಗಣ್ಯರು
ವೇದಿಕೆಯಲ್ಲಿ ಬಿಡುಗಡೆಗೊಳಿಸಿದರು.

‘ದಿಶಾ’ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ  ನೀಡಿದ ಸಂಸದ ಅಂಗಡಿ  ‘ವಸತಿ ಯೋಜನೆ ಸಕಾಲಕ್ಕೆ ಪೂರ್ಣಗೊಳಿಸಿ’- Tarun kranti 1

ನಂತರ ಮಾತನಾಡಿದ ಸಂಸದ ಸುರೇಶ ಅಂಗಡಿ, ಇದು ಕೇಂದ್ರ ಸರ್ಕಾರದ ನೂತನ ಯೋಜನೆಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕ ಉದ್ಯಮಗಳಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಹೊರತುಪಡಿಸಿ ಉಳಿದ ಎಲ್ಲ ಗರ್ಭಿಣಿಯರು ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. ಆದ್ದರಿಂದ ಅರ್ಹರು ಈ ಯೋಜನೆಯನ್ನು ಸದುಪಯೋಗಿಸಿಕೊಳ್ಳಬೇಕೆಂದು ಹೇಳಿದರು.

ಈ ಯೋಜನೆಯ ಕುರಿತು ಹೆಚ್ಚಿನ ಪ್ರಚಾರದ ಅವಶ್ಯಕತೆ ಇದ್ದು, ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ, ಸಾರ್ವಜನಿಕ ಆಸ್ಪತ್ರೆಗಳು ಹಾಗೂ
ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ಯೋಜನೆಯ ಕುರಿತ ಭಿತ್ತಿಪತ್ರಗಳನ್ನು ಅಳವಡಿಸಬೇಕು. ಯೋಜನೆಯ ಕುರಿತು
ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.

ಸ್ವಚ್ಛ ಸರ್ವೇಕ್ಷಣ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಸ್ವಚ್ಛ ಭಾರತ ಮಿಷನ್, ಗ್ರಾಮ ಜ್ಯೋತಿ, ಸಂಸದರ ಆದರ್ಶ ಗ್ರಾಮ,
ಅಮೃತ್, ಸ್ಮಾರ್ಟ್ ಸಿಟಿ, ಫಸಲ್ ವಿಮಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿಯ ಕುರಿತು ಚರ್ಚಿಸಲಾಯಿತು.

ಜಿಲ್ಲೆಯ ವಿವಿಧ ತಾಲೂಕು ಪಂಚಾಯತ ಅಧ್ಯಕ್ಷರು ತಮ್ಮ ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಪ್ರಸ್ತಾಪ ಮಾಡಿದರು.

ಮಹಾನಗರ ಪಾಲಿಕೆ, ಆರೋಗ್ಯ, ಶಿಕ್ಷಣ, ಹೆಸ್ಕಾಂ, ಬಿ.ಎಸ್.ಎನ್.ಎಲ್, ಮಹಿಳಾಮತ್ತು ಮಕ್ಕಳ ಕಲ್ಯಾಣ, ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಎಲ್ಲ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯತ ಅಧ್ಯಕ್ಷರು ಸೇರಿದಂತೆ ಇನ್ನಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಎಸ್.ಬಿ. ಮುಳ್ಳಳ್ಳಿ ಸಭೆ ನಿರ್ವಹಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.