ಉತ್ತಮ ಸಮಾಜಕ್ಕಾಗಿ

ಬಹುಗ್ರಾಮ ಕುಡಿಯುವ ನೀರು ಯೋಜನೆ ಪರಿಶೀಲನೆ- ತಕ್ಷಣ ಕಾಮಗಾರಿ ಪೂರ್ಣಗೊಳಿಸಲು ಸಚಿವ ಕೃಷ್ಣ ಭೈರೇಗೌಡ ಸೂಚನೆ

Multi Village Drinking Water Planning Review -Minister Krishna Bhairegouda instructed to complete the work soon

0

ಬೆಳಗಾವಿ: (news belagaviಬೈಲಹೊಂಗಲ ತಾಲ್ಲೂಕಿನ ಬುಡರಕಟ್ಟಿ ಸೇರಿದಂತೆ 23 ಗ್ರಾಮಗಳಿಗೆ ಕುಡಿಯುವ ನೀರು
ಪೂರೈಸಲು ಆರಂಭಿಸಲಾಗಿರುವ 23 ಕೋಟಿ ರೂಪಾಯಿ ವೆಚ್ಚದ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಯನ್ನು
ಐದಾರು ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಬಹುಗ್ರಾಮ ಕುಡಿಯುವ ನೀರು ಯೋಜನೆ  ಪರಿಶೀಲನೆ- ತಕ್ಷಣ ಕಾಮಗಾರಿ ಪೂರ್ಣಗೊಳಿಸಲು ಸಚಿವ  ಕೃಷ್ಣ ಭೈರೇಗೌಡ ಸೂಚನೆ- Tarun kranti
ಬೈಲಹೊಂಗಲ ತಾಲ್ಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಪರಿಶೀಲನೆ ಬಳಿಕ ಆನಿಗೋಳ ಗ್ರಾಮ ಪಂಚಾಯತಿ ಆವರಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.
ರಾಜ್ಯದಲ್ಲಿ 2498 ಶುದ್ಧ ಕುಡಿಯುವ ನೀರಿನ ಘಟಕಗಳು ನಾನಾ ಕಾರಣಗಳಿಂದ ಬಂದ್ ಆಗಿದ್ದು ಅವುಗಳನ್ನು ದುರಸ್ತಿ ಮಾಡುವ ಕೆಲಸ
ಚುರುಕಿನಿಂದ ನಡೆದಿದೆ.
ಈಗಾಗಲೇ 950 ಘಟಕಗಳನ್ನು ದುರಸ್ತಿ ಮಾಡಲಾಗಿದೆ ಉಳಿದ ಘಟಕಗಳನ್ನು 15 ದಿನಗಳಲ್ಲಿ ದುರಸ್ತಿ ಮಾಡಿ ಜನರಿಗೆ ಶುದ್ಧ
ಕುಡಿಯುವ ನೀರು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಮಳೆ ರಸ್ತೆ ಹಾನಿ- ದುರಸ್ತಿಗೆ ಹಣ ಬಿಡುಗಡೆ:
ಇತ್ತೀಚೆಗೆ ಮಳೆಯಿಂದಾಗಿ ರಸ್ತೆ ಹಾಳಾಗಿದ್ದು, ಇಂತಹ ರಸ್ತೆಗಳ ತುರ್ತು ದುರಸ್ತಿಗೆ ಶಾಸಕರ ಅಧ್ಯಕ್ಷತೆಯ ಟಾಸ್ಕಫೋರ್ಸ ಗೆ 122
ಕೋಟಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಸುಮಾರು ಒಂದು ನೂರು ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗಿದೆ. ಈ ಹಣದಲ್ಲಿ ತಕ್ಷಣವೇ ರಸ್ತೆ ದುರಸ್ತಿ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

ಬಹಿಲು ಬಹಿರ್ದೆಸೆ ಮುಕ್ತ ರಾಜ್ಯ:
ರಾಜ್ಯ ಸರ್ಕಾರವು ಬರುವ ಅಕ್ಟೋಬರ್ 2ರ ವೇಳೆಗೆ ಕರ್ನಾಟಕ ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತ ರಾಜ್ಯವನ್ನಾಗಿಸುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನ ನಡೆದಿದೆ. ಸಾರ್ವಜನಿಕರು ಇದಕ್ಕೆ ಕೈಜೋಡಿಸಬೇಕು ಎಂದು ಸಚಿವ ಕೃಷ್ಣ ಭೈರೇಗೌಡ ಮನವಿ ಮಾಡಿಕೊಂಡರು.                                                                                                                      ತನಗಿರುವ ಮನೆಯ ಒಂದು ಕೋಣೆಯನ್ನೇ ತೆರವುಗೊಳಿಸಿ ಶೌಚಾಲಯ ನಿರ್ಮಿಸಿದ ಬೈಲಹೊಂಗಲ ತಾಲ್ಲೂಕಿನ ಆನಿಗೋಳ ಗ್ರಾಮದ
ಫಕ್ಕೀರವ್ವ ಶೌಚಾಲಯ ನಿರ್ಮಾಣದಲ್ಲಿ ಎಲ್ಲರಿಗೂ ಮಾದರಿಯಾಗಿದ್ದಾರೆ.
ಮಾದರಿ ಮಹಿಳೆ ಫಕ್ಕೀರವ್ವ ಅಂತಹವರ ಸಂಖ್ಯೆ ಹೆಚ್ಚಾದಾಗ ಮಾತ್ರ ಬಯಲು ಬಹಿರ್ದೆಸೆ ಮುಕ್ತ ರಾಜ್ಯ ನಿರ್ಮಾಣ ಸಾಧ್ಯ ಎಂದು
ಅಭಿಪ್ರಾಯಪಟ್ಟರು.
ಬೈಲಹೊಂಗಲ ತಾಲೂಕಿನ ನಯಾನಗರ ಸೇತುವೆ ಬಳಿ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಜಾಕವೆಲ್, ಪಟ್ಟಿಹಾಳ ಕೆ.ಬಿ. ಗ್ರಾಮದ ಬಳಿಯ ನೀರು ಶುದ್ಧೀಕರಣ ಘಟಕ, ನರೇಗಾ ಯೋಜನೆ ಅಡಿ ನಿರ್ಮಿಸುತ್ತಿರುವ ಕೆರೆ ಕಾಮಗಾರಿ, ಆನಿಗೋಳ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಚಿವ ಕೃಷ್ಣ ಭೈರೃಗೌಡ ಅವರು ಪರಿಶೀಲಿಸಿದರು.

ಬಹುಗ್ರಾಮ ಕುಡಿಯುವ ನೀರು ಯೋಜನೆ  ಪರಿಶೀಲನೆ- ತಕ್ಷಣ ಕಾಮಗಾರಿ ಪೂರ್ಣಗೊಳಿಸಲು ಸಚಿವ  ಕೃಷ್ಣ ಭೈರೇಗೌಡ ಸೂಚನೆ- Tarun kranti 1
ಇದಾದ ಬಳಿಕ ಆನಿಗೋಳ ಗ್ರಾಮ ಪಂಚಾಯತಿ ಆವರಣದಲ್ಲಿ ಇರುವ ಅರಳಿ ಕಟ್ಟೆಯಲ್ಲಿ ಕುಳಿತ ಸಚಿವರು, ಗ್ರಾಮದಲ್ಲಿ ಶೌಚಾಲಯಗಳ ನಿರ್ಮಾಣ ಹಾಗೂ ಅವುಗಳ ಬಳಕೆಯ ಕುರಿತು ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು.

ಬಹುಗ್ರಾಮ ಕುಡಿಯುವ ನೀರು ಯೋಜನೆ  ಪರಿಶೀಲನೆ- ತಕ್ಷಣ ಕಾಮಗಾರಿ ಪೂರ್ಣಗೊಳಿಸಲು ಸಚಿವ  ಕೃಷ್ಣ ಭೈರೇಗೌಡ ಸೂಚನೆ- Tarun kranti 2
ಶಾಸಕರಾದ ಮಹಾಂತೇಶ ಕೌಜಲಗಿ, ಮಹಾಂತೇಶ ದೊಡ್ಡಗೌಡರ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅತೀಕ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್. ಸೇರಿದಂತೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.