ಉತ್ತಮ ಸಮಾಜಕ್ಕಾಗಿ

ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿಸುತ್ತೇವೆ ನರೇಂದ್ರ ಮೋದಿ

Narendra Modi to make Karnataka Congress free state

0

ಬೆಂಗಳೂರು:(tarun kranti) ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು. ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಸರ್ಕಾರದ ಬಗ್ಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾಂಗ್ರೆಸ್ ಎಕ್ಸಿಟ್‌ ಗೇಟ್‌ನಲ್ಲಿ ನಿಂತಿದೆ. ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿಸುತ್ತೇವೆ ಎಂದರು.
ಕಳೆದ ನಾಲ್ಕೂವರೆ ವರ್ಷಗಳಲ್ಲಿ ರಾಜ್ಯಕ್ಕೆ ಕೇಂದ್ರ ಸರಕಾರದಿಂದ ಹೆಚ್ಚು ಅನುದಾನ ಬಿಡುಗಡೆಯಾಗಿದೆ. ಆದರೆ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಸಮರ್ಪಕವಾಗಿ ಬಳಕೆಯಾಗಿಲ್ಲ ಎಂದು ಆರೋಪಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ಆಗಿದ್ದರೆ ಯೋಜನೆ ನಿಮ್ಮನ್ನು ತಲುಪುತ್ತಿತ್ತು ಎಂದು ಹೇಳಿದರು.
ರಾಜ್ಯ ರೈತರ ಸಮಸ್ಯಗಳ ಬಗ್ಗೆ ಮಾತನಾಡಿದ ಪ್ರಧಾನಿ, ಈ ಹಿಂದೆ ರಾಜ್ಯದ ರೈತರು ಗೊಬ್ಬರಕ್ಕಾಗಿ ಲಾಠಿ ಏಟು ತಿನ್ನಬೇಕಾಗಿತ್ತು. ಆದರೆ ಈಗ ಆ ಪರಿಸ್ಥಿತಿ ಇಲ್ಲ. ಕೇಂದ್ರ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಅನೇಕ ಯೋಜನೆ ಜಾರಿಗೊಳಿಸಿದೆ. ಭಾರತದೆಲ್ಲೆಡೆ ಟೊಮೆಟೋ, ಆಲೂಗೆಡ್ಡೆ, ಈರುಳ್ಳಿ ಬೆಳೆಗಳು ಕಾಣಸಿಗುತ್ತವೆ. ಈ ಬೆಳೆಗಳಿಗಾಗಿ ಆಪರೇಷನ್ ಗ್ರೀನ್ ಯೋಜನೆ ಜಾರಿಗೊಳಿಸಲಾಗಿದೆ. ಇದರಿಂದ ಕೃಷಿಕರ ಆದಾಯ ಹೆಚ್ಚಲಿದೆ ಎಂದು ಹೇಳಿದ ಪ್ರಧಾನಿ ಮಹಾದಾಯ ವಿಚಾರವನ್ನು ಮಾತ್ರ ಪ್ರಸ್ತಾಪ ಮಾಡಲಿಲ್ಲ.

ಕೇಂದ್ರ ಸರ್ಕಾರ ಹಗಲು ರಾತ್ರಿ ಎನ್ನದೆ ದೇಶಕಾಗಿ ದುಡಿಯುತ್ತಿದ್ದು, ಜನರ ಜೀವನವನ್ನು ಸುಲಭಗೊಳಿಸಿದ್ದೇವೆ. ರಾಜ್ಯ ಅಪರಾಧಿಗಳ ರಾಜ್ಯವಾಗುತ್ತಿದ್ದು, ಕರ್ನಾಟಕದಲ್ಲಿ ಯುವಕರ ಹತ್ಯೆಯಾಗುತ್ತಿವೆ. ರಾಜ್ಯ ಅಪರಾಧ ಮುಕ್ತವಾಗುವ ಜೊತೆಗೆ, ಭ್ರಷ್ಟಾಚಾರ ಮುಕ್ತವಾಗುವ ಜೊತೆಗೆ, ಕಾಂಗ್ರೆಸ್ ಮುಕ್ತವಾಗುವ ಸಮಯ ಹತ್ತಿರ ಬಂದಿದೆ. ಭ್ರಷ್ಟಾಚಾರದಲ್ಲಿ ಸರ್ಕಾರ ಹೊಸ-ಹೊಸ ದಾಖಲೆಗಳನ್ನು ಮಾಡುತ್ತಿದ್ದು, ಮರಳು, ಕಲ್ಲುಗಣಿಗಾರಿಕೆ ಮಾಫಿಯಾ ಹೆಚ್ಚಾಗಿ ನಡೆಯುತ್ತಿವೆ. ಇವುಗಳಿಗೆ ನೀವು ವೋಟಿನ ಮೂಲಕ ಉತ್ತರ ಕೊಡಬೇಕು ಎಂದು ತಿಳಿಸಿದರು.

ಸಮಾರಂಭದ ವೇದಿಕೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದ ಗೌಡ, ಅನಂತ್ ಕುಮಾರ್ ಹೆಗಡೆ, ಸಂಸದ ಬಿ.ಶ್ರೀರಾಮುಲು, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ, ಮಾಜಿ ಸಚಿವರಾದ ಆರ್.ಅಶೋಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.Narendra Modi to make Karnataka Congress free state

Leave A Reply

 Click this button or press Ctrl+G to toggle between Kannada and English

Your email address will not be published.