ಉತ್ತಮ ಸಮಾಜಕ್ಕಾಗಿ

ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ಏ.13 ರಂದು ಬೆಳಗಾವಿ ಜಿಲ್ಲೆಯಲ್ಲಿ

National President Amit Shah is in Belgaum district on April 13th

0

ಬೆಳಗಾವಿ:(news belgaum) ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬುವ ನಿಟ್ಟಿನಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ಏ.13 ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮಧ್ಯೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ ಶಾ ಅವರು ಗೋಕಾಕದಲ್ಲಿ ರೋಡ ಶೋ ನಡೆಸಲಿದ್ದಾರೆ ಎಂದು ಸಂಸದ ಸುರೇಶ ಅಂಗಡಿ ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಾಯಕರ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸುರೇಶ ಅಂಗಡಿ ಆರೋಪ ಮಾಡಿದರು. ಗೋಕಾಕನಲ್ಲಿ ಬೇರು ಬಿಟ್ಟಿರುವ ಪಿಡಿಒ, ತಹಸೀಲ್ದಾರ ಮತ್ತಿತರ ಅಧಿಕಾರಿಗಳ ಮೇಲೆ ತೀವ್ರ ನಿಗಾ ವಹಿಸಬೇಕು ಎಂದು ಚುನಾವಣಾಧಿಕಾರಿಗೆ ಅಂಗಡಿ ಒತ್ತಾಯಿಸಿದರು. ಗೋಕಾಕನಲ್ಲಿ ಸರಕಾರಿ ಅಧಿಕಾರಿಗಳು ಪ್ರಭಾವಿ ರಾಜಕಾರಣಿಗಳ ಒತ್ತಡಕ್ಕೆ ಮಣೆಯುತ್ತಿದ್ದಾರೆ. ಇವರು ಸರಕಾರಿ ನೌಕರರೋ ಇಲ್ಲವೇ ಪ್ರಭಾವಿ ನಾಯಕರ ಸೇವಕರೊ ಎಂಬಂತಾಗಿದೆ ಎಂದರು. ಜಿಲ್ಲೆಯಲ್ಲಿ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ದೂಷಿಸಿದರು.
ಅಮಿತ್ ಶಾ ಮೊದಲು ಕಿತ್ತೂರ ಗೆ ಆಗಮಿಸಿ ಚೆನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಮುಧೋಳಕ್ಕೆ ತೆರಳಲಿದ್ದಾರೆ. ನಂತರ ಬೆಳಗಾವಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ, ನಿಪ್ಪಾಣಿಯಲ್ಲಿ ಮಹಿಳಾ ಸಮಾವೇಶ ಹಾಗೂ ಗೋಕಾಕನಲ್ಲಿ ರೋಡ ಶೋ ನಡೆಸಲಿದ್ದಾರೆ‌ ಎಂದರು.
ಬಿಜೆಪಿ‌  ಮುಖಂಡ ರಾಜೇಂದ್ರ ಹರಕುಣಿ, ಅನಿಲ ಬೆನಕೆ, ಡಾ. ರವಿ ಪಾಟೀಲ, ಶ್ರೀನಿವಾಸ ಬಿಸನಕೊಪ್ಪ, ಎಂ.ಬಿ.ಝಿರಲಿ, ಆರ್. ಎಸ್. ಮುತಾಲಿಕ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿದ್ದರು.National President Amit Shah is in Belgaum district on April 13th

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.