ಉತ್ತಮ ಸಮಾಜಕ್ಕಾಗಿ

ಕಾಯಿಲೆಗಳ ಬಗ್ಗೆ ಎಚ್ಚರ ವಹಿಸಲು ಸೂಚನೆ ಮೃತರ ಕುಟುಂಬಕ್ಕೆ ಪರಿಹಾರ ಒದಗಿಸಿ: ಸಿಇಒ ರಾಮಚಂದ್ರನ್

Notification for Diseases Provide compensation to the deceased family: CEO Ramachandran

0

ಬೆಳಗಾವಿ: (news belgaum)ಶಸ್ತ್ರಚಿಕಿತ್ಸೆ ವಿಫಲವಾಗಿ ಮೃತಪಟ್ಟ ಪ್ರತಿಭಾ ವೀರೇಂದ್ರ ಕಾಮಟೆ ಅವರ ಕುಟುಂಬಕ್ಕೆ 24 ಗಂಟೆಯಲ್ಲಿಯೇ 2 ಲಕ್ಷ ಪರಿಹಾರವನ್ನು ವಿತರಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್. ಆರ್ ಅವರು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ಮೇ 22) ಹಮ್ಮಿಕೊಂಡಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.Notification for Diseases Provide compensation to the deceased family: CEO Ramachandran
2017ರ ಡಿಸೆಂಬರ್ 23 ರಂದು ಟ್ಯುಬೆಕ್ಟಮಿ ಶಸ್ತ್ರಚಿಕಿತ್ಸೆ ಕೈಗೊಳ್ಳುವಾಗ ಪ್ರತಿಭಾ ವೀರೇಂದ್ರ ಕಾಮಟೆ ಅವರು ಶಸ್ತ್ರಚಿಕಿತ್ಸೆ ವಿಫಲವಾಗಿ ಮೃತಪಟ್ಟಿದ್ದು, 5 ತಿಂಗಳಾದರು ಮೃತರಿಗೆ ಪರಿಹಾರ ಒದಗಿಸಿಲ್ಲವೆಂಬ ಕುರಿತು ಆಕ್ರೋಶ ವ್ಯಕ್ತಪಡಿಸಿದ ಸಿಇಒ ಅವರು, 24 ಗಂಟೆಗಳಲ್ಲಿಯೇ ಪರಿಹಾರ ಧನವನ್ನು ಸಂಬಂಧಪಟ್ಟವರ ಕುಟುಂಬಕ್ಕೆ ಒದಗಿಸಬೇಕೆಂದು ಸೂಚಿಸಿದರು. ಇಂತಹ ಪ್ರಕರಣಗಳು ಇದ್ದರೆ ಆದಷ್ಟು ಬೇಗ ಪರಿಹರಿಸುವಂತೆ ತಿಳಿಸಿದರು.
News Belgaum-ಕಾಯಿಲೆಗಳ ಬಗ್ಗೆ ಎಚ್ಚರ ವಹಿಸಲು ಸೂಚನೆ ಮೃತರ ಕುಟುಂಬಕ್ಕೆ ಪರಿಹಾರ ಒದಗಿಸಿ: ಸಿಇಒ ರಾಮಚಂದ್ರನ್ಇತ್ತೀಚೆಗೆ ಕೇರಳದಲ್ಲಿ ನಿಪಾ ವೈರಸ್ ಎಂಬ ಸೋಂಕು ಕಂಡುಬಂದಿದ್ದು, ಇದರಿಂದ ಕೆಲವರು ಮೃತಪಟ್ಟಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿ ಈ ಕಾಯಿಲೆಯ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಜನರಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು.
ಡೆಂಗ್ಯೂ ಕಾಯಿಲೆಯ ಬಗ್ಗೆ ತಿಳಿವಳಿಕೆ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮೇ 26 ರೊಳಗಾಗಿ ರಾಮದುರ್ಗದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯನ್ನು ಆಚರಿಸಲು ಸೂಚಿಸಿದರು.
ಪ್ರತಿದಿನ ವಿವಿಧ ಬಗೆಯ ಕಾಯಿಲೆಗಳು ಕಂಡುಬರುತ್ತಿದ್ದು, ಕಾಯಿಲೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಕಾಯಿಲೆಗಳು ಹರಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕೆಂದು ಹೇಳಿದರು.
ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮಾಜದ ಆರೋಗ್ಯಕ್ಕಾಗಿ ಶ್ರಮಿಸುತ್ತಿದ್ದು, ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಹಾಗೂ ವಿವಿಧ ಸಾಮಗ್ರಿಗಳನ್ನು ಖರೀದಿಸಲು ಅಲ್ಪಾವಧಿ ಟೆಂಡರ್‍ಗಳನ್ನು ಕರೆಯಲು ಸಿಇಒ ರಾಮಚಂದ್ರನ್ ಅವರು ಸೂಚನೆ ನೀಡಿದರು. ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಮಾಡಿದರು.
2017-18ನೇ ಸಾಲಿನ ಕಾರ್ಯಕಲ್ಪ ಕಾರ್ಯಕ್ರಮದಡಿಯಲ್ಲಿ ಪ್ರಶಸ್ತಿ ಹಾಗೂ ಸ್ಕೋಚ್ ಸ್ವಸ್ಥ ಭಾರತ ಪ್ರಶಸ್ತಿ ಚಿಕ್ಕೋಡಿಗೆ ಲಭಿಸಿದ್ದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ನಿಪಾ ವೈರಸ್‍ನಿಂದ ಮೃತಪಟ್ಟವರಿಗೆ ಶ್ರದ್ಧಾಂಜಲಿ:
ಇತ್ತೀಚೆಗೆ ಕೇರಳದಲ್ಲಿ ಕಂಡುಬಂದಿರುವ ನಿಪಾ ವೈರಸ್‍ನಿಂದ ಮೃತಪಟ್ಟವರಿಗೆ ಸಭೆಯಲ್ಲಿ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಶೃದ್ಧಾಂಜಲಿ ಸಲ್ಲಿಸಲಾಯಿತು. ವಿವಿಧ ಕಾರ್ಯಕ್ರಮಗಳ ಆಯೋಜನೆ ಹಾಗೂ ಇನ್ನಿತರ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಜಿಲ್ಲಾ ಆರೋಗ್ಯಾಧಿಕಾರಿ ಅಪ್ಪಾಸಾಹೇಬ ನರಹಟ್ಟಿ, ಜಿಲ್ಲಾ ಸಹಾಯಕ ಆರೋಗ್ಯಾಧಿಕಾರಿ ಎಸ್.ಬಿ. ಮುನಿಹಾಳ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರಕಾಶ ಹಕಾರ್ಟಿ ಸೇರಿದಂತೆ ಎಲ್ಲ ತಾಲೂಕಿನ ಆರೋಗ್ಯಾಧಿಕಾರಿಗಳು, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಹಾಗೂ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು. Notification for Diseases Provide compensation to the deceased family: CEO Ramachandran

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.