ಉತ್ತಮ ಸಮಾಜಕ್ಕಾಗಿ

ಮಾನಸ ಸರೋವರ ಯಾತ್ರೆಗೆ ತೆರಳಿರುವ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ: ಸಚಿವ ಆರ್.ವಿ ದೇಶಪಾಂಡೆ

Pilgrims to Mansa Lake Yatra are safe: Minister RV Deshpande

0

ಬೆಂಗಳೂರು: (news belagaviಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿರುವ ರಾಜ್ಯದ ಯಾತ್ರಾರ್ಥಿಗಳು ಇದುವರೆಗೆ ಸುರಕ್ಷಿತವಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ವಿ ದೇಶಪಾಂಡೆ ವಿಧಾನಸಭೆಯಲ್ಲು ತಿಳಿಸಿದ್ದಾರೆ.

ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ವಿಶ್ವೇಶ್ವರಹೆಗಡೆ ಕಾಗೇರಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಭಾರೀ ಮಳೆಯಿಂದಾಗಿ ಯಾತ್ರಾರ್ಥಿಗಳಿಗೆ ತೊಂದರೆ ಆಗಿರುವುದು ನಿಜ. ಯಾತ್ರೆಗೆ ತೆರಳಿದ್ದ 525 ಯಾತ್ರಾರ್ಥಿಗಳ ಪೈಕಿ ನಮ್ಮ ರಾಜ್ಯದ 250 ಯಾತ್ರಾರ್ಥಿಗಳಿದ್ದು, ಅವರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದರು.

ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಯಾತ್ರಾರ್ಥಿಗಳ ರಕ್ಷಣೆಗೆ ದಾವಿಸುವಂತೆ ಕೇಂದ್ರದ ಗೃಹ ಇಲಾಖೆ, ವಿದೇಶಾಂಗ ವ್ಯವಹಾರಗಳ ಇಲಾಖೆಗೂ ಮನವಿ ಮಾಡಲಾಗಿದೆ. ಯಾತ್ರಾರ್ಥಿಗಳಿಗೆ ಊಟ, ತಿಂಡಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಭಾರೀ ಮಳೆಯಿಂದಾಗಿ ಹೆಲಿಕಾಫ್ಟರ್ ಬಳಸಲು ಸಾಧ್ಯವಾಗುತ್ತಿಲ್ಲ.

ಮಾನಸ ಸರೋವರ ಯಾತ್ರೆಗೆ ತೆರಳಿರುವ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ: ಸಚಿವ ಆರ್.ವಿ ದೇಶಪಾಂಡೆ- Tarun kranti
ನೇಪಾಳದಲ್ಲಿರುವ ಭಾರತೀಯ ರಾಯಭಾರಿ ಕೂಡ ಈ ಯಾತ್ರಾರ್ಥಿಗಳ ಸಹಾಯಕ್ಕೆ ದಾವಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ನೇಪಾಳದ ಸೇನಾ ಹೆಲಿಕಾಫ್ಟರ್ ಮೂಲಕ ಅನಾರೋಗ್ಯಕ್ಕೊಳಗಾದವರು, ವಯಸ್ಸಾದವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರಲು ಪ್ರಯತ್ನ ಮಾಡುವಂತೆ ಅಲ್ಲಿರುವ ನಮ್ಮ ರಾಯಭಾರಿಗೆ ಕೋರಲಾಗಿದೆ. ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ದೆಹಲಿಯಲ್ಲಿರುವ ಸ್ಥಾನಿಕ ಆಯುಕ್ತರಿಗೆ ಸೂಚನೆ ನೀಡಿ ಯಾತ್ರಾರ್ಥಿಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಹೇಳಿದರು.

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಅಮರನಾಥ ಯಾತ್ರೆ, ಕೈಲಾಸ ಮಾನಸ ಸರೋವರ ಯಾತ್ರಾರ್ಥಿಗಳು ಅತಿಯಾದ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕುಟುಂಬದ ಸದಸ್ಯರು, ಸಂಬಂಧಿಕರು ಆತಂಕಕ್ಕೆ ಒಳಗಾಗಿದ್ದು, ಇದೊಂದು ಗಂಭೀರವಾದ ವಿಚಾರವಾಗಿದೆ. ಯಾತ್ರಾರ್ಥಿಗಳಿಗೆ ಊಟವಿಲ್ಲದೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಅವರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಮಾಹಿತಿ ಒದಗಿಸುವಂತೆ ಆಗ್ರಹಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.