ಉತ್ತಮ ಸಮಾಜಕ್ಕಾಗಿ

PLD ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಯಲ್ಲಿ ರಾಜಕೀಯ ಮಾಡಬೇಡಿ :ಮಾಜಿ ಸಚಿವ ಸತೀಶ ಜಾರಕಿಹೊಳಿ ಸಲಹೆ‌

news belagavi

0

ಬೆಳಗಾವಿ: (news belagavi)PLD ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ರಾಜಕೀಯ ಮಾಡಬೇಡಿ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಸಲಹೆ‌ ನೀಡಿದ್ದಾರೆ. ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಕಳೆದ ಇಪ್ಪತ್ತು ವರ್ಷಗಳಿಂದ PLD ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಗಳಿಗೆ ಅವಿರೋಧ ಆಯ್ಕೆ ನಡೆಯುತ್ತ ಬಂದು ಸಂಪ್ರದಾಯ ಸೃಷ್ಟಿಯಾಗಿದೆ. ಈ ಬಾರಿಯೂ ಸಾಂಪ್ರದಾಯಿಕವಾಗಿ ಅವಿರೋಧ ಆಯ್ಕೆಯೇ ನಡೆದಿದ್ದು, ಹೀಗೆ ಆಯ್ಕೆ ಆದ ಮೇಲೆ ಆ ಸಂಪ್ರದಾಯ ಮುರಿಯಲು ಲಕ್ಷ್ಮೀ ಹೆಬ್ಬಾಳಕರ ಪ್ರಯತ್ನಿಸುವುದು ಸರಿಯಲ್ಲ ಎಂದು ಹೇಳಿದರು. ಬ್ಯಾಂಕಿನ ಅಭಿವೃದ್ಧಿಗೆ ಪೂರಕವಾಗುವಂತೆ ಅಧ್ಯಕ್ಷ – ಉಪಾಧ್ಯಕ್ಷರನ್ನು ಆಯ್ಕೆ ಮಾಡುವ ಸಂಪ್ರದಾಯ ಎಂದೆಂದಿನಂತೆ ಮುಂದುವರಿಯಬೇಕು.
ಈ ಸಂಸ್ಥೆಯನ್ನು ರಾಜಕೀಯ ರಹಿತವಾಗಿ ಬೆಳೆಸಬೇಕು ಎಂದು ಸಲಹೆ ನೀಡಿದರು. ಅಷ್ಟಕ್ಕೂ ಅವಿರೋಧ ಆಯ್ಕೆ ಯಾರೋ ಒಬ್ಬರು ಮಾಡಿದ್ದಲ್ಲ. ಬದಲಾಗಿ ಆ ಭಾಗದ ಮುಖಂಡರು, ಶಾಸಕರು ಜತೆಯಾಗಿ ಸಮಾಲೋಚನೆ ನಡೆಸಿ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಆಯ್ಕೆ ಮಾಡಲಾಗಿರುತ್ತದೆ ಎಂದು ಹೇಳಿದರು. ಅಧ್ಯಕ್ಷ -ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಂದಕ್ಕೆ ಹೋಗಿದ್ದಕ್ಕೆ ಬೆರೆಯದೇ ಕಾರಣವಿದೆ. ಯಾರದೋ ಒತ್ತಡಕ್ಕೆ ಮಣಿದು ಅದನ್ನು ಮುಂದಕ್ಕೆ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.

Leave A Reply

 Click this button or press Ctrl+G to toggle between Kannada and English

Your email address will not be published.