ಉತ್ತಮ ಸಮಾಜಕ್ಕಾಗಿ

ಪೂರ್ವಭಾವಿ ಸಭೆ ಡಾ||ಅಂಬೇಡ್ಕರ್ ಜಯಂತಿಯನ್ನು ಹಬ್ಬದಂತೆ ಆಚರಿಸಿ – ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ

Preliminary Meeting Dr. Ambedkar Jayanti celebrated as a festival - Deputy Commissioner S. Jiaullah

0

ಬೆಳಗಾವಿ: (news belagavi)ಭಾರತರತ್ನ ಡಾ|| ಬಿ.ಆರ್. ಅಂಬೇಡ್ಕರ್ ಅವರು ಇಡೀ ದೇಶದ ಆಸ್ತಿಯಾಗಿದ್ದು, ಏಪ್ರಿಲ್ 14 ರಂದು ಡಾ|| ಅಂಬೇಡ್ಕರ್ ಅವರ ಜಯಂತಿಯನ್ನು ಕೇವಲ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸದೇ, ಎಲ್ಲರೂ ಸೇರಿಕೊಂಡು ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಹಾಗೂ ಡಾ|| ಬಾಬುಜಗಜೀವನ್ ರಾಮ್ ಅವರ ಜಯಂತಿ ಆಚರಣೆ ನಿಮಿತ್ಯ ಶನಿವಾರ (ಮಾ.31) ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಏ.14 ರಂದು ಬೆಳಿಗ್ಗೆ ಡಾ|| ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ನಗರದ ಅಶೋಕ ವೃತ್ತದಿಂದ ಡಾ|| ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ರೂಪಕ ವಾಹನಗಳ ಮೆರವಣಿಗೆ ನಡೆಯಲಿದ್ದು, 50ಕ್ಕೂ ಹೆಚ್ಚು ರೂಪಕ ವಾಹನಗಳು ಹಾಗೂ 10ಕ್ಕೂ ಹೆಚ್ಚು ಕಲಾತಂಡಗಳು ಭಾಗವಹಿಸಲಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪಹಾರ, ಊಟ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಸೂಚಿಸಿದರು.
ಪೂರ್ವಭಾವಿ ಸಭೆ ಡಾ||ಅಂಬೇಡ್ಕರ್ ಜಯಂತಿಯನ್ನು ಹಬ್ಬದಂತೆ ಆಚರಿಸಿ  - ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ- Tarun krantiಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಡಾ|| ಅಂಬೇಡ್ಕರ್ ಜಯಂತಿಯ ನಿಮಿತ್ಯ ಅಳವಡಿಸುವ ಪ್ಲೆಕ್ಸ್ ಹಾಗೂ ಬ್ಯಾನರ್‍ಗಳಲ್ಲಿ ಯಾವುದೇ ಕಾರಣಕ್ಕೂ ರಾಜಕಾರಣಿಗಳ ಭಾವಚಿತ್ರಗಳನ್ನು ಹಾಕಬಾರದು. ಆ ರೀತಿಯ ಬ್ಯಾನರ್‍ಗಳು ಕಂಡುಬಂದರೇ ಯಾವುದೇ ಮುಲಾಜಿಲ್ಲದೇ ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸೂಚಿಸಿದರು. ಯಾವುದೇ ವ್ಯಕ್ತಿಗಳ ಭಾವಚಿತ್ರಗಳನ್ನು ಅಳವಡಿಸದೇ ಕೇವಲ ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಸಂದೇಶಗಳನ್ನು ಮಾತ್ರ ಹಾಕುವುದು ಉತ್ತಮ ಎಂದು ಸಲಹೆ ನೀಡಿದರು.
ಜಿಲ್ಲೆಯ ಎಲ್ಲ ಶಾಲಾ, ಕಾಲೇಜು, ಗ್ರಾಮ ಪಂಚಾಯತ, ಸಹಕಾರಿ ಸಂಘಗಳು ಸೇರಿದಂತೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಡಾ|| ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲು ಸೂಚನೆ ನೀಡಲಾಗುವುದು. ಜೊತೆಗೆ ಖಾಸಗಿ ಶಾಲಾ, ಕಾಲೇಜುಗಳಲ್ಲಿಯೂ ಜಯಂತಿ ಆಚರಣೆಗೆ ಸೂಚನೆ ನೀಡಲಾಗುವುದು ಎಂದು ಹೇಳಿದರು.
ಏ.13 ರಿಂದ ಏ.14 ರವರೆಗೆ ನಗರದ ಪ್ರಮುಖ ವೃತ್ತಗಳು ಹಾಗೂ ಎಲ್ಲ ಸರ್ಕಾರಿ ಕಚೇರಿಗಳಿಗೂ ದೀಪಾಲಂಕಾರ ಮಾಡಬೇಕೇಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಏ.14 ರಂದು ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು ಎಂದು ಹೇಳಿದರು.
ರೂಪಕ ವಾಹನಗಳ ಮೆರವಣಿಗೆಗೆ ಸಾರಿಗೆ ಇಲಾಖೆಯ ವತಿಯಿಂದ 30 ವಾಹನಗಳ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು. ಜೊತೆಗೆ ನಗರ ಪೊಲೀಸ್ ಆಯುಕ್ತ ಡಾ|| ಡಿ.ಸಿ. ರಾಜಪ್ಪ ಹಾಗೂ ಎಸ್‍ಪಿ ಸುಧೀರಕುಮಾರ ರೆಡ್ಡಿ ಅವರು ತಲಾ 10 ವಾಹನಗಳ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.
ಡಾ|| ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ಒಬ್ಬರು ಸಂಪನ್ಮೂಲ ವ್ಯಕ್ತಿಯನ್ನು ಆಹ್ವಾನಿಸಬೇಕು ಹಾಗೂ ಕಲಾತಂಡಗಳನ್ನು ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಎಸ್ಸಿ, ಎಸ್ಟಿ ಸಮುದಾಯದ ತಲಾ ಐದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಬೇಕೆಂದು ಹೇಳಿದರು.

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಎಲ್ಲ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಿ, ಅಧಿಕಾರಿಗಳ ಸೂಚನೆಗಳನ್ನು ಪಾಲಿಸಿ, ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಮುಖಂಡರ ಮನವಿ:
ಜಯಂತಿಯ ಆಮಂತ್ರಣ ಪತ್ರಿಕೆ ಹಾಗೂ ಬ್ಯಾನರ್‍ಗಳಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಕೇವಲ ಡಾ|| ಬಿ.ಆರ್. ಅಂಬೇಡ್ಕರ್ ಎಂದು ಮುದ್ರಿಸದೇ, ಭಾರತರತ್ನ ಡಾ|| ಬಾಬಾಸಾಹೇಬ ಅಂಬೇಡ್ಕರ್ ಎಂದು ಬರೆಯಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಮನವಿ ಮಾಡಿದರು.
ಕಾರ್ಯಕ್ರಮ ಹಾಗೂ ಮೆರವಣಿಗೆ ಮಾರ್ಗದಲ್ಲಿ ಆ್ಯಂಬುಲೆನ್ಸ್, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇನ್ನಿತರ ಅಗತ್ಯ ವ್ಯವಸ್ಥೆ ಮಾಡಬೇಕೆಂದು ಮುಖಂಡರು ಮನವಿ ಮಾಡಿದರು.News Belgaum-ಪೂರ್ವಭಾವಿ ಸಭೆ ಡಾ||ಅಂಬೇಡ್ಕರ್ ಜಯಂತಿಯನ್ನು ಹಬ್ಬದಂತೆ ಆಚರಿಸಿ - ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ

  • ಡಾ|| ಬಾಬುಜಗಜೀವನ್ ರಾಮ್ ಜಯಂತಿ:

ಏ.5 ರಂದು ಹಸಿರುಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನಿ ಡಾ|| ಬಾಬುಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಅಗತ್ಯ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಏ.5 ರಂದು ಸಂಗಮೇಶ್ವರ ನಗರದಲ್ಲಿರುವ ಡಾ|| ಬಾಬುಜಗಜೀವನ್ ರಾಮ್ ಉದ್ಯಾನದಿಂದ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಗೆ ಸಾರಿಗೆ ಇಲಾಖೆಯಿಂದ ರೂಪಕ ವಾಹನಗಳ ವ್ಯವಸ್ಥೆ ಮಾಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಹಾರ, ಊಟ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಸೂಚಿಸಿದರು.
ಡಾ|| ಬಾಬುಜಗಜೀವನ್ ರಾಮ್ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ಒಬ್ಬರು ಸಂಪನ್ಮೂಲ ವ್ಯಕ್ತಿಯನ್ನು ಆಹ್ವಾನಿಸಬೇಕು ಹಾಗೂ ಕಲಾತಂಡಗಳನ್ನು ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಎಸ್ಸಿ, ಎಸ್ಟಿ ಸಮುದಾಯದ ತಲಾ ಐದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಬೇಕೆಂದು ಹೇಳಿದರು.
ಜಿಲ್ಲೆಯ ಎಲ್ಲ ಶಾಲಾ, ಕಾಲೇಜು, ಗ್ರಾಮ ಪಂಚಾಯತ, ಸಹಕಾರಿ ಸಂಘಗಳು ಸೇರಿದಂತೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಡಾ|| ಬಾಬುಜಗಜೀವನ್ ರಾಮ್ ಅವರ ಜಯಂತಿಯನ್ನು ಆಚರಿಸಲು ಸೂಚನೆ ನೀಡಲಾಗುವುದು ಎಂದು ಹೇಳಿದರು.
ನಗರ ಪೊಲೀಸ್ ಆಯುಕ್ತರಾದ ಡಾ|| ಡಿ.ಸಿ. ರಾಜಪ್ಪ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಧೀರಕುಮಾರ ರೆಡ್ಡಿ ಅವರು ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಎನ್. ಮುನಿರಾಜು ಅವರು ನಿರೂಪಿಸಿದರು.
ಅಪರ ಜಿಲ್ಲಾಧಿಕಾರಿ ಎಚ್.ಬಿ. ಬೂದೆಪ್ಪ, ಮಹಾನಗರ ಪಾಲಿಕೆ, ಸಾರಿಗೆ, ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸೇರಿದಂತೆ ವಿವಿಧ ಸಮುದಾಯಗಳ ಜನರು ಸಭೆಯಲ್ಲಿ ಪಾಲ್ಗೊಂಡಿದ್ದರು.Preliminary Meeting Dr. Ambedkar Jayanti celebrated as a festival – Deputy Commissioner S. Jiaullah

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.