ಉತ್ತಮ ಸಮಾಜಕ್ಕಾಗಿ

ಪೂರ್ವಭಾವಿ ಸಭೆ ಅದ್ಧೂರಿ ಬಸವೇಶ್ವರ ಜಯಂತಿ ಆಚರಣೆಗೆ ನಿರ್ಧಾರ

Preliminary meeting is a decision to celebrate the great Basaveshwara Jayanti

0

ಬೆಳಗಾವಿ:(news belagavi) ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಏ.18 ರಂದು ಜಿಲ್ಲಾಡಳಿತದ ವತಿಯಿಂದ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ (ಏ.06) ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಏ.18 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಗೋವಾವೇಸ್‍ದಲ್ಲಿರುವ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರ ಪುತ್ಥಳಿಗೆ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ನಂತರ ಬಸವೇಶ್ವರ ಉದ್ಯಾನವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.
ಸಂಜೆ 4 ಗಂಟೆಗೆ ಚನ್ನಮ್ಮ ವೃತ್ತದಿಂದ ಬಸವೇಶ್ವರ ಭಾವಚಿತ್ರ ಹಾಗೂ ಕಲಾತಂಡಗಳ ಮೆರವಣಿಗೆ ನಡೆಯಲಿದ್ದು, ಚನ್ನಮ್ಮ ವೃತ್ತದಿಂದ ಆರಂಭವಾಗುವ ಮೆರವಣಿಗೆ ಕಾಕತಿವೇಸ್, ರವಿವಾರ ಪೇಟ ಮೂಲಕ ಸಾಗಿ ಲಿಂಗರಾಜ ಕಾಲೇಜು ಮೈದಾನ ತಲುಪಲಿದೆ ಎಂದು ತಿಳಿಸಿದರು.
ಮೆರವಣಿಗೆಯಲ್ಲಿ ಸರ್ಕಾರದ ರೂಪಕ ವಾಹನಗಳು ಪಾಲ್ಗೊಳ್ಳಬೇಕು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ವಿವಿಧ ಕಲಾತಂಡಗಳನ್ನು ಆಹ್ವಾನಿಸಬೇಕು. ಮೆರವಣಿಗೆಯ ಮಾರ್ಗದಲ್ಲಿ ಕೆಎಂಎಫ್ ವತಿಯಿಂದ ಮಜ್ಜಿಗೆ ವಿತರಿಸಬೇಕೆಂದು ತಿಳಿಸಿದರು.
ಬಸವೇಶ್ವರ ಜಯಂತಿಯ ನಿಮಿತ್ಯ ನಗರದ ಪ್ರಮುಖ ವೃತ್ತಗಳಲ್ಲಿ ಬಸವಣ್ಣನವರ ಸಂದೇಶಗಳನ್ನು ಸಾರುವ ಭಿತ್ತಿಪತ್ರಗಳು, ಬ್ಯಾನರ್‍ಗಳನ್ನು ಪ್ರದರ್ಶಿಸಲು ಸೂಚಿಸಿದರು.
ಮೆರವಣಿಗೆ ಸಾಗುವ ಮಾರ್ಗದಲ್ಲಿ ಮಾಂಸ ಹಾಗೂ ಮದ್ಯ ಮಾರಾಟದ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬಸವೇಶ್ವರ ಜಯಂತಿಯ ನಿಮಿತ್ಯ ಅಳವಡಿಸುವ ಪ್ಲೆಕ್ಸ್ ಹಾಗೂ ಬ್ಯಾನರ್‍ಗಳಲ್ಲಿ ಯಾವುದೇ ಕಾರಣಕ್ಕೂ ರಾಜಕಾರಣಿಗಳ ಭಾವಚಿತ್ರಗಳನ್ನು ಹಾಕಬಾರದು. ಆ ರೀತಿಯ ಬ್ಯಾನರ್‍ಗಳು ಕಂಡುಬಂದರೇ ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸೂಚಿಸಿದರು.
News Belgaum-ಪೂರ್ವಭಾವಿ ಸಭೆ ಅದ್ಧೂರಿ ಬಸವೇಶ್ವರ ಜಯಂತಿ ಆಚರಣೆಗೆ ನಿರ್ಧಾರಚುನಾವಣಾ ನೀತಿ ಸಂಹಿತೆ ಇರುವುದರಿಂದ ಮೆರವಣಿಗೆಯನ್ನು ರಾತ್ರಿ 10 ಗಂಟೆಯೊಳಗಾಗಿ ಮುಕ್ತಾಯಗೊಳಿಸಬೇಕು. ಮೆರವಣಿಗೆಯಲ್ಲಿ ಶಾಂತಿ ಕಾಪಾಡಬೇಕು ಎಂದು ಸಮಾಜದ ಮುಖಂಡರಿಗೆ ತಿಳಿಸಿದರು.
ಕಾರ್ಯಕ್ರಮಕ್ಕೆ ಪ್ರಾದೇಶಿಕ ಆಯುಕ್ತರಾದ ಪಿ.ಎ. ಮೇಘಣ್ಣವರ ಹಾಗೂ ಬೆಳಗಾವಿ ಉತ್ತರ ವಲಯ ಐಜಿಪಿ ಅಲೋಕ ಕುಮಾರ ಅವರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲು ತೀರ್ಮಾನಿಸಲಾಯಿತು.
ಬಸವೇಶ್ವರರ ಜೀವನ ಚರಿತ್ರೆಯ ಕುರಿತು ಉಪನ್ಯಾಸ ನೀಡಲು ಒಬ್ಬರು ಉಪನ್ಯಾಸಕರನ್ನು ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ವಚನ ಗಾಯನ ಆಯೋಜಿಸಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು.
ಬಸವಣ್ಣನವರ ಭಾವಚಿತ್ರ ಅಳವಡಿಸಲು ಸೂಚನೆ:
ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಬಸವೇಶ್ವರ ಅವರ ಭಾವಚಿತ್ರವನ್ನು ಅಳವಡಿಸಬೇಕೆಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದರು ಕೂಡ ಕೆಲವು ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಬಸವೇಶ್ವರರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅಳವಡಿಸುವಂತೆ ಜಿಲ್ಲಾಡಳಿತದಿಂದ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಈಗ ಮತ್ತೊಮ್ಮೆ ಈ ಬಗ್ಗೆ ಎಲ್ಲ ಕಚೇರಿಗಳಿಗೆ ಸುತ್ತೋಲೆ ಹೊರಡಿಸಿ, ಸೂಚನೆ ನೀಡಲಾಗುವುದು. ಸೂಚನೆಯನ್ನು ಪಾಲಿಸದಿದ್ದರೇ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ಅವರು ಭರವಸೆ ನೀಡಿದರು.
ಡಿಸಿಪಿ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಶಶಿಧರ ನಾಡಗೌಡ ಸೇರಿದಂತೆ ಪೊಲೀಸ್, ಕೆಎಂಎಫ್, ಆರೋಗ್ಯ, ಸಾರಿಗೆ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಮಹಾನಗರ ಪಾಲಿಕೆಯ ಮಾಜಿ ಮೇಯರ್ ಸಿದ್ದನಗೌಡ ಪಾಟೀಲ, ಸಮಾಜದ ಮುಖಂಡರಾದ ಕಲ್ಯಾಣರಾವ್ ಮುಚಳಂಬಿ, ವಿ.ಕೆ. ಪಾಟೀಲ, ಶ್ರೀಮತಿ ಆಶಾ ಯಮಕನಮರಡಿ, ಶ್ರೀಮತಿ ವೀಣಾ ಸಂಕ, ಶ್ರೀಮತಿ ಸುಜಾತಾ ಮಮದಾಪುರ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಶೈಲ್ ಕರಿಶಂಕರಿ ಅವರು ಕಾರ್ಯಕ್ರಮ ನಿರ್ವಹಿಸಿದರು.Preliminary meeting is a decision to celebrate the great Basaveshwara Jayanti

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.