ಉತ್ತಮ ಸಮಾಜಕ್ಕಾಗಿ

ಪೂರ್ವಭಾವಿ ಸಭೆ ಅದ್ಧೂರಿ ಕೆಂಪೆಗೌಡ ಜಯಂತಿ ಆಚರಣೆಗೆ ನಿರ್ಧಾರ

Preliminary meeting is a decision to celebrate the hugely successful Kempe Gowda Jayanti

0

ಬೆಳಗಾವಿ:(news belgaum) ನಾಡಪ್ರಭು ಕೆಂಪೆಗೌಡ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಸಿದ್ಧತೆಯನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಾಡಪ್ರಭು ಕೆಂಪೆಗೌಡ ಜಯಂತಿಯ ನಿಮಿತ್ಯ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂನ್ 27 ರಂದು ಕೆಂಪೆಗೌಡ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಡಳಿತದ ವತಿಯಿಂದ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಕಾರ್ಯಕ್ರಮಕ್ಕೆ ಆಮಂತ್ರಣ ಪತ್ರಿಕೆಯನ್ನು ಶೀಘ್ರವೇ ಮುದ್ರಿಸಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಎಲ್ಲ ಸಮಾಜದ ಮುಖಂಡರಿಗೆ ಆಮಂತ್ರಣ ನೀಡಬೇಕು ಎಂದು ತಿಳಿಸಿದರು.
ಎಲ್ಲ ತಾಲೂಕುಗಳಲ್ಲಿಯೂ ತಾಲೂಕಾ ಆಡಳಿದ ವತಿಯಿಂದ ಕೆಂಪೆಗೌಡ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಬೇಕು. ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಹೇಳಿದರು.
ಕಳೆದ ವóರ್ಷ ಕೆಂಪೆಗೌಡ ಜಯಂತಿ ಆಚರಣೆ ಸಂದರ್ಭದಲ್ಲಿ ಜಿಲ್ಲಾ ಕೆಂಪೆಗೌಡ ಜಯಂತಿ ಉತ್ಸವ ಸಮಿತಿ ವತಿಯಿಂದ ಕೆಂಪೆಗೌಡರ ಜೀವನ, ಸಾಧನೆ ಕುರಿತ ಕಿರು ಪುಸ್ತಕವನ್ನು ಬಿಡುಗಡೆಗೊಳಿಸಲಾಗಿತ್ತು. ಆ ಪುಸ್ತಕದ ಸಾವಿರ ಪ್ರತಿಗಳನ್ನು ಈ ವರ್ಷವೂ ಮುದ್ರಿಸಿ ಕಾರ್ಯಕ್ರಮದಲ್ಲಿ ವಿತರಿಸಬೇಕು ಹಾಗೂ ಶಾಲಾ, ಕಾಲೇಜು ಮಕ್ಕಳಿಗೂ ಆ ಪುಸ್ತಕವನ್ನು ವಿತರಿಸುವ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಎಚ್.ಬಿ. ಬೂದೆಪ್ಪ ಅವರು ಮಾತನಾಡಿ, ಕುಮಾರ ಗಂಧರ್ವ ರಂಗಮಂದಿರಲ್ಲಿ ಶಾಮಿಯಾನ ಹಾಗೂ ಧ್ವನಿವರ್ಧಕಗಳ ವ್ಯವಸ್ಥೆ ಮಾಡಬೇಕು. ವೇದಿಕೆಯನ್ನು ಸುಂದರವಾಗಿ ಅಲಂಕಾರ ಮಾಡಬೇಕು. ನಗರದ ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ಮಾಡುವಂತೆ ಹೇಳಿದರು.
ಶಾಲಾ, ಕಾಲೇಜು ಹಾಗೂ ವಸತಿ ನಿಲಯಗಳ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು. ಮಕ್ಕಳಿಗೆ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ವೇದಿಕೆ ಕಾರ್ಯಕ್ರಮದ ನಂತರ ಕೆಂಪೆಗೌಡರ ಕುರಿತಾದ ಕಿರುನಾಟಕ ಅಥವಾ ರೂಪಕವನ್ನು ಏರ್ಪಡಿಸಲು ಸೂಚಿಸಿದರು.

News Belgaum-ಪೂರ್ವಭಾವಿ ಸಭೆ ಅದ್ಧೂರಿ ಕೆಂಪೆಗೌಡ ಜಯಂತಿ ಆಚರಣೆಗೆ ನಿರ್ಧಾರಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಶೈಲ ಕರಿಶಂಕರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ಉಪನ್ಯಾಸ ಕಾರ್ಯಕ್ರಮಕ್ಕೆ ಪ್ರೊ|| ಕೆ.ಎಸ್. ಕೌಜಲಗಿ ಅವರನ್ನು ಆಹ್ವಾನಿಸಲು ಹಾಗೂ ವೇದಿಕೆ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಎನ್. ಮುನಿರಾಜು, ಹಿರಿಯ ಸಾಹಿತಿ ಯ.ರು. ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.Preliminary meeting is a decision to celebrate the hugely successful Kempe Gowda Jayanti 

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.