ಉತ್ತಮ ಸಮಾಜಕ್ಕಾಗಿ

ಅದ್ದೂರಿ ಜಯಂತಿ ಆಚರಣೆಗೆ ನಿರ್ಧಾರ  ಪೂರ್ವಭಾವಿ ಸಭೆ

Preliminary meeting to celebrate the grand janitis

0

ಬೆಳಗಾವಿ: (news belgaum)ದೇವರ ದಾಸಿಮಯ್ಯ, ಭಗವಾನ್ ಮಹಾವೀರ ಹಾಗೂ ಶಿವಶರಣೆ ಅಕ್ಕಮಹಾದೇವಿ ಅವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಅವರು ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾ.22 ರಂದು ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ನಡೆಯಲಿದೆ. ದೇವರ ದಾಸಿಮಯ್ಯ ಭಾವಚಿತ್ರ ಮೆರವಣಿಗೆ ಸಾಗುವ ರಸ್ತೆಯಲ್ಲಿ ರಸ್ತೆ ಕಾಮಗಾರಿ ಕೈಗೊಂಡಿದ್ದು ಸಂಚಾರಕ್ಕೆ ತೊಂದರೆಯಾಗಿದೆ. ಈ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾ.29 ರಂದು ಭಗವಾನ್ ಮಹಾವೀರ ಅವರ ಜನ್ಮ ಕಲ್ಯಾಣಕ (ಜಯಂತಿ) ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಹೇಳಿದರು.
ಭಗವಾನ ಮಹಾವೀರ ಅವರ ಜಯಂತಿಯ ಬದಲಾಗಿ ಜನ್ಮ ಕಲ್ಯಾಣಕ ಎಂದು ಆಮಂತ್ರಣ ಪತ್ರಿಕೆ ಹಾಗೂ ಬ್ಯಾನರ್‍ಗಳಲ್ಲಿ ಮುದ್ರಿಸಬೇಕೆಂದು ಸಮಾಜದ ಮುಖಂಡರು ಮನವಿ ಮಾಡಿದರು.
ಜನ್ಮ ಕಲ್ಯಾಣಕ (ಜಯಂತಿ) ದಂದು ಮದ್ಯ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಬೇಕು. ನಗರದ ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ಮಾಡಬೇಕೆಂದು ಮುಖಂಡರು ಮನವಿ ಮಾಡಿದರು.
ಮಾ.31 ರಂದು ಶಿವಶರಣೆ ಅಕ್ಕಮಹಾದೇವಿ ಅವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಗುವುದು. ಸರ್ಕಾರದ ವತಿಯಿಂದ ಇದೇ ಪ್ರಥಮ ಬಾರಿಗೆ ಅಕ್ಕಮಹಾದೇವಿ ಅವರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಅಧಿಕಾರಿಗಳು, ಮುಖಂಡರು ಹಾಗೂ ಮಹಿಳಾ ಸಂಘದ ಸದಸ್ಯರಿಗೆ ತಿಳಿಸಿದರು.
ಮೂರು ಜಯಂತಿ ಕಾರ್ಯಕ್ರಮಗಳಿಗೂ ಉಪನ್ಯಾಸಕರಿಗೆ ಆಹ್ವಾನ ನೀಡಬೇಕು ಹಾಗೂ ಮೆರವಣಿಗೆಗೆ ಕಲಾ ತಂಡಗಳನ್ನು ಆಹ್ವಾನಿಸಲು ಸೂಚಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಕರಾದ ಶ್ರೀಶೈಲ ಕರಿಶಂಕರಿ, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಶಶಿಧರ ನಾಡಗೌಡ, ಎಸಿಪಿ ಲಕ್ಷ್ಮೀನಾರಾಯಣ, ಪೊಲೀಸ್ ಇನ್ಸ್‍ಪೆಕ್ಟರ್ ಎಸ್.ಎಫ್. ಲೋಹಾರ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು, ವಿವಿಧ ಸಮಾಜಗಳ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.