ಉತ್ತಮ ಸಮಾಜಕ್ಕಾಗಿ

ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು

Prime Minister Modi accused the state government of neglecting it

0

ಮೋದಿಯನ್ನು ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಬರಮಾಡಿಕೊಂಡ ಬಿಜೆಪಿ ಮುಖಂಡರು

ಧಾರವಾಡ:(news belgaum) ದಾವಣಗೆರೆಯಲ್ಲಿ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಧಾರವಾಡದ ಪ್ರಮುಖ ಬಿಜೆಪಿ ಮುಖಂಡರು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ಮಾಜಿ ಶಾಸಕಿ ಸೀಮಾ ಮಸೂತಿ, ಮಹೇಶ ಟೆಂಗಿನಕಾಯಿ, ಶಿವಾನಂದ ಮುತ್ತಣ್ಣವರ, ಬಿಜೆಪಿ ರಾಜ್ಯ ಸ್ಲಂ ಮೋರ್ಚಾದ ಉಪಾಧ್ಯಕ್ಷ ಈರೇಶ ಅಂಚಟಗೇರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ಶಿಷ್ಟಾಚಾರದ ಪ್ರಕಾರ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ ಹಾಗೂ ಮೇಯರ್ ಡಿ.ಕೆ.ಚೌಹಾಣ್ ಕೂಡ ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು. ನಂತರ ಪ್ರಧಾನಿ ಮೋದಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ತೆರಳಿದರು.


ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು.

ದಾವಣಗೆರೆ: (tarun kranti)ಕೇಂದ್ರ ಸರ್ಕಾರ ಅನುದಾನ ನೀಡಿದೆ. ಆದರೆ ರಾಜ್ಯ ಸರ್ಕಾರ ಅನುದಾನ ಬಳಕೆ ಮಾಡಿಕೊಳ್ಳದೆ ಉಳಿಸಿಕೊಂಡಿದೆ. ಸ್ವಚ್ಚತಾ ಅಭಿಯಾನದ ಬಗ್ಗೆಯೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು.

ದಾವಣಗೆರೆಯಲ್ಲಿ ಬಿಎಸ್ ವೈ 75 ನೇ ಜನ್ಮದಿನಾಚಾರಣೆ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ರೈತ ಸಮಾವೇಶದಲ್ಲಿ  ಭಾಗವಹಿಸಿ ಮುಷ್ಠಿ ಅಕ್ಕಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇದು ಸಿದ್ದರಾಮಯ್ಯ ಸರ್ಕಾರವಲ್ಲ. ಸೀದಾ ರುಪಾಯಿ ಸರ್ಕಾರ. 10 ರಿಂದ 20 ಪರ್ಸೆಂಟ್ ಕೊಟ್ಟರೆ ಮಾತ್ರ ಕೆಸಲವಾಗತ್ತದೆ ಎಂದು ಮತ್ತೆ ಗಂಭೀರ ಆರೋಪಿಸಿದರು.

ಒಂದು ಕುಟುಂಬ  60 ವರ್ಷ ಆಡಳಿತ ನಡೆಸಿದೆ. ದೇಶದಲ್ಲಿನ ಬಹುತೇಕ ಸಮಸ್ಯೆಗಳಿಗೆ ಕಾಂಗ್ರೆಸ್‌ ಸಂಸ್ಕೃತಿಯೇ ಕಾರಣ. ದೇಶದ ಅಭಿವೃದ್ಧಿಯಾಗಬೇಕಾದರೆ ಗ್ರಾಮಗಳು ಬದಲಾಗಬೇಕು, ರೈತರು ಅಭಿವೃದ್ಧಿ ಹೊಂದಬೇಕು.  ಕಳೆದ 60 ತಿಂಗಳಲ್ಲಿ ರೈತರ ಬೆಳೆಗಳಿಗೆ ಬೆಂಬಲ ಬೆಲೆ ದೊರೆಕಿಸಲಾಗಿದೆ ಎಂದರು.

ರೈತರ ಅಭಿವೃದ್ಧಿಗಾಗಿ ಮಿಷನ್‌ ಗ್ರೀನ್‌ ಯೋಜನೆ ಆರಂಭ ಮಾಡಲಾಗಿದ್ದು, ರೈತರಿಗೆ ಅದರಿಂದ ಅನುಕೂಲವಾಗಲಿದೆ ಎಂದು ಅವರು ಹೇಳಿದರು.

ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರು ಬಿಎಸ್ ವೈ ಗೆ  ನೇಗಿಲು ನೀಡಿ ರೈತಬಂಧು ಎಂಬ ಬಿರುದು ನೀಡಿದರು. ಬಿಜೆಪಿ ನಾಯಕರು ಪ್ರಧಾನಿ ಮೋದಿಗೆ ಹಸಿರು ಶಾಲು ಹೊಡಿಸಿ ವೇದಿಕೆ ಮೇಲೆ ಸತ್ಕರಿಸಿದರು.

ಯಡಿಯೂರಪ್ಪ, ಕೇಂದ್ರ ಮಂತ್ರಿಗಳಾದ ಅನಂತಕುಮಾರ್, ಸದಾನಂದಗೌಡ, ರಾಜ್ಯ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಸಿ.ಟಿ.ರವಿ, ರಾಜ್ಯ ಉಸ್ತುವಾರಿ ಮುರುಳೀಧರರಾವ್ ಇತರರು ಇದ್ದರು.Prime Minister Modi accused the state government of neglecting it

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.