ಉತ್ತಮ ಸಮಾಜಕ್ಕಾಗಿ

ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಹಾನಿ ಸಮೀಕ್ಷೆ ಮಾಡಲು ಕೇಂದ್ರ ಸರ್ಕಾರ ಕೂಡಲೇ ಎರಡು ತಂಡಗಳನ್ನು ಕೂಡಲೇ ಕಳುಹಿಸುವುದಾಗಿ: ಪ್ರಧಾನಿ ನರೇಂದ್ರ ಮೋದಿ ಭರವಸೆ

news belagavi

0

ನವದೆಹಲಿ:(news belgaum) ಕೊಡಗು, ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಹಾನಿ ಸಮೀಕ್ಷೆ ಮಾಡಲು ಕೇಂದ್ರ ಸರ್ಕಾರ ಕೂಡಲೇ ಎರಡು ತಂಡಗಳನ್ನು ಕೂಡಲೇ ಕಳುಹಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ನೆರೆ ಪರಿಸ್ಥಿತಿಗೆ ತುತ್ತಾಗಿರುವ ಕೊಡಗು ಹಾಗೂ ನೆರೆಯ ಜಿಲ್ಲೆಗಳಿಗೆ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗಾಗಿ ₹2000 ಕೋಟಿ. ಗಳ ಪ್ಯಾಕೇಜ್ ಘೋಷಿಸಿ ಅನುದಾನ ಬಿಡುಗಡೆ ಮಾಡುವಂತೆ ಮಾಡಿದ ಮನವಿಗೆ ಪ್ರಧಾನಿ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಕೊಡಗು, ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹ ಭೂಕುಸಿತ ಸಂಭವಿಸಿ ಜನ-ಜಾನುವಾರುಗಳು ಜೀವ ಕಳೆದುಕೊಂಡಿವೆ ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಕಳೆದ 118 ವರ್ಷಗಳಲ್ಲೇ ದಾಖಲೆ ಮಳೆ ಸುರಿದಿದ್ದು, ಹಲವರ ಮನೆಗಳಿಗೆ ತೀವ್ರ ಹಾನಿಯುಂಟಾಗಿದೆ. ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳಿಗೆ ಅಪಾರ ನಷ್ಟ ಸಂಭವಿಸಿದೆ. ಅತಿವೃಷ್ಟಿಯಿಂದಾಗಿ ಈ ಜಿಲ್ಲೆಗಳಲ್ಲಿ ಒಟ್ಟು ₹3705.87 ಕೋಟಿ. ನಷ್ಟವೆಂದು ಅಂದಾಜಿಸಲಾಗಿದೆ ಎಂದು ವಿವರಿಸಿದರು.
ಪುನರ್ವಸತಿ ಮತ್ತು ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೊಡಗು ಮತ್ತಿತರ ಜಿಲ್ಲೆಗಳಿಗೆ ₹2000 ರೂಪಾಯಿಗಳ ಪ್ಯಾಕೇಜ್ ಘೋಷಿಸಿ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ರಾಜ್ಯ ಸಚಿವ ಸಂಪುಟದ ನಿಯೋಗದ ಜೊತೆ ದೆಹಲಿಗೆ ತೆರಳಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರಧಾನಿ ಮೋದಿಗೆ ಮನವಿ ಸಲ್ಲಿಸಿದರು.
ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಮೇಕೆದಾಟಿನ ಬಗ್ಗೆ ಪ್ರಧಾನಿ ಮೋದಿ ಜೊತೆ ಮಾತನಾಡಿದ್ದಾರೆ ಎಂದು ಹೇಳಿದ ಅವರು, ಈ ಮೊದಲೇ ನಾನು ಪ್ರಧಾನಿ ಭೇಟಿ ಬಗ್ಗೆ ಈ ಬಿಜೆಪಿ ಸಂಸದರಿಗೆ ತಿಳಿಸಿತ್ತಾದರೂ ಅವರ್ಯಾರು ಮೋದಿ ಬಳಿ ಬಂದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಂತೆಯೇ ಕರ್ನಾಟಕದ ಒಳನಾಡಿನಲ್ಲಿ 17 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, ಬರ ನಷ್ಟದ ಪ್ರಮಾಣವನ್ನೂ ಅಂದಾಜು ಮಾಡಲಾಗುತ್ತಿದೆ. ಈ ಕುರಿತು ನಾಳೆ ಸಂಪುಟ ಉಪಸಮಿತಿ ಸಭೆ ನಡೆಸಿ ಪ್ರಸ್ತಾವನೆಯನ್ನು ಅಂತಿಮಗೊಳಿಸಲಿದೆ. ಅದರಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ನಿಯೋಗವು ಪ್ರಧಾನಿಯವರಿಗೆ ಮಾಹಿತಿ ನೀಡಿತು.
ಮಾಜಿ ಪ್ರಧಾನಿ ಹಾಗೂ ಹಾಸನ ಸಂಸದ ಹೆಚ್.ಡಿ ದೇವೇಗೌಡ, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಕಂದಾಯ ಸಚಿವ ಆರ್. ವಿ ದೇಶಪಾಂಡೆ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಗ್ರಾಮೀಣಾಭಿ ವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮುಖ್ಯಮಂತ್ರಿಗಳ ನಿಯೋಗದಲ್ಲಿ ಇದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.