ಉತ್ತಮ ಸಮಾಜಕ್ಕಾಗಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂಬರುವ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.Priority has been given to the agriculture sector in keeping with the polls.

Priority has been given to the agriculture sector in keeping with the polls.

0

ಬೆಂಗಳೂರು:(news belgaum) ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.
ಈ ಬಾರಿಯೂ ಭಾಗ್ಯಗಳ ಸ್ಕೀಂ ಮುಂದುವರಿಸಿರುವ ಸಿದ್ದರಾಮಯ್ಯ, ರಾಜ್ಯದ ಸುಮಾರು 70 ಲಕ್ಷ ರೈತರಿಗೆ ಅನುಕೂಲವಾಗಲೆಂದು ರೈತ ಬೆಳಕು ಯೋಜನೆ ಜಾರಿಗೆ ತರಲಾಗಿದೆ. ಮೃತಪಟ್ಟ ರೈತರ ಒಂದು ಲಕ್ಷ ರೂಪಾಯಿ ವೆರಗಿನ ಸಾಲ ಮನ್ನಾಕೆ ನಿರ್ಧಾರಿಸಲಾಗಿದೆ. ಶೇಖಡ 3 ರಷ್ಟು ಬಡ್ಡಿ ದರದಲ್ಲಿ ರೈತರಿಗೆ 10 ಲಕ್ಷದ ವರೆಗೆ ಸಾಲ, ಕಬ್ಬು ಕಟಾವು ಯಂತ್ರಗಳಿಗೆ ಅನುದಾನ, ಚಾಮರಾಜನಗರ ಜಿಲ್ಲೆಯಲ್ಲಿ ನೂತನ ಕೃಷಿ ಕಾಲೇಜು, ಮೇವು ಕೊರತೆ ನೀಗಿಸಲು ರಾಜ್ಯ ಮೇವು ಭದ್ರತಾ ಯೋಜನೆ. ಸಹಕಾರಿ ಸಂಘಗಳಲ್ಲಿ ಮಾಡಿದ್ದ ಕುರಿ ಮೇಕೆ ಸಾಕಾಣಿಕೆದಾರರ ಸಾಲ ಮನ್ನಾ, ಕೃಷಿ ಬಾಗ್ಯಕ್ಕೆ 600 ಕೋಟಿ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆಗೆ 15929 ಕೋಟಿ ರೂ, ತೋಟಗಾರಿಕೆ ಇಲಾಖೆಗೆ 1091 ಕೋಟಿ ನೀಡಲಾಗಿದೆ.
ಅತ್ಯುತ್ತಮ ಕಾರ್ಯ ನಿರ್ವಹಿಸುವ ಪ್ರತೀ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿಗೆ ಅತ್ಯುತ್ತಮ ಎಸ್‍ಡಿಎಂಸಿ ಪ್ರಶಸ್ತಿ ನೀಡುವುದಾಗಿ ಘೋಷಣೆಮಾಡಿದೆ. ರಾಜ್ಯದಲ್ಲಿ ನೂರು ವರ್ಷಗಳನ್ನು ಪೂರೈಸಿದ 100 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಪಾರಂಪರಿಕ ಶಾಲೆಗಳೆಂದು ಗುರುತಿಸಿ ಅವುಗಳನ್ನು ಹಂತ ಹಂತವಾಗಿ ಅಭಿವೃದ್ದಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
Indian Weddings
ಅಂತರ್ಜಾತಿ ವಿವಾಹವಾಗುವ ಯುವಕ ಯುವತಿಯರಿಗೆ ಪ್ರೋತ್ಸಹ

Indian Weddings

ಧನ ಹೆಚ್ಚಳ, ಈ ಸಾಲಿನ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅಂತರ್ ಜಾತಿ ವಿವಾಹಗಳಿಗೆ ಬಂಪರ್ ಪ್ರೋತ್ಸಾಹ ಧನ ಘೋಷಣೆ ಮಾಡಿದ್ದಾರೆ. ಬೇರೆ ಜಾತಿಯ ಯುವತಿಯನ್ನು ವಿವಾಹ ಆಗುವ ಪರಿಶಿಷ್ಟ ಜಾತಿ ಯುವಕರಿಗೆ 3 ಲಕ್ಷ ರುಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಈ ಮೊತ್ತ ಹಿಂದೆ 2 ಲಕ್ಷ ರುಪಾಯಿ ಇತ್ತು. ಅದನ್ನು ಒಂದು ಲಕ್ಷ ಏರಿಕೆ ಮಾಡಲಾಗಿದೆ.
ಇನ್ನು ಪರಿಶಿಷ್ಟ ಜಾತಿಯ ಯುವತಿ ಇತರ ಜಾತಿಯ ಯುವಕನನ್ನು ಮದುವೆ ಆದರೆ 5 ಲಕ್ಷ ರುಪಾಯಿ ನೀಡಲಾಗುತ್ತದೆ. ಇದಕ್ಕೂ ಮುನ್ನ ಈ ಮೊತ್ತ 3 ಲಕ್ಷ ರುಪಾಯಿ ಇತ್ತು. ಅದನ್ನು 5 ಲಕ್ಷಕ್ಕೆ ಏರಿಸಲಾಗಿದೆ. ಇನ್ನು ದೇವದಾಸಿಯರ ಹೆಣ್ಣುಮಕ್ಕಳ ಮದುವೆಗೆ 5 ಲಕ್ಷ ರುಪಾಯಿ ದೊರೆಯಲಿದೆ. ದೇವದಾಸಿಯರ ಗಂಡುಮಕ್ಕಳ ಮದುವೆಗೆ 3 ಲಕ್ಷ ರುಪಾಯಿ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಘೋಷಣೆಮಾಡಿದ್ದಾರೆ.
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್:ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಇದರಿಂದ 19.60 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ.
ಈ ಬಾರಿಯ ಬಜೆಟ್ ನಲ್ಲಿ ರಾಜಧಾನಿ ಬೆಂಗಳೂರಿಗೆ ಬಂಪರ್ ಕೊಡುಗೆಗಳು ಸಿಕ್ಕಿವೆ. ಕಳೆದ ಬಜೆಟ್‍ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 2441 ಕೋಟಿ ರೂ.ಗಳನ್ನು ಮೀಸಲಿರಿಸಿದ್ದ ಸರ್ಕಾರ, ಈ ಬಾರಿಯ ಆಯವ್ಯಯದಲ್ಲೂ ನಗರಾಭಿವೃದ್ಧಿಗೆ 2500 ಕೋಟಿ ರೂ.ಗಳ ಬಂಪರ್ ಕೊಡುಗೆ ಘೋಷಿಸಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ 2018-19ರಲ್ಲಿ 105.55 ಕಿ.ಮೀ ಉದ್ದದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಯ ವಿಸ್ತ್ರತ ಯೋಜನಾ ವರದಿಯನ್ನು ತಯಾರಿಸಲು ಅಗತ್ಯ ಕ್ರಮ. ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗೆ ರಾಜ್ಯಸರ್ಕಾರವು ಬದ್ಧವಾಗಿದೆ. ಮುಂದಿನ ಐದು ವರ್ಷಗಳಲ್ಲಿ ನಗರದ ಎಲ್ಲಾ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗೆ ವೈಟ್ ಟಾಪಿಂಗ್. 2018-19 ನೇ ಸಾಲಿನಲ್ಲಿ 150 ಕಿ.ಮೀ ಉದ್ದದ ರಸ್ತೆಗಳು ವೈಟ್ ಟಾಪಿಂಗ್. 10 ಡಬಲ್ ಡಿಕ್ಕರ್ ಬಸ್ ಖರೀದಿ ಮತ್ತು 325 ಬಸ್ ನಿಲ್ದಾಣಗಳು ಮೇಲ್ದರ್ಜೆಗೆ ನಿರ್ಧಾರ. ಬೆಂಗಳೂರಿನ 1 ಸಾವಿರ ಬಸ್ ಗಳಲ್ಲಿ ಮಹಿಳಾ ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಕೆಐಎಎಲ್ ನಿಂದ ಫ್ಲೈ ಬಸ್ ಸೇವೆ. 20 ಕೋಟಿ ರೂ ವೆಚ್ಚದಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್, ಪೌರ ಕಾರ್ಮಿಕರಿಗೆ ವಸತಿ ಭಾಗ್ಯ ಯೋಜನೆ, ಬೆಳ್ಳಂದೂರು ಕೆರೆ ಪುನಶ್ಚೇತನಕ್ಕೆ ಬಜೆಟ್ ನಲ್ಲಿ 50 ಕೋಟಿ ರೂ ಹಣ ಮೀಸಲಿರಿಸಿದ್ದಾರೆ.
ಪತ್ರಿಕರ್ತರಿಗೆ ಮಾಧ್ಯಮ ಸಂಜೀವಿನಿ ಜೀವ ವಿಮೆ:ವೃತ್ತಿ ನಿರತ ಪತ್ರಕರ್ತರು ಅಪಘಾತಕೊಳಗಾದರೆ, ಅಕಾಲಿಕ ಮರಣ ಹೊಂದಿದ ಸಂದರ್ಭ 5 ಲಕ್ಷ ರೂ. ವರೆಗಿನ ಜೀವ ವಿಮೆ ಖಾತರಿ ನೀಡುವ ‘ಮಾಧ್ಯಮ ಸಂಜೀವಿನಿ’ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಪತ್ರಕರ್ತರ ಭವನ ನಿರ್ಮಿಸಲಾಗುವುದು. ಪತ್ರಿಕೆಗಳನ್ನು ಮನೆಮನೆಗೆ ಹಂಚುವವರ ಕ್ಷೇಮಾಭಿವೃದ್ಧಿಗೆ 2ಕೋಟಿ ರೂಪಾಯಿಗಳ ‘ಕ್ಚೇಮ ನಿಧಿ’ ಸೇರಿದಂತೆ 2018-19ರಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಒಟ್ಟಾರೆ 239 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.
ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಉತ್ತಮ ಆರೋಗ್ಯ ಒದಗಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಆರೋಗ್ಯ ಕರ್ನಾಟಕ ಯೋಜನೆ ಎಂಬ ವಿನೂತನ ಯೋಜನೆಯನ್ನು ಬಜೆಟ್‍ನಲ್ಲಿ ಪ್ರಕಟಿಸಿದೆ. ಈ ಯೋಜನೆ ಫೆಬ್ರವರಿ ತಿಂಗಳಿನಲ್ಲಿ ಪ್ರಾರಂಭ ವಾಗಲಿದ್ದು, ವರ್ಷದ ಅಂತ್ಯದೊಳಗೆ ರಾಜ್ಯಾದ್ಯಂತ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಂದಿನ ಏಳು ವರ್ಷಗಳಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳ ಸೌಲಭ್ಯ ಒದಗಿಸಲು ಪ್ರತಿ ಐದು ಸಾವಿರ ಜನಸಂಖ್ಯೆಗೆ ಇರುವ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, 9 ಸಾವಿರ ಆರೋಗ್ಯ ಮತ್ತು ಸೌಖ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಬಾರಿಯ ಬಜೆಟ್‍ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 6645 ಕೋಟಿ ಅನುದಾನ ಒದಗಿಸಲಾಗಿದೆ.Priority has been given to the agriculture sector in keeping with the polls.

Leave A Reply

 Click this button or press Ctrl+G to toggle between Kannada and English

Your email address will not be published.