ಉತ್ತಮ ಸಮಾಜಕ್ಕಾಗಿ

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

Prohibition around Essexesi Examination Centers from 23st May

0

ಬೆಳಗಾವಿ: (news belgaum)ಜಿಲ್ಲೆಯಾದ್ಯಂತ ಮಾರ್ಚ್ 23 ರಿಂದ ಏಪ್ರಿಲ್ 6 ರವರಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ.
ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 104 ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 124 ಪರೀಕ್ಷಾ ಕೇಂದ್ರಗಳು ಸೇರಿ ಜಿಲ್ಲೆಯ ಒಟ್ಟು 228 ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ.
ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿ ಯಾವುದೇ ರೀತಿಯ ನಕಲು ಮಾಡುವುದನ್ನು ತಡೆಗಟ್ಟಲು, ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಮತ್ತು ಅವ್ಯವಹಾರಗಳು ಜರುಗದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು
ಮತ್ತು ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮಾ.23 ರಿಂದ ಏ.6 ರವರೆಗೆ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12:45 ರವರೆಗೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5:15 ರವರೆಗೆ (ರವಿವಾರ, ಸಾರ್ವತ್ರಿಕ ರಜೆ ಹಾಗೂ ಪರೀಕ್ಷೆ ಇರದಿರುವ ದಿನಗಳನ್ನು ಹೊರತುಪಡಿಸಿ) ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಿ.ಆರ್.ಪಿ.ಸಿ 1973 ಕಲಂ 144ರ ಅಡಿಯಲ್ಲಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.
ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ತಿರುಗಾಡುವುದನ್ನು ಹಾಗೂ ನಕಲು ನೀಡಲು ಪರೀಕ್ಷಾ ಕೇಂದ್ರದ ಹತ್ತಿರ ಬರುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸಭೆ, ಮೆರವಣಿಗೆ ಮಾಡುವುದು, ಆಯುಧ, ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ತಿರುಗಾಡುವುದನ್ನು ನಿಷೇಧಿಸಲಾಗಿದೆ.
ಪರೀಕ್ಷೆ ನಡೆಯುವಾಗ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಧ್ವನಿವರ್ಧಕಗಳ ಬಳಕೆ ಹಾಗೂ ಪರೀಕ್ಷಾ ಕೇಂದ್ರಗಳ 200 ಮೀ. ಒಳಗಿನ ಝುರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.Prohibition around Essexesi Examination Centers from 23st May

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Prohibition around Essexesi Examination Centers from 23st May

Leave A Reply

 Click this button or press Ctrl+G to toggle between Kannada and English

Your email address will not be published.