ಉತ್ತಮ ಸಮಾಜಕ್ಕಾಗಿ

20ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪ್ರೋಜೆಕ್ಟ್ ಎಕ್ಚಿಬಿಷನ್ ಕಾರ್ಯಕ್ರಮ

Project Exhibition Program at Visvesvaraya Technological University as part of the 20th Foundation Day

0

ಬೆಳಗಾವಿ: (news belagavi) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯ 20ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದಿನಾಂಕ 28ನೇ ಜೂನ್ 2018 ರಂದು “ಜ್ಞಾನ ಸಂಗಮ” ಆವರಣ ಬೆಳಗಾವಿಯಲ್ಲಿ ರಾಜ್ಯ ಮಟ್ಟದ ಇಂನಿನಿಯರಿಂಗ್ ಪ್ರೋಜೆಕ್ಟ್ ಎಕ್ಚಿಬಿಷನ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಂಯೋಜಿತ ತಾಂತ್ರಿಕ ಮಹಾವಿದ್ಯಾಲಯಗಳ 400 ವಿದ್ಯಾರ್ಥಿಗಳಿಂದ ಸುಮಾರು 120 ಪ್ರೋಜೆಕ್ಟ್‍ಗಳನ್ನು ಪ್ರದರ್ಶಿಸಲಾಯಿತು.
ವಿಶೇಷಚೇತನರಿಗೆ ಸ್ಮಾರ್ಟ ಉಪಕರಣಗಳು, ಕೃಷಿ ಕ್ಷೇತ್ರದಲ್ಲಿ ಡ್ರೋನ್ ಬಳಕೆ, ಬದಲಿ ಇಂಧನ ಮೂಲಗಳ ಬಳಕೆ, ಪರಿಸರ ಸ್ನೇಹಿ ಕಟ್ಟಡಗಳ ನಿರ್ಮಾಣ ಮುಂತಾದ ದಿನನಿತ್ಯ ಜೀವನದಲ್ಲಿ ಉಪಯುಕ್ತವಾಗುವ ಸಾಧನಗಳ ಮೇಲೆ ಪ್ರೋಜೆಕ್ಟ್‍ಗಳನ್ನು ಪ್ರದರ್ಶಿಸಲಾಯಿತು.
ವಿತಾವಿ ಕುಲಪತಿಗಳಾದ ಡಾ. ಕರಿಸಿದ್ದಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ ಮತನಾಡಿದರು. “ಇಂಜಿನಿಯರಗಳಾಗಲು ತಮ್ಮ ದೀರ್ಘ ಪ್ರಯಾಣದಲ್ಲಿ ವಿದ್ಯಾರ್ಥಿಗಳು ಪರಿಸರದ ಬಗ್ಗೆ ಕಾಳಜಿ ಹೊಂದಿರಬೇಕು. ಅದರೊಂದಿಗೆ ಜನಸಾಮಾನ್ಯರ ದೈನಂದಿನ ಸಮಸ್ಯೆಗಳಿಗೆ ಸ್ಪಂದಿಸುವಂತಹ ಪ್ರೋಜೆಕ್ಟಗಳನ್ನು ರೂಪಿಸುವುದರೊಂದಿಗೆ ಸಾಮಾಜಿಕ ಬದ್ದತೆ ಹೊಂದಿರಬೇಕೆಂದು” ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಿತಾವಿ ಪರೀಕ್ಷಾ ಕುಲಸಚಿವರಾದ ಡಾ. ಸತೀಶ ಅಣ್ಣಿಗೇರಿ, ಹಣಕಾಸು ಅಧಿಕಾರಿಗಳಾದ ಶ್ರೀಮತಿ ಎಂ. ಎ. ಸಪ್ನಾ, ಡಾ. ಎ. ವಿ. ಶಿವಾಪುರ, ಡಾ. ಬಸವರಾಜ ಗಾದಗೆ, ಡಾ. ಮೇಘನಾ ಕುಲಕರ್ಣಿ ಈ ಸಂದರ್ಭದಲ್ಲಿ ಹಾಜರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.