ಉತ್ತಮ ಸಮಾಜಕ್ಕಾಗಿ

ಆವಾಸ ಮನೆಗಾಗಿ ಬಡವರ ಪ್ರತಿಭಟನೆ

Protest of poor people for housing

0

ಬೆಳಗಾವಿ: (news belagavi)  ರಾಜೀವಗಾಂಧಿ ಆವಾಸ ಯೋಜನೆಯಡಿ ವಸತಿ ಹೀನರಾದ ತಮಗೆ ಮನೆ ಒದಗಿಸುವಂತೆ ನಗರದ ಶ್ರೀನಗರ, ರುಕ್ಮಿಣಿ ನಗರ ಹಾಗೂ ಹಿಂದುಳಿದ ಪ್ರದೇಶದ ಜೋಪಡಿ ಪಟ್ಟಿಯ ಬಡ ಜನತೆ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಆರಂಭಿಸಿ ಬಡವರಿಗೆ ಸಿಗಬೇಕಾದ ಸರಕಾರಿ ಯೋಜನೆಯ ಮನೆ ಒದಗಿಸಲು ಅಧಿಕಾರಿಗಳಿಗೆ ಮನಸ್ಸಿಲ್ಲ. ಈ ಬಗ್ಗೆ ಹಲವು ಬಾರಿ ಜಿಲ್ಲಾಡಳಿತಕ್ಕೆ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಲಾಗಿದೆ. ಆದರೂ ಪ್ರಯೋಜನವಾಗಿಲ್ಲ ಎಂದು ಅಖಿಲ ಕರ್ನಾಟಕ ಅಲೆಮಾರಿ ಸಮುದಾಯ ಸಂಘ ಆರೋಪಿಸಿದೆ.

ಮಳೆಗಾಲದ ಸಂದರ್ಭ ಜೀವನ ಸಾಗಿಸುವುದೇ ದುರ್ಲಭವಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು. ಸರಕಾರಿ ಆವಾಸ ಯೋಜನೆಗಳಡಿ ಮನೆ ಮಂಜೂರಿ ಆಗದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದರು. ಮಲ್ಲೇಶ ತಳವಾರ, ರೇಣುಕಾ ಹೆಳವರ, ಭೀಮು ರಾಮಪ್ಪ ತಳವಾರ ಇತರರು ಭಾಗವಹಿಸಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

 

Leave A Reply

 Click this button or press Ctrl+G to toggle between Kannada and English

Your email address will not be published.