ಉತ್ತಮ ಸಮಾಜಕ್ಕಾಗಿ

ಪ್ರಕಟಣೆ

Publication

0

ತರಬೇತಿಗೆ ಅರ್ಜಿ ಆಹ್ವಾನ
ಬೆಳಗಾವಿ:( tarunkranti ) ಮೈಸೂರಿನ ಕೇಂದ್ರಿಯ ಪ್ಲಾಸ್ಟಿಕ್ಸ್ ತಂತ್ರಜ್ಞಾನ ಸಂಸ್ಥೆ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದ ನಿರುದ್ಯೋಗಿ ಯುವಕ, ಯುವತಿಯರಿಗೆ ಬೇಸಿಕ್ ಕಂಪ್ಯೂಟರ್, ಸ್ಪೋಕನ್ ಇಂಗ್ಲೀಷ ಹಾಗೂ ವಿವಿಧ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಪದವಿ ಪೂರೈಸಿದ ವಿದ್ಯಾರ್ಥಿಗಳು ತರಬೇತಿಗೆ ಹಾಜರಾಗಬಹುದು. ಅಭ್ಯರ್ಥಿಗಳು 18 ರಿಂದ 35 ವಯೋಮಾನದ ಒಳಗಿನವರಾಗಿರಬೇಕು. ತರಬೇತಿಯು ಆರು ತಿಂಗಳಾಗಿದ್ದು, ತರಬೇತಿಯಲ್ಲಿ ಉಚಿತ ಊಟ, ವಸತಿ ಹಾಗೂ ಮಾಸಿಕ ರೂ.500 ಶಿಷ್ಯವೇತನವನ್ನು ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿ, ಜಾತಿ, ಆದಾಯ ಪ್ರಮಾಣಪತ್ರ, ಆಧಾರ ಕಾರ್ಡ್, 5 ಭಾವಚಿತ್ರ ಹಾಗೂ ಇನ್ನಿತರ ಮೂಲ ದಾಖಲಾತಿಗಳೊಂದಿಗೆ ಜನವರಿ 24 ರಂದು ಸಂಜೆ 5 ಗಂಟೆಯೊಳಗಾಗಿ ‘ನಂ.437/ಎ, ಹೆಬ್ಬಾಳ ಇಂಡಸ್ಟ್ರಿಯಲ್ ಏರಿಯಾ, ಮೈಸೂರು-16’ ಈ ವಿಳಾಸಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗೆ ದೂ: 0821-2510618, 9632688884 ಗೆ ಸಂಪರ್ಕಿಸಬೇಕೆಂದು ಮೈಸೂರಿನ ಕೇಂದ್ರಿಯ ಪ್ಲಾಸ್ಟಿಕ್ಸ್ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರ-ಅಂತರ್‍ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ
ಬೆಳಗಾವಿ: tarunkranti ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2017-18ನೇ ಸಾಲಿನಲ್ಲಿ ಸರ್ಕಾರದಿಂದ ಮಾನ್ಯತೆ ಹೊಂದಿದಂತಹ ಸಂಸ್ಥೆಗಳಿಂದ ಸಂಘಟಿಸಲಾದ ರಾಷ್ಟ್ರ ಮತ್ತು ಅಂತರ್ ರಾಷ್ಟ್ರ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ, ವಿಜೇತರಾಗಿ ಪದಕ ಪಡೆದಂತಹ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಸೂಕ್ತ ಪ್ರಮಾಣಪತ್ರಗಳೊಂದಿಗೆ ಅರ್ಜಿಗಳನ್ನು ‘ಉಪನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಬೆಳಗಾವಿ’ ಇವರಿಗೆ ಜನವರಿ 30 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂ: 0831-2470757 ಗೆ ಸಂಪರ್ಕಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುಆರ್‍ಡಬ್ಲೂ ಹುದ್ದೆಗೆ ಅರ್ಜಿ ಆಹ್ವಾನ
ಬೆಳಗಾವಿ:(tarunkranti )ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಗರ ಪುನರ್ವಸತಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 2 ನಗರ ಸಭೆಗಳು, 8 ಪುರಸಭೆಗಳು ಹಾಗೂ 5 ಪಟ್ಟಣ ಪಂಚಾಯತಿಗಳಲ್ಲಿ ಖಾಲಿ ಇರುವ ನಗರ ಪುನರ್ವಸತಿ ಕಾರ್ಯಕರ್ತ (ಯುಆರ್‍ಡಬ್ಲೂ) ಹುದ್ದೆಗಳನ್ನು ಮಾಸಿಕ ರೂ.3000 ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಪ್ಪಾಣಿ ಹಾಗೂ ಗೋಕಾಕ ನಗರಸಭೆಗಳಲ್ಲಿ ತಲಾ ಒಂದು ಹುದ್ದೆ, ಅಥಣಿ, ಚಿಕ್ಕೋಡಿ, ಸಂಕೇಶ್ವರ, ಮೂಡಲಗಿ, ರಾಮದುರ್ಗ, ಸವದತ್ತಿ, ಬೈಲಹೊಂಗಲ, ಕೊಣ್ಣೂರ ಪುರಸಭೆಗಳಲ್ಲಿ ತಲಾ ಒಂದು ಹಾಗೂ ಸದಲಗಾ, ಹುಕ್ಕೇರಿ, ರಾಯಬಾಗ, ಕುಡಚಿ, ಖಾನಾಪೂರ ಪಟ್ಟಣ ಪಂಚಾಯತಿಗಳಲ್ಲಿ ತಲಾ ಒಂದು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.

ಅರ್ಜಿದಾರರು ವಿಕಲಚೇತನರಾಗಿದ್ದು, ಕನಿಷ್ಠ ಶೇ.40 ರಷ್ಟು ವಿಕಲತೆ ಪ್ರಮಾಣ ಹೊಂದಿರಬೇಕು. ಆಯಾ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ವ್ಯಾಪ್ತಿಗೊಳಪಟ್ಟಿರಬೇಕು. ಕನಿಷ್ಠ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅರ್ಜಿದಾರರು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 19-02-2018ಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯಲ್ಲಿರಬೇಕು. ವಿಕಲಚೇತನ, ಎಸ್ಸಿ, ಎಸ್ಟಿ ಹಾಗೂ ಮಹಿಳಾ ಅಭ್ಯರ್ಥಿಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಜ್ಞಾನ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿದಾರರು ಅಗತ್ಯ ದಾಖಲಾತಿಗಳ ದ್ವಿಪ್ರತಿಯೊಂದಿಗೆ ಫೆಬ್ರವರಿ 19 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ಶೇ.5 ರ ವಿಷಯ ನಿರ್ವಾಹಕರು ಮತ್ತು ಆಯಾ ತಾಲೂಕುಗಳ ಎಂ.ಆರ್.ಡಬ್ಲೂಗಳನ್ನು ಅಥವಾ ಕಚೇರಿಯ ದೂ: 0831-2476096/2476097 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.21 ರಂದು ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ
ಬೆಳಗಾವಿ: tarunkranti  ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಜನವರಿ 21 ರಂದು ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಸಮಾರಂಭ ನಡೆಯಲಿದೆ.
ಜ.21 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಅಶೋಕ ವೃತ್ತದಿಂದ ಮೆರವಣಿಗೆ ಆರಂಭವಾಗಲಿದ್ದು, ಕೋಟೆ ಆವರಣ, ಕಿತ್ತೂರು ಚನ್ನಮ್ಮ ವೃತ್ತ, ಜಿಲ್ಲಾಸ್ಪತ್ರೆ ಮಾರ್ಗವಾಗಿ ಕುಮಾರ ಗಂಧರ್ವ ರಂಗಮಂದಿರ ತಲುಪಲಿದೆ.
ಬೆಳಿಗ್ಗೆ 11:30 ಗಂಟೆಗೆ ಕುಮಾರ ಗಂಧರ್ವ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಉದ್ಘಾಟಿಸುವರು. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಫಿರೋಜ್ ಶೇಠ ಅವರು ಅಧ್ಯಕ್ಷತೆ ವಹಿಸುವರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಎಸ್.ಎಂ. ಗಂಗಾಧರಯ್ಯ ಅವರು ಉಪನ್ಯಾಸ ನೀಡುವರು.
ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವರಾದ ಅನಂತಕುಮಾರ ಹೆಗಡೆ, ಸರ್ಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಗಳಾದ ಗಣೇಶ ಹುಕ್ಕೇರಿ ಸೇರಿದಂತೆ ಜಿಲ್ಲೆಯ ಸಂಸತ್ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾನಗರ ಪಾಲಿಕೆ ಮಹಾಪೌರರು, ಜಿಪಂ ಅಧ್ಯಕ್ಷರು ಹಾಗೂ ಇನ್ನಿತರ ಗಣ್ಯರು ಪಾಲ್ಗೊಳ್ಳುವರು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Publication

Leave A Reply

 Click this button or press Ctrl+G to toggle between Kannada and English

Your email address will not be published.