ಉತ್ತಮ ಸಮಾಜಕ್ಕಾಗಿ

ರಾಯಣ್ಣ ಸೈನಿಕ ಶಾಲೆ ನಿರ್ಮಾಣ: – ಸಚಿವ ರಮೇಶ ಜಾರಕಿಹೊಳಿ

1

ಬೆಳಗಾವಿ:Belgaum News ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಅದ್ಧೂರಿ ಚಾಲನೆ ಶೀಘ್ರದಲ್ಲೇ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ನಿರ್ಮಾಣ: – ಸಚಿವ ರಮೇಶ ಜಾರಕಿಹೊಳಿರಾಯಣ್ಣ ಸೈನಿಕ ಶಾಲೆ ನಿರ್ಮಾಣ: - ಸಚಿವ ರಮೇಶ ಜಾರಕಿಹೊಳಿ- Tarun kranti 1
ಬೆಳಗಾವಿ:ಸಂಗೊಳ್ಳಿ ಹಾಗೂ ನಂದಗಡ ಗ್ರಾಮಗಳಲ್ಲಿ ಶೀಘ್ರವೇ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ನಿರ್ಮಿಸಲಾಗುವುದು ಎಂದು ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಹೇಳಿದರು.
ಸಂಗೊಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಉತ್ಸವದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ರಾಜ್ಯ ಸರ್ಕಾರದಿಂದ ಈಗಾಗಲೇ ಸ್ಥಳವನ್ನು ಗುರುತಿಸಲಾಗಿದೆ. ಜನೇವರಿ 14 ರಂದು ಕೇಂದ್ರದ ತಂಡ ಸೈನಿಕ ಶಾಲೆಯ ಸ್ಥಳ ಹಾಗೂ ನಿರ್ಮಾಣದ ಕುರಿತು ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.
ಜಗತ್ತಿಗೆ ಮಾದರಿಯಾಗಿರುವ ಚನ್ನಮ್ಮನ ಬಲಗೈ ಬಂಟ ಸಂಗೊಳ್ಳಿ ರಾಯಣ್ಣನ ಉತ್ಸವ ಬರೀ ಉತ್ಸವಕ್ಕೆ ಸೀಮತಗೊಳ್ಳಬಾರದು. ಸಂಗೊಳ್ಳಿ ರಾಯಣ್ಣನ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.
ಕಳೆದ ವರ್ಷ ಉತ್ಸವದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವ ಎಲ್ಲ ಯೋಜನೆಗಳನ್ನು ಕೂಡಲೇ ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಬೈಲಹೊಂಗಲ ಮತಕ್ಷೇತ್ರದ ಶಾಸಕರಾದ ಡಾ|| ವಿಶ್ವನಾಥ ಪಾಟೀಲ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ದಿನಾಚರಣೆ ಹಾಗೂ ಉತ್ಸವಗಳನ್ನು ಒಂದು ಸಮುದಾಯ ಅಥವಾ ಪಕ್ಷಕ್ಕೆ ಸೀಮಿತಗೊಳಿಸದೇ ಎಲ್ಲರೂ ಸೇರಿ ಆಚರಿಸಿದಾಗ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು.
ಸಂಗೊಳ್ಳಿ ಗ್ರಾಮದಲ್ಲಿ ಸಣ್ಣ ಪ್ರಮಾಣದಲ್ಲಿ ಆಚರಿಸಲಾಗುತ್ತಿದ್ದ ಉತ್ಸವವನ್ನು ಇಂದು ರಾಜ್ಯ ಸರ್ಕಾರದಿಂದ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ರಾಯಣ್ಣನ ಪರಾಕ್ರಮ ಹಾಗೂ ದೇಶದ ಚರಿತ್ರೆಯನ್ನು ಪರಿಚಯಿಸುವುದು ಉತ್ಸವದ ಆಶಯವಾಗಿದೆ ಎಂದು ಹೇಳಿದರು.
ಸಂಗೊಳ್ಳಿ ರಾಯಣ್ಣ ಅಪ್ರತಿಮ ವೀರ ಹಾಗೂ ಹುಟ್ಟು ಹೋರಾಟಗಾರನಾಗಿದ್ದರು. ಅವರ ಧೈರ್ಯ, ಸಾಹಸ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಯುವಜನರಿಗೆ ಸೂಕ್ತ ಮಾರ್ಗದರ್ಶನ ನೀಡಿದರೆ ಬಲಿಷ್ಠ ಭಾರತ ನಿರ್ಮಾಣ ಸಾಧ್ಯವಾಗಲಿದೆ. ಸಂಗೊಳ್ಳಿ ರಾಯಣ್ಣನ ಹೆಸರು ದೇಶಾದ್ಯಂತ ಚಿರಪರಿಚಿತವಾಗುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಸಂಗೊಳ್ಳಿ-ಬೇವಿನಕೊಪ್ಪ ನಡುವಿನ ಸೇತುವೆ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ರೂ. 40 ಕೋಟಿ ಘೋಷಣೆ ಮಾಡಿದ್ದ ಪ್ರಕಾರ, ಹಣ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ನಡೆದಿದೆ. ಸಂಗೊಳ್ಳಿ ಗ್ರಾಮದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳನ್ನು ಇನ್ನಷ್ಟು ತ್ವರಿತಗತಿಯಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಂಗೊಳ್ಳಿಯ ಗುರು ಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ, ಸಂಗೊಳ್ಳಿಯ ರಾಯಣ್ಣನ ಕುರಿತು ಚಿಂತನ-ಮಂಥನ ಇಂದು ನಡೆಬೇಕಾಗಿದೆ. ಈ ನಿಟ್ಟಿನಲ್ಲಿ ಉತ್ಸವದ ಎರಡನೇ ದಿನ ಯುವಜನೋತ್ಸವ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅದರಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಯುವಕರು ದುಶ್ಚಟಗಳಿಗೆ ಬಲಿಯಾಗದೇ, ರಾಯಣ್ಣನ ದೇಶಪ್ರೇಮ ಹಾಗೂ ಸದ್ಗುಣಗಳನ್ನು ಪಾಲಿಸಬೇಕು ಎಂದರು.
ಸಂಗೊಳ್ಳಿ ಉತ್ಸವದಲ್ಲಿ ಪ್ರತಿವರ್ಷ ಒಬ್ಬ ಯೋಧರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿಯನ್ನು ನೀಡಬೇಕೆಂದು ಗ್ರಾಮಸ್ಥರ ಬೇಡಿಕೆಯಾಗಿತ್ತು, ಮುಂಬರುವ ವರ್ಷಗಳಲ್ಲಿ ಆದರೂ ಸರ್ಕಾರ ಈ ಪ್ರಶಸ್ತಿಯನ್ನು ನೀಡಬೇಕೆಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಬ್ರಿಟಿಷರೊಡನೆ ಅಪ್ರತಿಮ ಹೋರಾಟವನ್ನು ರೂಪಿಸಿ, ಇತಿಹಾಸದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದಿದ್ದಾರೆ. ಸಂಗೊಳ್ಳಿ ರಾಯಣ್ಣನಂತಹ ಮಗನನ್ನು ಪಡೆಯಬೇಕು ಎಂಬುದು ಪ್ರತಿ ತಾಯಿಯ ಬಯಕೆಯಾಗಿದೆ ಎಂದು ಹೇಳಿದರು.
ಸಂಗೊಳ್ಳಿ ರಾಯಣ್ಣನ ಜೀವನ ಯುವ ಜನರಿಗೆ ಮಾದರಿಯಾಗಿದೆ. ರಾಯಣ್ಣನ ಕೆಚ್ಚೆದೆ ಹಾಗೂ ದೇಶಪ್ರೇಮವನ್ನು ಇಂದಿನ ಯುವಕರು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕು ಪಂಚಾಯತ ಅಧ್ಯಕ್ಷರಾದ ಶೈಲಾ ಶಿದ್ರಾಮಣಿ, ಉಪಾಧ್ಯಕ್ಷರಾದ ಬಸನಗೌಡ ಪಾಟೀಲ, ಜಿಲ್ಲಾ ಪಂಚಾಯತ ಸದಸ್ಯರಾದ ಅನಿಲ ಮೇಕಲಮರಡಿ, ರಾಧಾಶಾಮ ಖಾದ್ರೋಳ್ಳಿ, ಗೌಸಸಾಬ ಬುಡ್ಡೆಮುಲ್ಲಾ, ಉಪವಿಭಾಗಾಧಿಕಾರಿ ವಿಜಯಕುಮಾರ ಹೊನಕೇರಿ, ಗ್ರಾಮ ಪಂಚಾಯತ ಅಧ್ಯಕ್ಷರಾದ ಯಲ್ಲವ್ವ ಹಳೇಮನಿ, ಉಪಾಧ್ಯಕ್ಷರಾದ ಬಸವರಾಜ ಕೊಡ್ಲಿ ಸೇರಿದಂತೆ ಗ್ರಾಪಂ ಸದಸ್ಯರು, ಇನ್ನಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗ್ರಾಮದ ಸರಕಾರಿ ಹರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಗೂ ರೈತಗೀತೆಯನ್ನು ಪ್ರಸ್ತುತ ಪಡಿಸಿದರು. ಬಸವರಾಜ ಕುಪ್ಪಸಗೌಡರ ನಿರೂಪಿಸಿದರು. ಬೈಲಹೊಂಗಲ ತಹಶೀಲ್ದಾರ ಪ್ರಕಾಶ ಗಾಯಕವಾಡ ಅವರು ವಂದಿಸಿದರು.
ಸಮಾರಂಭದಲ್ಲಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮ ಹಾಗೂ ಜಿಲ್ಲೆಗಳಿಂದ ಸಾವಿರಾರು ಜನರು ಪಾಲ್ಗೊಂಡಿದ್ದರು.

ಜನಮನ ಸೆಳೆದ ಸಾಂಸ್ಕøತಿಕ ಕಾರ್ಯಕ್ರಮಗಳು:-

ಸಮಾರಂಭದ ನಂತರ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು ಭಜನಾ ಮೇಳ, ಚೌಡಕಿ ಪದಗಳು, ಹುಲಿಯೂ ಹುಟ್ಟಿತ್ತು ಕಿತ್ತೂರು ನಾಡಗ ಗೀತ ರೂಪಕ, ಸುಗ್ಗಿ ಕುಣಿತ, ಭರತ ನ್ಯಾಟ, ಶಿವ ತಾಂಡವ ನೃತ್ಯ, ಹಾಸ್ಯ ಸಂಜೆ, ಚನ್ನಮ್ಮ ನೃತ್ಯ ರೂಪಕ ಶಾಸ್ತ್ರೀಯ ಸಂಗೀತ, ಕತಕ ನೃತ್ಯ, ವಾಯಿಲಿನ ವಾದನ, ಶಾಡೋ ಪ್ಲೇ, ಜಾನಪದ ವೈವಿದ್ಯ, ರಸಮಂಜರಿ ಹಾಗೂ ಹಾಸ್ತ ಚಟಾಕಿ ಕಾರ್ಯಕ್ರಮಗಳು ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.

1 Comment
  1. ಸತೀಶ್ says

    itskannadakannada news – today news in kannada

Leave A Reply

 Click this button or press Ctrl+G to toggle between Kannada and English

Your email address will not be published.