ಉತ್ತಮ ಸಮಾಜಕ್ಕಾಗಿ

ಉದ್ಯೋಗ ಖಾತರಿ ಯೋಜನೆಯಡಿ ಹೆಸರು ನೋಂದಾಯಿಸಿಕೊಳ್ಳಿ

Register the name under the Employment Guarantee Scheme

0

ಬೆಳಗಾವಿ: (news belgaum)ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ 100 ದಿನಗಳ ಕೂಲಿ ಕಾಮಗಾರಿ ನೀಡಲಾಗುತ್ತಿದೆ ಆದ್ದರಿಂದ ಗ್ರಾಮಗಳಲ್ಲಿನ ಕೂಲಿ ಕಾರ್ಮಿಕರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಹೋಗಿ ಹೆಸರು ನೋಂದಾಯಿಸಿ, ಯೋಜನೆಯ ಲಾಭವನ್ನು ಪಡೆಯಬೇಕೆಂದು ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಕಲಾದಗಿ ಅವರು ಹೇಳಿದರು.
News Belgaum-ಉದ್ಯೋಗ ಖಾತರಿ ಯೋಜನೆಯಡಿ ಹೆಸರು ನೋಂದಾಯಿಸಿಕೊಳ್ಳಿರಾಮದುರ್ಗ ತಾಲೂಕಿನ ಹಣಮಸಾಗರ ಗ್ರಾಮದ ಮಾರುತೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಯೋಜನೆಯಡಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ದಿನಕ್ಕೆ ರೂ.249 ಕೂಲಿಯನ್ನು ನೀಡಲಾಗುತ್ತಿದೆ ಹಾಗೂ ಕಾಮಗಾರಿಗಳ ಸಲಕರಣೆಗಳನ್ನು ಹದ ಮಾಡಲು 10 ರೂಪಾಯಿಯನ್ನು ನೀಡಲಾಗುತ್ತದೆ. ಜೊತೆಗೆ ಕಾಮಗಾರಿಗಳ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಮಕ್ಕಳನ್ನು ನೋಡಿಕೊಳ್ಳಲು ವ್ಯವಸ್ಥೆಯನ್ನು ಕಲ್ಪಿಸಿಕೊಡಲು ಅವಕಾಶವಿದೆ ಎಂದು ತಿಳಿಸಿದರು.
ಈ ಯೋಜನೆಯಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಅಂದರೆ ಕೃಷಿ ಹೊಂಡ, ಬದು ನಿರ್ಮಾಣ, ಕುರಿ/ದನದ ಶೆಡ್ಡು, ತೋಟಗಾರಿಕಾ ಕೆಲಸಗಳು, ಜಮೀನು ಅಭಿವೃದ್ಧಿ, ಕೋಳಿ ಸಾಕಾಣಿಕಾ ಶೆಡ್‍ಗಳನ್ನು ನಿರ್ಮಿಸಬಹುದಾಗಿದೆ. ಅದರಂತೆ ಸಮೂಹ ಕಾಮಗಾರಿಗಳಾದ ನೀರಿನ ಸಂರಕ್ಷಣೆ ಮತ್ತು ಮಳೆ ನೀರು ಕೊಯ್ಲು ( ಚೆಕ್ ಡ್ಯಾಂ, ಕೆರೆ ಹೂಳು ತೆಗೆಯುವುದು), ಬರ ನಿರ್ವಹಣೆ (ಸಸಿ ನೆಡುವುದು), ಕೆರೆ ಹೂಳೆತ್ತುವುದು, ರಸ್ತೆ ನಿರ್ಮಾಣ ಸೇರಿದಂತೆ ಹಲವಾರು ಕಾಮಗಾರಿಗಳನ್ನು ್ಲ ಅನುಷ್ಟಾನ ಮಡಬಹುದಾಗಿದೆ ಎಂದು ಹೇಳಿದರು.
ರಾಮದುರ್ಗ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಆರ್.ವಿ. ನಿಡೋಣಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ ಭಾರತ ಮಿಷನ್ ಯೋಜನೆಯಡಿ ಪ್ರತಿ ಕುಟುಂಬ ಕಡ್ಡಾಯವಾಗಿ ಶೌಚಾಲಯ ನಿರ್ಮಾಣ ಮಾಡಿಕೊಳ್ಳಬೇಕು ಎಂದು ಹೇಳಿದರು.
ಯೋಜನೆಯಲ್ಲಿ ಎಸ್.ಸಿ, ಎಸ್.ಟಿ ಕುಟುಂಬದವರಿಗೆ ರೂ.15,000 ಹಾಗೂ ಉಳಿದ ಕುಟುಂಬಗಳಿಗೆ ರೂ.12,000 ಸಹಾಯಧನ ಮಂಜೂರು ಮಾಡಲಾಗುತ್ತಿದೆ. ಸದರಿ ಯೋಜನೆಯಲ್ಲಿ ಪ್ರತಿ ಕುಟುಂಬದವರು ಶೌಚಾಲಯವನ್ನು ಕಟ್ಟಲೇಬೇಕು, ಕಟ್ಟದೇ ಹೋದರೆ ಬಯಲು ಶೌಚದಿಂದಾಗುವ ಎಲ್ಲ ಅನಾಹುತಗಳಿಗೂ ನೇರವಾಗಿ ತಾವೆ ಜವಾಬ್ದಾರರಾಗುತ್ತೀರಿ ಎಂದು ತಿಳಿಸಿದರು.
ಗ್ರಾಮ ಪಂಚಾಯತ ಚುನಾಯಿತ ಸದಸ್ಯರು ಈ ಯೋಜನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ಪ್ರತಿಯೊಬ್ಬರೂ 10 ಶೌಚಾಲಯಗಳ ನಿರ್ಮಾಣದ ಗುರಿ ಇಟ್ಟುಕೊಂಡುಕೆಲಸ ಮಾಡಬೆಕು ಎಂದು ತಿಳಿಸಿದರು.
ಪಿಡಿಒ ಆರ್.ವಿ. ಅಂಗಡಿ, ಕಾರ್ಯದರ್ಶಿಗಳಾದ ಎಸ್.ಎನ್. ಕಡಹಳ್ಳಿ, ಸ್ಥಳೀಯ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮೀ. ಹಗೇದ, ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.Register the name under the Employment Guarantee Scheme

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.