ಉತ್ತಮ ಸಮಾಜಕ್ಕಾಗಿ

ಖರೀದಿ ಕೇಂದ್ರಗಳನ್ನು ತೆರೆಯಬೆಕೆಂದು ಮನವಿ

Request Opening Purchase Centers

0

ಬೆಳಗಾವಿ: ನಗರದಲ್ಲಿ ಇಂದು ಬೆಳಗಾವಿ ಜಿಲ್ಲೆಯ ರೈತರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಕೂಡಲೇ ರೈತರ ಸಾಲ ಮನ್ನಾ ಮಾಡಬೇಕು, ಮಹದಾಯಿ ಯೋಜನೆಯನ್ನು ಶೀಘ್ರ ಜಾರಿಗೆ ತರಬೇಕು, ಗೋವಿನ ಜೋಳ ಮತ್ತು ಕಡಲೆ ಬೆಳೆಗಳಿಗೆ ಬೆಲೆ ನೀಡಬೇಕು. ಹಾಗೂ ಎಲ್ಲ ತಾಲೂಕು ಕೇಂದ್ರಗಳಲ್ಲಿ ರೈತರ ಬೆಳೆ ಖರೀದಿ ಕೇಂದ್ರಗಳನ್ನು ತೆರೆಯಬೆಕೆಂದು ಮನವಿಯಲ್ಲಿ ರೈತರು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಹಾಂತೇಶ ಕಮತ, ಅಶೋಕ ಎಮಕನಮರಡಿ, ಈರಪ್ಪ ಹುಬ್ಬಳ್ಳಿ, ಫಕೀರಗೌಡರ ಸಿದ್ದಗೌಡರ, ರವಿ ಸಿದ್ದಮ್ಮನವರ ಮುಂತಾದವರು ಉಪಸ್ಥಿತರಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.