ಉತ್ತಮ ಸಮಾಜಕ್ಕಾಗಿ

ಸೆ.2 ರಂದು ಶ್ರೀಕೃಷ್ಣ ಜಯಂತಿ

news belagavi

0

ಬೆಳಗಾವಿ:(newsbelagavi) ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅನಾವೃಷ್ಠಿಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 02 ರಂದು ಬೆಳಿಗ್ಗೆ 11 ಗಂಟೆಗೆ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಶ್ರೀಕೃಷ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮುಖಾಂತರ ಸರಳ ರೀತಿಯಲ್ಲಿ ಆಚರಿಸಲಾಗುವುದು.
ಜಿಲ್ಲೆಯ ಜನಪ್ರತಿನಿಧಿಗಳು, ಸಮಾಜದ ಸಮಸ್ತ ಬಾಂಧವರು, ಸರ್ಕಾರಿ ಕಚೇರಿಗಳ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಶೈಲ ಕರಿಶಂಕರಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.