ಉತ್ತಮ ಸಮಾಜಕ್ಕಾಗಿ

ಸಾಮಥ್ರ್ಯವುಳ್ಳ ವಿದ್ಯಾರ್ಥಿಗಳಿಗೆ ಇರುವ ಎಲ್ಲ ಸಡಿಲಿಕೆಗಳನ್ನು ನೀಡಿ :ಜಿಲ್ಲಾಧಿಕಾರಿ ಎಸ್. ಯಾವುಲ್ಲಾ

SSLC examination from March 23 to April 6

0

 

ಮಾರ್ಚ್ 23 ರಿಂದ ಏಪ್ರೀಲ್ 6 ರವರೆಗ ಎಸ್.ಎಸ್.ಎಲ್.ಸಿ ಪರೀಕ್ಷೆ

ವಿಶೇಷ ಸಾಮಥ್ರ್ಯವುಳ್ಳ ವಿದ್ಯಾರ್ಥಿಗಳಿಗೆ ಇರುವ ಎಲ್ಲ ಸಡಿಲಿಕೆಗಳನ್ನು ನೀಡಿ :ಜಿಲ್ಲಾಧಿಕಾರಿ ಎಸ್. ಯಾವುಲ್ಲಾ

ಬೆಳಗಾವಿ:(news belgaum) ಮಾರ್ಚ್ 23 ರಿಂದ ಏಪ್ರೀಲ್ 06 ವರೆಗೆ ಜಿಲ್ಲೆಯ ಒಟ್ಟು 228 ಪರೀಕ್ಷಾ ಕೇಂದ್ರಗಳಲ್ಲಿ 72,495 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹಾಜರಾಗುತ್ತಿದ್ದು, ಪರೀಕ್ಷೆಗಳು ಸುಶಿಕ್ಷಿತವಾಗಿ ನಡೆಯಲು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಎಸ್ ಜಿಯಾವುಲ್ಲಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಶನಿವಾರ (ಮಾ.17) ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವಭಾವಿ ಸಭೆ ಮತ್ತು ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶೇಷ ಸಾಮಥ್ರ್ಯವುಳ್ಳ ವಿದ್ಯಾರ್ಥಿಗಳಿಗೆ ಇರುವ ಎಲ್ಲ ಸಡಿಲಿಕೆಗಳನ್ನು ಕಡ್ಡಾಯವಾಗಿ ನೀಡಬೇಕು. ಶಿಕ್ಷಣಾಧಿಕಾರಿಗಳು ತಮ್ಮ ಅಧಿಕಾರವನ್ನು ದುರಪಯೋಗ ಪಡಿಸಿಕೊಳ್ಳದೆ, ಪರೀಕ್ಷೆಯಲ್ಲಿ ಇರುವ ನಿಯಮಾವಳಿಗಳನ್ನು ಚಾಚುತಪ್ಪದೇ ಪಾಲಿಸಿ ವಿದ್ಯಾರ್ಥಿಗಳೊಂದಿಗೆ ಸಹಕರಿಸಿಬೇಕು. ವಿದ್ಯಾರ್ಥಿಗಳು ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುವ ದೃಷ್ಠಿಯಿಂದ ಕೆಲಸ ಮಾಡಬೇಕೆಂದು ಹೇಳಿದರು.
ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆ ‘ತುರ್ತು ಪ್ರತಿಕ್ರಿಯೆ ಕೇಂದ್ರ’ ಸ್ಥಾಪಿಸಲು ಸ್ಥಳ ಗುರುತಿಸಿ  - ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ- Tarun krantiಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ತೊರಿಸುವ ದೃಷ್ಟಿಯಿಂದ ವಿದ್ಯಾರ್ಥಿಗಳನ್ನು ಗೈರು ಹಾಜರಿ ತೊರಿಸಬಾರದು, ಬದಲಾಗಿ ಹಾಜರಾತಿಯಲ್ಲಿ ಕಡಿಮೆಯಾದ ವಿದ್ಯಾರ್ಥಿಗಳ ಪಾಲಕರ ಗಮನಕ್ಕೆ ತಂದು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಹಾಜರಿ ಪಡಿಸಲು ಶಿಕ್ಷಣಾಧಿಕಾರಿಗಳು ಮುಂದಾಗಬೇಕು ಹೇಳಿದರು.
ಎಲ್ಲ ವಿದ್ಯಾರ್ಥಿಗಳು ತಮ್ಮ ಮಕ್ಕಳು ಎಂಬ ಭಾವನೆಯನ್ನು ಶಿಕ್ಷಕರು ಹೊಂದಬೇಕು. ಕೆಲವು ವಿದ್ಯಾರ್ಥಿಗಳು ಹುಟ್ಟಿನಿಂದಲೇ ಕೆಲವು ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ. ಇತರ ವಿದ್ಯಾರ್ಥಿಗಳಂತೆ ಅವರಿಗೆ ಬರೆಯುವ ಮತ್ತು ಓದುವ ಸಾಮಥ್ರ್ಯ ಇರುವುದಿಲ್ಲ. ಅಂತಹ ವಿದ್ಯಾರ್ಥಿಗಳನ್ನು ಗಮನಿಸಿ ಶಿಕ್ಷಕರು ಅವರ ಪಾಲಕರ ಗಮನಕ್ಕೆ ತಂದು ಅವರಿಗೆ ಸೂಕ್ತ ಮಾರ್ಗದರ್ಶನ ಮತ್ತು ಶಿಕ್ಷಣ ನೀಡಿದರೆ ಅಂತಹ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಜ್ಞಾನಿಗಳಾಗಿ ಬೆಳೆಯುತ್ತಾರೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್ ಆರ್. ಅವರು ಮಾತನಾಡಿ, ಜಿಲ್ಲಾಧಿಕಾರಿಗಳು ಆಹ್ವಾನಿಸಿದರೂ ಸಭೆಗೆ ಬಾರದೆ ಗೈರುಹಾಜರಾದ ಅಧಿಕಾರಿಗಳ ವರದಿಯನ್ನು ಸರ್ಕಾರಕ್ಕೆ ನೀಡಿ ಎಂದು ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳ ಕುರಿತು ನಿಖರವಾದ ಮ್ಯಾಪ್ ಇರಬೇಕು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೊಬೈಲ್ ನಂಬರ ಕೂಡಾ ಕಡ್ಡಾಯವಾಗಿ ಹೊಂದಿರಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಎಂ.ಜಿ. ದಾಸರ, ಎ.ಸಿ. ಮನ್ನಿಕೇರಿ, ಎಂ.ಆರ್. ಅಲಾಸಿ ಹಾಗೂ ಡಿ.ಸಿ.ಪಿ ನಂದಗಾಂವಿ ಅವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.SSLC examination from March 23 to April 6

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.