ಉತ್ತಮ ಸಮಾಜಕ್ಕಾಗಿ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ವಿದ್ಯಾರ್ಥಿಗಳು ಕೈಜೋಡಿಸಿ

Students join the elimination of child labor

0

ಬೆಳಗಾವಿ:(news belgaum) ಬಾಲಕಾರ್ಮಿಕ ಪದ್ದತಿ ಸಮಾಜಕ್ಕಂಟಿದ ಒಂದು ಕಪ್ಪು ಚುಕ್ಕೆಯಾಗಿದ್ದು ದೇಶದ ಪ್ರಗತಿಗೆ ಮಾರಕವಾಗಿದೆ. ಈ ಪದ್ದತಿಯನ್ನು ನಿರ್ಮೂಲನೆ ಮಾಡುವಲ್ಲಿ ಸಮುದಾಯ ಮತ್ತು ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದು ಬೆಳಗಾವಿ ಪ್ರಾದೇಶಿಕದ ಉಪ ಕಾರ್ಮಿಕ ಆಯುಕ್ತರಾದ ವೆಂಕಟೇಶ ಶಿಂದಿಹಟ್ಟಿ ಅವರು ಹೇಳಿದರು.
ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಬೆಳಗಾವಿ ಮತ್ತು ಬೆನನ್ ಸ್ಮಿಥ್ ಮೆಥೊಡಿಸ್ಟ ಪದವಿ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಸೋಮವಾರ ಆಗಸ್ಟ್ 6 ರಂದು ಹಮ್ಮಿಕೊಂಡಿದ್ದ “ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ” ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆಯನ್ವಯ 14 ವರ್ಷದೊಳಗಿನ ಯಾವುದೇ ಮಗುವನ್ನು ಯಾವುದೇ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ ಹಾಗೂ 14 ರಿಂದ 18 ವರ್ಷ ವಯೋಮಾನದ ಕಿಶೋರಾವಸ್ಥೆಯ ಕಿಶೋರರನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ
News Belgaum-ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ವಿದ್ಯಾರ್ಥಿಗಳು ಕೈಜೋಡಿಸಿನೇಮಿಸಿಕೊಳ್ಳುವಂತಿಲ್ಲ. ಒಂದು ವೇಳೆ ಇಂತಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ರೂ.20000 ರಿಂದ 50000 ವರೆಗೆ ದಂಡ ಮತ್ತು 2 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲು ಕಾನೂನಿನಡಿ ಅವಕಾಶವಿದೆ ಎಂದರು.
ಈ ನಿಟ್ಟಿನಲ್ಲಿ ಮಕ್ಕಳು ಕೆಲಸ ಮಾಡುವುದು ಕಂಡು ಬಂದಲ್ಲಿ ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ ಅಥವಾ ಮಕ್ಕಳ ಸಹಾಯವಾಣಿ (1098) ಗೆ ಕರೆ ಮಾಡಿ ಮಾಹಿತಿಯನ್ನು ನೀಡಬೇಕು ಹಾಗೂ ಅನಿಷ್ಠ ಪದ್ದತಿ ನಿರ್ಮೂಲನೆಗೆ ವಿದ್ಯಾರ್ಥಿಗಳು ಕೈಜೋಡಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಖಾನೆ ಮತ್ತು ಬಾಯ್ಲರಗಳ ಇಲಾಖೆಯ ಉಪ ನಿರ್ದೇಶಕರಾದ ರವೀಂದ್ರ ರಾಥೋಡ, ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ ಜೋಗೂರ ಮಾತನಾಡಿದರು.
ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ಸ್ಯಾಮ್ಯುಯೆಲ್ ಡೇನಿಯಲ್ ಅಧ್ಯಕ್ಷತೆ ವಹಿಸಿದ್ದರು. ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಅನೀಲ ಬಗಟಿ, ಅಡಿವೆಪ್ಪ ಗಡದವರ, ಡಿ.ಎಂ. ವಿನುತಾ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.Students join the elimination of child labor 

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.