ಉತ್ತಮ ಸಮಾಜಕ್ಕಾಗಿ

ಸುಗಮ-ನೈತಿಕ ಚುನಾವಣೆಗೆ ಕ್ರಮ ವಹಿಸಿ – ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ

Take action for a smooth and moral election - Deputy Commissioner S. Jiaullah

0

ಬೆಳಗಾವಿ:(news belgaum) ಸುಗಮ ಮತ್ತು ನೈತಿಕ ಚುನಾವಣೆ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸವದತ್ತಿ ತಾಲೂಕು ಪಂಚಾಯತಗೆ ಸೋಮವಾರ (ಫೆ.26) ಭೇಟಿ ನೀಡಿದ ಅವರು ವಿಧಾನಸಭೆ ಚುನಾವಣೆ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಮಾತನಾಡಿದರು.
ಮತಗಟ್ಟೆ ಸಂಖ್ಯೆ 166 ಹಾಗೂ 167 ಮತಗಟ್ಟೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮತದಾನಕ್ಕಾಗಿ ಅಲ್ಲಿ ಕೈಗೊಂಡಿರುವ ಸುಗಮ-ನೈತಿಕ ಚುನಾವಣೆಗೆ ಕ್ರಮ ವಹಿಸಿ - ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ- Tarun krantiಕಾರ್ಯಗಳನ್ನು ಪರಿಶೀಲಿಸಿದರು. ಅಂಗವಿಕಲರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಕ್ರಮ ವಹಿಸಬೇಕೆಂದು ಹೇಳಿದರು.
ಮತದಾನದ ಕುರಿತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕು. ಮುಕ್ತ ಮತದಾನಕ್ಕೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಿದರು.
ಬೋರ್‍ವೆಲ್‍ಗೆ ಅನುಮತಿ ಕಡ್ಡಾಯ:
ಸರ್ಕಾರಿ ಹಾಗೂ ಖಾಸಗಿ ಬೋರ್‍ವೆಲ್‍ಗಳನ್ನು ಕೊರೆಯಲು ಅನಯಮತಿ ಕಡ್ಡಾಯವಾಗಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಎಲ್ಲ ತಾಲೂಕು ಪಂಚಾಯತ ಹಾಗೂ ತಹಶೀಲ್ದಾರ ಕಚೇರಿಗಳಲ್ಲಿ ಈ ಕುರಿತು ಜಾಗೃತಿ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್.ಆರ್, ಬೈಲಹೊಂಗಲ ಉಪವಿಭಾಗಾಧಿಕಾರಿ ವಿಜಯಕುಮಾರ ಹೊನಕೆರೆ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್, ಕಲ್ಮನಿ, ಸವದತ್ತಿ ತಹಶೀಲ್ದಾರ, ಪ್ರೊಬೆಷನರಿ ತಹಶೀಲ್ದಾರ ಹಾಗೂ ಇನ್ನಿತರರು ಹಾಜರಿದ್ದರು.Take action for a smooth and moral election – Deputy Commissioner S. Jiaullah

                                                                             ಪ್ರಕಟಣೆ

             ಫೆ.27 ರಂದು ಮತದಾನ ಜಾಗೃತಿ ರ್ಯಾಲಿ

ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ-2018ರ ಅಂಗವಾಗಿ ಮತದಾನದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಫೆ.27 ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಚನ್ನಮ್ಮ ವೃತ್ತದಿಂದ ಕುಮಾರ ಗಂದರ್ವ ರಂಗಮಂದಿರದವರೆಗೆ ಜಾಗೃತಿ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್.ಆರ್ ಅವರು ರ್ಯಾಲಿ ನೇತೃತ್ವ ವಹಿಸುವರು. ರ್ಯಾಲಿಯಲ್ಲಿ ಸುಮಾರು 500 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ರ್ಯಾಲಿಯು ಚನ್ನಮ್ಮ ವೃತ್ತದಿಂದ ಆರಂಭವಾಗಿ, ಸಿವಿಲ್ ಆಸ್ಪತ್ರೆ, ಅಂಬೇಡ್ಕರ್ ರಸ್ತೆ ಹಾಗೂ ಕೊಲ್ಲಾಪುರ ಸರ್ಕಲ್ ಮಾರ್ಗವಾಗಿ ಕುಮಾರ ಗಂಧರ್ವ ರಂಗಮಂದಿರ ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ.Take action for a smooth and moral election – Deputy Commissioner S. Jiaullah

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.