ಉತ್ತಮ ಸಮಾಜಕ್ಕಾಗಿ

ಕೃಷಿ ಇಲಾಖೆಯಿಂದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

0

ಬೆಳಗಾವಿ: ಕೃಷಿ ಇಲಾಖೆಯು 2017-18ನೇ ಸಾಲಿನ ಹಿಂಗಾರು ಹಂಗಾಮಿಗೆ ಕೃಷಿ ಪ್ರಶಸ್ತಿ ಯೋಜನೆಯಡಿ ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಬಯಸುವ ರೈತರು ನಿಗದಿತ ನಮೂನೆಯ ಅರ್ಜಿಸಲ್ಲಿಸಬೇಕು. ಅರ್ಜಿಗಳನ್ನು ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಪಡೆಯಬಹುದಾಗಿದೆ. ಪೂರ್ಣ ವಿವರಗಳನ್ನು ದಾಖಲಾತಿಗಳೊಂದಿಗೆ ತಮ್ಮ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ನವೆಂಬರ್ 30 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಇವರನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.