ಉತ್ತಮ ಸಮಾಜಕ್ಕಾಗಿ

ಪೊಲೀಸ ಆಯುಕ್ತರ ಕಾರ್ಯಾಲಯ,ಪ್ರಕಟಣೆ

0

ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ದಿನಾಂಕ 13.11.2017 ರಿಂದ 24.11.2017ರ ವರೆಗೆ ವಿಧಾನ ಮಂಡಳಗಳ ಚಳಿಗಾಲದ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧ ಮತ್ತು ಅದರ 1 ಕಿ. ಮೀ. ಸುತ್ತಳತೆ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕಲಂ. 144 ಸಿಆರ್‍ಪಿಸಿ -1973 ಪ್ರಕಾರ ನಿಷೇದಾಜ್ಞೆಯನ್ನು ಹೊರಡಿಸಲಾಗಿದೆ. ಈ ನಿಷೇದಾಜ್ಞೆಯು ದಿನಾಂಕ 13.11.2017 ರಂದು 0600 ಗಂಟೆಯಿಂದ ದಿನಾಂಕ 17.11.2017 ರ ತನಕ ಮತ್ತು ದಿನಾಂಕ 20.11.2017 ರಂದು 0600 ಗಂಟೆಯಿಂದ 24.11.2017 ರಂದು ಸಾಯಂಕಾಲ 6.00 ಗಂಟೆಯತನಕ ಜಾರಿಯಲ್ಲಿರುತ್ತದೆ. ಈ ನಿಷೇದಾಜ್ಞೆಯ ವೇಳೆ

1) ಕಾನೂನು ಭಂಗ ಮಾಡುವ ಉದ್ದೇಶದಿಂದ ಮೆರವಣಿಗೆ, ಪ್ರತಿಭಟನೆ, ಸಭೆ, ಮುಷ್ಕರ, ಅಥವಾ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
2) ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆÂ್ಣ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಲು ಉಪಯೋಗಿಸಬಹುದಾದ ಯಾವುದೇ ಮಾರಕಾಸ್ತ್ರವನ್ನು ಹಿಡಿದು ತಿರುಗಾಡುವುದನ್ನು ಪ್ರತಿಭಂದಿಸಲಾಗಿದೆ.
3) ಕಲ್ಲುಗಳು, ಕ್ಷಾರ ಪದಾರ್ಥ ಇಲ್ಲವೆ ಸ್ಪೊಟಕ ವಸ್ತುಗಳು, ದಹನ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.
4) ಕಲ್ಲುಗಳು ಮತ್ತು ಎಸೆಯುವಂತಹ ವಸ್ತುಗಳನ್ನು, ಎಸೆಯುವ ಅಥವಾ ಚಿಮ್ಮುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
5) ಈ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೇ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿರುವ ವ್ಯಕ್ತಿಗಳು ಕಂಡುಬಂದಲ್ಲಿ ಅವರುಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.
6) ವ್ಯಕ್ತಿಗಳ ಅಥವಾ ಅವರ ಆಕೃತಿ, ಪ್ರತಿಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಮತ್ತು ಅವುಗಳನ್ನು ಸುಡುವುದನ್ನು ಪ್ರತಿಬಂಧಿಸಲಾಗಿದೆ.

7) ಸಾರ್ವಜನಿಕ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು. ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಮತ್ತು ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
8) ಸಾರ್ವಜನಿಕವಾಗಿ ಯಾವುದೇ ವ್ಯಕ್ತಿಯು ಪ್ರಚೋದನಾತ್ಮಕ ಭಾಷಣ ಹಾಗೂ ಉದ್ರೇಕಕಾರಿ ಹಾಡುಗಳು, ಮತ್ತು ವ್ಯಕ್ತಿಗಳ ತೇಜೋವಧೆ ಮಾಡುವುದಾಗಲಿ, ಪ್ರತಿಕೃತಿಗಳನ್ನು ಪ್ರದರ್ಶಿಸುವುದಾಗಲಿ ಸಾರ್ವಜನಿಕರ ನೈತಿಕತೆಗೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
9) ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಮರಾಠಿ ಭಾಷಿಕ ಜನರ ನಡುವೆ ದ್ವೇಷಭಾವನೆಯನ್ನು ಬಿಂಬಿಸುವ ಯಾವುದೇ ಆಕ್ಷೆಪರ್ಹ, ಪ್ರಚೋದನಾತ್ಮಕ ಭಾಷಣ ಮಾಡುವುದಾಗಲಿ, ಕೃತಿ ರಚಿಸುವುದಾಗಲಿ, ಚಿತ್ರ ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ.
10) ಈ ಆಜ್ಞೆಯು ಮಾನವ ಶವದ ಅಂತ್ಯ ಕ್ರಿಯೆಯ ಮೆರವಣಿಗೆಗಳಿಗೆ ಅನ್ವಯಿಸುವುದಿಲ್ಲ.

ಎಂದು ಪೊಲೀಸ್ ಆಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ.

Leave A Reply

 Click this button or press Ctrl+G to toggle between Kannada and English

Your email address will not be published.