ಉತ್ತಮ ಸಮಾಜಕ್ಕಾಗಿ

ಹೊನಗಾ ಬಳಿ ಭೀಕರ ಅಪಘಾತ ಇಬ್ಬರು ಸ್ಥಳದಲ್ಲಿಯೇ ಸಾವು

0

ಬೆಳಗಾವಿ: ಕಾಕತಿ ಸಮೀಪದ ಹೊನಗಾ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಕಬ್ಬಿನ ಟ್ರ್ಯಾಕ್ಟರ್ ಗೆ ಟವೆರಾ ವಾಹನ ಹಿಂದಿನಿಂದ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತ ಪಟ್ಟು 8 ಜನ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಕೊಲ್ಹಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹಾವೇರಿಯಿಂದ  ಟವೆರಾದಲ್ಲಿ ತೆರಳುತಿದ್ದಾಗ ಕಬ್ಬು ತುಂಬಿದ ಟ್ರಾಕ್ಟರ್ ಗೆ ಹಿಂದಿನಿಂದ ರಭಸವಾಗಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಮಸ್ಯೆ ಉಂಟಾಗಿತ್ತು. ಇನ್ನೂ ವರೆಗೂ ಮೃತರ ಹೆಸರು ತಿಳಿದು ಬಂದಿಲ್ಲ. ಗಾಯಗೊಂಡವರೆಲ್ಲರನ್ನೂ ಬೆಳಗಾವಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: