ಉತ್ತಮ ಸಮಾಜಕ್ಕಾಗಿ

ಹೈಕೋರ್ಟ್ ಶಾಕ್: ಮುಶ್ಕರ ಬಿಟ್ಟು ಕೆಲಸಕ್ಕೆ ಮರಳಲು ಸಲಹೆ

0

ಬೆಂಗಳೂರು/ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸುತ್ತಿರುವ ಖಾಸಗಿ ಆಸ್ಪತ್ರೆಗಳ ವೈದ್ಯರಿಗೆ ಇಂದು ಹೈಕೋರ್ಟ್ ಶಾಕ್ ನೀಡಿದೆ. ತಕ್ಷಣದಿಂದಲೇ ಮುಷ್ಕರ ನಿಲ್ಲಿಸಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಸೂಚನೆ ನೀಡಿದೆ. ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ಸೂಚನೆ ನೀಡಿದೆ. ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್, ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರ ವಿಭಾಗೀಯ ಪೀಠ ಮಧ್ಯಾಹ್ನ ಈ ಸೂಚನೆ ಕೊಟ್ಟಿದೆ.

ಕಾಲಾವಕಾಶ ಕೇಳಿದ ಖಾಸಗಿ ವೈದ್ಯರ ಪರ ವಕೀಲರ ಮನವಿಯನ್ನು ಕೋರ್ಟ್ ತಳ್ಳಿ ಹಾಕಿದ್ದು, ಕರ್ತವ್ಯಕ್ಕೆ ಹಾಜರಾಗಿ, ನಿಮ್ಮ ಸಮಸ್ಯೆ ಬಗ್ಗೆ ನಂತರ ಗಮನ ಹರಿಸೋಣ ಎಂದಿದೆ. ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ನ್ಯಾಯಲಯವೇ ಮುಂದಿನ ತೀರ್ಮಾನ ಕೈಗೊಳ್ಳುತ್ತದೆ ಎಂದು ಇದೇ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಈ ಮಾಹಿತಿ ಸಿಕ್ಕ ತಕ್ಷಣ ಬೆಳಗಾವಿಯಲ್ಲಿ ಪ್ರತಿಭಟನಾ ನಿರತ ವೈದ್ಯರಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದ್ದು, ಅವರ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡಬೇಕ್ಕಾಗೀದೆ.

Leave A Reply

 Click this button or press Ctrl+G to toggle between Kannada and English

Your email address will not be published.