ಉತ್ತಮ ಸಮಾಜಕ್ಕಾಗಿ

ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ದೊರಕದೆ ಇದ್ದರೂ ಪಕ್ಷ ಸಂಘಟಿಸುತ್ತ ಕಾರ್ಯಕರ್ತನಾಗಿ ಮುಂದುವರೆಯುತ್ತೇನೆ.

0

ಬೆಳಗಾವಿ:ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅದು ಬಿಜೆಪಿಯಿಂದ ಮಾತ್ರ ಎಂದು ಬಿಜೆಪಿ ಮುಖಂಡ, ಉದ್ಯಮಿ ಶಶಿಕಾಂತ ಸಿದ್ನಾಳ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಮಾಡಲು ಪಣ ತೊಟ್ಟಿರುವ ಮಾಜಿ ಮುಖ್ಯಮಂತ್ರಿ, ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಅವರ ಕೈಯನ್ನು ಬಲ ಪಡೆಸಲು ತಾವು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸ್ಪರ್ಧೆ ನಡೆಸುವೆ ಎಂದಿದ್ದಾರೆ.
ಬಿಜೆಪಿ ಪಕ್ಷದಲ್ಲಿನ ನಿಷ್ಠೆ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳ ಸಾಧನೆಯನ್ನು ಗುರುತಿಸಿ ಬಿಜೆಪಿ ಪಕ್ಷ ಬೆಳಗಾವಿ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡುತ್ತದೆ ಎಂಬ ವಿಶ್ವಾಸ ತಮಗಿದೆ. ಒಂದು ವೇಳೆ ಟಿಕೆಟ್ ದೊರಕದೆ ಇದ್ದರೂ ಪ್ರಾಮಾಣಿಕವಾಗಿ ಪಕ್ಷ ಸಂಘಟಿಸುತ್ತ ಕಾರ್ಯಕರ್ತನಾಗಿ ಮುಂದುವರೆಯುತ್ತೇನೆ. ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಬದ್ಧನಾಗಿರುತ್ತೇನೆ. ಪಕ್ಷ ಹಾಗೂ ಅದರ ಸಿದ್ಧಾಂತಕ್ಕೆ ತಲೆ ಬಾಗುತ್ತೇನೆ ಎಂದು ಶಶಿಕಾಂತ ಸಿದ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: