ಉತ್ತಮ ಸಮಾಜಕ್ಕಾಗಿ

ಬೆಂಗಳೂರಿನಲ್ಲಿ ಒಂದು ಲಕ್ಷ ಮನೆಗಳ ನಿರ್ಮಾಣ: ಸಚಿವ ಎಂ.ಕೃಷ್ಣಪ್ಪ

0

ಬೆಳಗಾವಿ, ಚಿತ್ರರಂಗದ ಕಾರ್ಮಿಕರು ಸೇರಿದಂತೆ ಆರ್ಥಿಕವಾಗಿ ಹಿಂದುಳಿದ ವಸತಿ ರಹಿತ ಕುಟುಂಬಗಳಿಗಾಗಿ ಬೆಂಗಳೂರು ನಗರದಲ್ಲಿ ಒಂದು ಲಕ್ಷ ಮನೆಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ವಸತಿ ಸಚಿವ ಎಂ.ಕೃಷ್ಣಪ್ಪ ತಿಳಿಸಿದ್ದಾರೆ.
ವಿಧಾನ ಪರಿಷತ್‍ನಲ್ಲಿ ಡಾ.ಜಯಮಾಲ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆರ್ಥಿಕವಾಗಿ ಹಿಂದುಳಿದ ವಸತಿ ರಹಿತ ಕುಟುಂಬಗಳಿಗಾಗಿ ಬೆಂಗಳೂರು ನಗರದಲ್ಲಿ ಒಂದು ಲಕ್ಷ ಬಹುಮಹಡಿ ಮನೆಗಳನ್ನು ನಿರ್ಮಿಸಿ ವಸತಿ ಸೌಕರ್ಯ ಒದಗಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಈಗಗಲೇ 431 ಎಕರೆ ಭೂಮಿಯನ್ನು ಖರೀದಿಸಲಾಗಿದೆ ಎಂದು ಅವರು ತಿಳಿಸಿದರು.
ಸದರಿ ಯೋಜನೆಯಲ್ಲಿ ಫಲಾನುಭವಿಗಳನ್ನು ಲಾಟರಿ ಮೂಲಕ ಅಯ್ಕೆ ಮಾಡಲಾಗುವುದು. ಚಿತ್ರರಂಗದ ಕಾರ್ಮಿಕರೂ ಸಹ ಅರ್ಜಿ ಆಹ್ವಾನಿಸಿದ ಸಂದರ್ಭದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದರು.
ಅಸಹಾಯಕ ಜೀವನ ನಡೆಸುತ್ತಿರುವ ದಮನಿತ ಮಹಿಳೆಯರಿಗೆ, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಸಾಮಾಜಿಕವಾಗಿ ನಿರ್ಲಕ್ಷ್ಯಕ್ಕೊಳಗಾದ 14 ವಿಶೇಷ ವರ್ಗಗಳಿಗೆ ದೇವರಾಜ ಅರಸು ವಸತಿ ಯೋಜನೆಯಡಿ 575 ಫಲನುಭವಿಗಳಿಗೆ ಮನೆಗಳನ್ನು ಮಂಜೂರು ಮಾಡಲಾಗಿದೆ. 2017-18ನೇ ಸಾಲಿನಲ್ಲಿ 69000 ಮನೆಗಳ ಗುರಿ ಹೊಂದಿದ್ದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರವಾರು 48300 ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

Leave A Reply

 Click this button or press Ctrl+G to toggle between Kannada and English

Your email address will not be published.