ಉತ್ತಮ ಸಮಾಜಕ್ಕಾಗಿ

ಬೆಳಗಾವಿಯಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಡಿಸೆಂಬರ್‍ನಲ್ಲಿ ಅಡಿಗಲ್ಲು -ಸಚಿವ ಎ. ಮಂಜು

0

ಬೆಳಗಾವಿ: ಬೆಳಗಾವಿ ನಗರದಲ್ಲಿ ಪಶು ಇಲಾಖೆಯಿಂದ ರೂ.3.60 ಕೋಟಿ ವೆಚ್ಚದಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಡಿಸೆಂಬರ್ ತಿಂಗಳಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಎ. ಮಂಜು ಅವರು ತಿಳಿಸಿದರು.
ನಗರದ ಗೋಂಧಳಿ ಗಲ್ಲಿಯಲ್ಲಿರುವ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯದ ಪ್ರತಿ ಜಿಲ್ಲೆಗೊಂದು ಪಶು ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರವನ್ನು ನಿರ್ಮಿಸಲಾಗುವುದು. ಈ ಮೂಲಕ ಕುರಿ ಹಾಗೂ ಮೇಕೆಗಳ ಆರೋಗ್ಯಕ್ಕೆ ಹೆಚ್ಚಿನ ಲಕ್ಷ ವಹಿಸಲಾಗುವುದು ಹೇಳಿದರು.
ಈಗಾಗಲೇ ರೂ. 50 ಲಕ್ಷ ವೆಚ್ಚದಲ್ಲಿ ಕರ್ನಾಟಕ ಸಹಕಾರಿ ಕುಕ್ಕುಟ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಜಿಲ್ಲೆಯ ಹಿರೇಬಾಗೇವಾಡಿ ಗ್ರಾಮದ ವ್ಯಾಪ್ತಿಯಲ್ಲಿ ರೂ. 7.50 ಕೋಟಿ ವೆಚ್ಚದಲ್ಲಿ ಕುರಿ ಮತ್ತು ಮೇಕೆಗಳ ಆಧುನಿಕ ವಧಾಗಾರ ಸ್ಥಾಪನೆಗೆ 17-18ರಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.
ರೈತರು ಹಾಗೂ ಬಡಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಯಿಂದ ಅನೇಕ ಯೋಜನೆಗಳನ್ನು ರೂಪಿಸಲಾಗಿದ್ದು ಜನರು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಬೇಕು ಸಲಹೆ ನೀಡಿದರು.
ಕೆಎಂಎಪ್ ವತಿಯಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು ಇಂದು ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿದೆ. ಇದಕ್ಕೆ ರೈತರು ಹಾಗೂ ಹಾಲು ಉತ್ಪಾದಕರ ಸಹಕಾರವೇ ಕಾರಣ ಎಂದು ಹೇಳಿದರು.
ರಾಜ್ಯ ಪಶುಸಂಗೋಪನಾ ಇಲಾಖೆಯ ಆಯುಕ್ತರಾದ ಡಾ. ಶೇಖರ ಕಮಿಷನರ್, ಉಪನಿರ್ದೇಶಕರಾದ ಡಾ. ಬಿ.ಸಿ. ಜಂಬಗಿ, ಜಿಲ್ಲಾ ಪಶು ಇಲಾಖೆಯ ಉಪನಿರ್ದೇಶಕರಾದ ಡಾ. ಚಂದ್ರಶೇಖರ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.