ಉತ್ತಮ ಸಮಾಜಕ್ಕಾಗಿ

ವಿವಿದ ಪ್ರಕಟಣೆಗಳು

0

ಪ್ರಧಾನಮಂತ್ರಿ ಫಸಲ್ ಬಿಮಾ ಕಂತು ಪಾವತಿಸಲು ಸೂಚನೆ
ಬೆಳಗಾವಿ:  ಬೆಳಗಾವಿ ಜಿಲ್ಲೆಯಲ್ಲಿ 2017ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಹವಾಮಾನ ಆಧಾರಿತ ವಿಮಾ ಯೋಜನೆಯನ್ನು ಜಾರಿಗೊಳಿಸಲಾದ್ದು, ರೈತರು ತಮ್ಮ ಹೋಬಳಿಗೆ ಹಾಗೂ ಗ್ರಾಮ ಪಂಚಾಯತ ಸಂಬಂಧಿಸಿದ ಬೆಳೆಗಳ ಬಗ್ಗೆ ಮಾಹಿತಿಯನ್ನು ಬ್ಯಾಂಕುಗಳು ಅಥವಾ ಕೃಷಿ ಇಲಾಖೆಯ ಕಚೇರಿಯಲ್ಲಿ ಪಡೆದು ತಮ್ಮ ವ್ಯಾಪ್ತಿಯ ಬ್ಯಾಂಕ್ ಅಥವಾ ಸಹಕಾರಿ ಬ್ಯಾಂಕುಗಳಲ್ಲಿ ಬೆಳೆ ವಿಮೆ ಕಂತು ತುಂಬಬಹುದಾಗಿದೆ.
ಹಿಂಗಾರು ಹಂಗಾಮಿನ ಇತರೆ ಅಧಿಸೂಚಿತ ಬೆಳೆಗಳಿಗೆ ವಿಮೆ ಕಂತನ್ನು ಪಾವತಿಸಲು ನವೆಂಬರ್.30 ಕೊನೆಯ ದಿನವಾಗಿರುತ್ತದೆ ಹಾಗೂ ಮುಸಕಿನ ಜೋಳ (ನೀರಾವರಿ) ಮತ್ತು ಗೋಧಿ (ನೀರಾವರಿ) ಬೆಳೆಗಳಿಗೆ ವಿಮೆ ಕಂತು ಪಾವತಿಸಲು ಡಿಸೆಂಬರ್.15 ಕೊನೆಯ ದಿನವಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರಕಲಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ
ಬೆಳಗಾವಿ:  2017-18 ನೇ ಸಾಲಿನಲ್ಲಿ ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದಿನ ವರ್ಷದಲ್ಲಿ ಹೆಚ್ಚು ಅಂಕ ಪಡೆದಿರುವ ಅರ್ಹ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಗೆ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿ ವೇತನ ನೀಡಲಾಗುವುದು.
ಸಂಸ್ಥೆಯ ಮುಖ್ಯಸ್ಥರ ದೃಢೀಕರಣದೊಂದಿಗೆ ಡಿಸೆಂಬರ್ 12ರೊಳಗಾಗಿ ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ 2ನೇ ಮಹಡಿ,ಜೆ.ಸಿ.ರಸ್ತೆ,ಬೆಂಗಳೂರು-560002ಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ www.lalitkalakarnataka.org  ಅಥವಾ email- kla.karnataka@gmail.com   ಹಾಗೂ ದೂರವಾಣಿ ಸಂಖ್ಯೆ 080-22480297ಗೆ ಸಂಪರ್ಕಿಸಬಹುದೆಂದುಅಕಾಡೆಮಿಯ ರಿಜಿಸ್ಟ್ರಾರ್ ಇಂದ್ರಮ್.ಎಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೆಂಬರ್ 30ರ ವರೆಗೆ ಅಖಿಲ ಭಾರತ ವೃತ್ತಿ ಪರೀಕ್ಷೆ ನಡೆಲಿವೆ
ಬೆಳಗಾವಿ:  ಅಖಿಲ ಭಾರತ ವೃತ್ತಿ ಪರೀಕ್ಷೆಗಳು ನವೆಂಬರ್.22 ರಿಂದ ಪ್ರಾರಂಭವಾಗಿದ್ದು, ನವೆಂಬರ್.30ರ ವರೆಗೆ ಬೆಳಗಾವಿ ಜಿಲ್ಲೆಯ-1 ಪರೀಕ್ಷಾ ಕೆಂದ್ರದಲ್ಲಿ ನಡೆಯಲಿವೆ. ಕಾರಣ ಪರೀಕ್ಷೆಯ ಸ್ಥಳದ 200 ಮೀಟರ್ ಸುತ್ತಮುತ್ತ ಸ್ಥಳವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ತಹಶೀಲ್ದಾರ ಮತ್ತು ತಾಲೂಕಾ ಕಾರ್ಯನಿರ್ವಾಹಕ ದಂಡಾಧಿಕಾರಿ ಮುಂಜುಳಾ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ.25 ರಂದು ಸಿರಿಧಾನ್ಯ ಮೇಳ
ಬೆಳಗಾವಿ: ಇಲ್ಲಿನ ಶಿವಬಸವ ನಗರದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಮೈದಾನದಲ್ಲಿ ಜಿಲ್ಲಾ ಪಂಚಾಯತ ಹಾಗೂ ಬೆಳಗಾವಿ, ಬಾಗಲಕೋಟ, ವಿಜಯಪುರ, ಉತ್ತರ ಕನ್ನಡ ಜಿಲ್ಲೆಗಳ ಕೃಷಿ ಇಲಾಖೆ ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನವೆಂಬರ್.25 ಹಾಗೂ 26 ರಂದು ಸಾವಯವ ಮತ್ತು ಸಿರಿಧಾನ್ಯಗಳ ವಾಣಿಜ್ಯ ಮೇಳವನ್ನು ಆಯೋಜಿಸಲಾಗಿದೆ.
ನವೆಂಬರ್.25 ರಂದು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಕೈಗಾರಿಕೆ ಸಚಿವ ಆರ್.ವಿ. ದೇಶಪಾಂಡೆ, ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಕುಡಿಯುವ ನೀರು ಮತ್ತು ನೈರ್ಮಲ್ಯ ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಕೇಂದ್ರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಅನಂತಕುಮಾರ ಹೆಗಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ ಉಮಾಶ್ರೀ, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಸೇರಿದಂತೆ ಶಾಸಕರು, ಸಂಸದರು, ಜನಪ್ರತಿನಿಧಿಗಳು ಇನ್ನಿತರ ಗಣ್ಯರು ಪಾಲ್ಗೊಳ್ಳುವರು.

Leave A Reply

 Click this button or press Ctrl+G to toggle between Kannada and English

Your email address will not be published.