ಉತ್ತಮ ಸಮಾಜಕ್ಕಾಗಿ

ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ಯುವಕರ ಪಾತ್ರ ಮುಖ್ಯ -ಸಾರಿಗೆ ಸಚಿವ ಎಚ್.ಎಂ. ರೇವಣ್ಣ

0

ಬೆಳಗಾವಿ: ಒಂದು ರಾಷ್ಟ್ರವು ಸಮಗ್ರವಾಗಿ ಅಭಿವೃದ್ಧಿ ಹೊಂದಬೇಕಾದರೆ ಯುವಕರ ಪಾತ್ರ ಪ್ರಮುಖವಾಗಿದೆ. ಇಂದಿನ ಯುವಕರು ವಯಸ್ಸಿನ ಹುಮ್ಮಸ್ಸಿನಲ್ಲಿ ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸಿ ಅಪಘಾತಕ್ಕೆ ಬಲಿಯಾಗದೇ, ಸಾರಿಗೆ ಹಾಗೂ ಪೊಲೀಸ್ ಇಲಾಖೆಯ ನಿಯಮಗಳನ್ನು ಪಾಲಿಸಿ ತಮ್ಮ ಜೀವದ ಸುರಕ್ಷತೆ ವಹಿಸಬೇಕೆಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಅವರು ಹೇಳಿದರು.
ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಯಲದ ಸಭಾಗ್ರಹದಲ್ಲಿ ಉಪಸಾರಿಗೆ ಆಯುಕ್ತರು, ಹಿರಿಯ ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ವಿಶ್ವವಿದ್ಯಾಯಲದ ಸಂಯುಕ್ತ ಆಶ್ರಯದಲ್ಲಿ ಗುರುವಾರ (ನ.23) ಏರ್ಪಡಿಸಿದ್ದ ರಸ್ತೆ ಸುರಕ್ಷತೆ ಹಾಗೂ ವಾಯುಮಾಲಿನ್ಯ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
16 ರಿಂದ 35 ವರ್ಷದ ಯುವಕರು ಅಪಘಾತದಲ್ಲಿ ಹೆಚ್ಚು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂದು ಜನರು ಎಲ್ಲದಕ್ಕೂ ಬೆಲೆ ನೀಡದತ್ತಿದ್ದಾರೆ ಆದರೆ ತಮ್ಮ ಜೀವಕ್ಕೆ ಮಾತ್ರ ಬೆಲೆ ನೀಡುತ್ತಿಲ್ಲ. ಅಪಘಾತಕ್ಕೆ ಕಡಿವಾಣ ಹಾಕಲು ಸಾರಿಗೆ ಮತ್ತು ಪೊಲೀಸ್ ಇಲಾಖೆಯು ಹಲವಾರು ನಿಯಮಗಳನ್ನು ರೂಪಿಸಿದ್ದರೂ ಸಾರ್ವಜನಿಕರು ಅದನ್ನು ಪಾಲಿಸುತ್ತಿಲ್ಲ ಎಂದು ಹೇಳಿದರು.
ದೆಹಲಿ ಸೇರಿದಂತೆ ಇತರ ಹೊರ ರಾಜ್ಯಗಳಲ್ಲಿ ವಾಯುಮಾಲಿನ್ಯದಿಂದ ದಟ್ಟ ಹೊಗೆ ಆವರಿಸಿ ಅಪಘಾತದ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಮುಂಜಾಗ್ರತವಾಗಿ ಪರಿಸರ ರಕ್ಷಣೆಗೆ ನಾವೆಲ್ಲರೂ ಮುಂದಾಗಬೇಕಿದೆ. ಯುವಕರು ತಮಗೆ ಸಿಕ್ಕ ಅವಕಾಶವನ್ನು ಸದುಪಯೋಗಿಸಿಕೊಂಡು ಉತ್ತಮ ಸಾಧನೆ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ ಮಾತನಾಡಿ, ಸಾರಿಗೆ ನಿಯಮವನ್ನು ಪಾಲಿಸದೇ ಇರುವದರಿಂದ ದೇಶದಲ್ಲಿ ಒಟ್ಟು 1.5 ಲಕ್ಷ ಜನ ಅಪಘಾತದಲ್ಲಿ ಮರಣ ಹೊಂದಿದ್ದಾರೆ. ಮತ್ತು 1 ಲಕ್ಷ ಜನರು ಗಾಯಗೊಂಡಿದ್ದಾರೆ. ರಾಜ್ಯದ 10 ಸಾವಿರ ಜನರು ಅಪಘಾತದಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಶೇ.70ರಷ್ಟು ಅಪಘಾತಗಳು ದ್ವಿಚಕ್ರ ವಾಹನಗಳಿಂದ ಸಂಭವಿಸುತ್ತಿವೆ. ಹಿಂಬದಿ ಮತ್ತು ಮುಂಬದಿ ಸವಾರರು ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದರು ಬೈಕ್ ಸವಾರರು ಪಾಲಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಸಂಚರಿಸುವಾಗ ಸವಾರರು ಎಚ್ಚರಿಕೆ ವಹಿಸಬೇಕೆಂದು ಹೇಳಿದರು.
ಅಪಘಾತವನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದ ಒಟ್ಟು 6.62 ಲಕ್ಷ ಸಾವಿರ ಕಿ.ಮೀ. ರಸ್ತೆಯನ್ನು ದುರಸ್ಥಿಗೊಳಿಸಬೇಕಿದೆ. ಇದಕ್ಕೆ ಪೂರಕವಾಗಿ ಪಿ.ಡಬ್ಲೂಡಿ, ಸಾರಿಗೆ ಇಲಾಖೆಯೊಂದಿಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಹಾಗೂ ವೇದಿಕೆಯಲ್ಲಿದ್ದ ಗಣ್ಯರು ವಾಯುಮಾಲಿನ್ಯ ನಿಯಂತ್ರಣ ಕುರಿತ ಜಾಗೃತಿ ಕರಪತ್ರಗಳನ್ನು ಬಿಡುಗಡೆÉಗೊಳಿಸಿದರು. ಪ್ರೊ. ಡಾ. ಗಿರೀಶ ಚಂದ್ರ ಅವರು ರಸ್ತೆ ಸುಕ್ಷತೆಯ ಬಗ್ಗೆ ಮತ್ತು ಪ್ರೊ. ಬಿ.ಬಿ. ನಾಯಕ್ ಅವರು ವಾಯುಮಾಲಿನ್ಯ ನಿಯಂತ್ರಣದ ಬಗ್ಗೆ ಉಪನ್ಯಾಸ ನೀಡಿದರು. ವಿಟಿಯು ಕಲಪತಿ ಡಾ. ಕರಿಸಿದ್ದಪ್ಪ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಧಾರವಾಡ ಅಪರ ಸಾರಿಗೆ ಆಯುಕ್ತ ಮಾರುತಿ ಸಾಂಬ್ರಾಣಿ ಪ್ರಾರ್ಥಿಸಿದರು. ವಿಟಿಯು ಸಹಾಯಕ ಪ್ರಾಧ್ಯಾಪಕಿ ಸರಸ್ವತಿ ಬೂಷಣನೂರ ನಿರೂಪಿಸಿದರು. ಬೆಳಗಾವಿಯ ಜಂಟಿ ಸಾರಿಗೆ ಆಯುಕ್ತ ಉಮಾಶಂಕರ್ ಬಿ.ಪಿ. ಅವರು ವಂದಿಸಿದರು.

Leave A Reply

 Click this button or press Ctrl+G to toggle between Kannada and English

Your email address will not be published.