ಉತ್ತಮ ಸಮಾಜಕ್ಕಾಗಿ

ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ

0

ಬೆಳಗಾವಿ: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಡಿ.3 ರಂದು ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಬೆಳಗಾವಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಇಲ್ಲಿನ ವಿದ್ಯಾಗಿರಿಯ ಕಿವುಡ ಮಕ್ಕಳ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ.
ಸಂಗೀತಾ ಸೈದಾಪುರ 100 ಮೀ. ಓಟದಲ್ಲಿ ದ್ವಿತೀಯ ಹಾಗೂ ಗುಂಡು ಎಸೆತದಲ್ಲಿ ತೃತೀಯ ಸ್ಥಾನ, ಭಾಗ್ಯಶ್ರೀ ಜವೇಜರ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ, ಭಾಗವ್ವ ಅನವಾಲ ಗೋಣಿಚೀಲ ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನಿತರ ಸ್ಪರ್ಧೆಗಳಲ್ಲಿಯೂ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಪ್ರದರ್ಶನ ನೀಡಿದ್ದಾರೆ.
ಪ್ರಶಸ್ತಿ ವಿಜೇತ ಮಕ್ಕಳನ್ನು ಕಿವುಡ ಮಕ್ಕಳ ಸರ್ಕಾರಿ ಶಾಲೆಯ ಅಧೀಕ್ಷಕರಾದ ಆರ್.ಬಿ. ಬನಶಂಕರಿ, ಪ್ರಧಾನ ಗುರುಮಾತೆ ಶ್ರೀಮತಿ ಗಾಯತ್ರಿ ಕಮ್ಮಾರ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.