ಉತ್ತಮ ಸಮಾಜಕ್ಕಾಗಿ

ಕ್ಷಯರೋಗ ಪತ್ತೆ-ಚಿಕಿತ್ಸಾ ಆಂದೋಲನಕ್ಕೆ ಚಾಲನೆ

0

ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ (ಡಿ.4) ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವಾಹಕ ಅಧಿಕಾರಿಗಳಾದ ರಾಮಚಂದ್ರನ್.ಆರ್. ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಆಯ್ದ ಸೂಕ್ಷ್ಮ ಪ್ರದೇಶಗಳಲ್ಲಿ ಕ್ಷಯರೋಗವನ್ನು ಪತ್ತೆ ಹಚ್ಚಲು 964 ಸೂಕ್ಷ್ಮಪ್ರದೇಶಗಳನ್ನು ಗುರುತಿಸಲಾಗಿದ್ದು, ಒಟ್ಟಾರೆ ಆರೋಗ್ಯ ಸಹಾಯಕರ 1200 ಕ್ಷಯರೋಗ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಆಯ್ದ ಸೂಕ್ಷ್ಮ ಪ್ರದೇಶಗಳ ಮನೆಗಳಿಗೆ ಭೇಟಿ ನೀಡಿ ಎಲ್ಲ ಕುಟುಂಬ ಸದಸ್ಯರ ತಪಾಸಣೆ ಮಾಡಲಿದ್ದು, ಕ್ಷಯರೋಗದ ಲಕ್ಷಣಗಳುಳ್ಳ ವ್ಯಕ್ತಿಗಳು ಕಂಡು ಬಂದಲ್ಲಿ ಸ್ಥಳದಲ್ಲೇ ಕಫದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆ ಮಾಡುವದರ ಮೂಲಕ ಕ್ಷಯರೋಗಕ್ಕೆ ಚಿಕಿತ್ಸೆ ನೀಡಲಿದ್ದಾರೆ. ರೋಗಿಗಳು ಈ ಆಂದೋಲನದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ. ಎಸ್. ವಿ. ಮುನ್ಯಾಳ, ಡಾ. ಶೈಲಜಾ ತಮ್ಮಣ್ಣವರ, ಡಾ. ಬಿ. ಎನ್. ತುಕ್ಕಾರ, ಜಿಲ್ಲಾ ಸಮೀಕ್ಷಣಾಧಿಕಾರಿಗಳು, ಡಾ.ಎಂ.ಎಸ್. ಪಲ್ಲೇದ, ಡಾ. ಎಸ್. ಆರ್. ನಾಂದ್ರೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಜಾಗೃತಿ ಜಾಥಾ ಜರುಗಿತು. ವಿವಿಧ ಕಾಲೇಜು, ಅರೆ ಸರ್ಕಾರಿ ಸಂಸ್ಥೆಗಳು, ಸೇವಾ ಸಂಸ್ಥೆಗಳು ಹಾಗೂ ಇನ್ನಿತರ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.